ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ಇಮ್ರಾನ್‍ಖಾನ್ ಅವರ ವಿರುದ್ಧ ಅವಿಶ್ವಾಸ ನಿಲುವಳಿ ಮಂಡನೆಗೆ ನೋಟಿಸ್ ನೀಡಲಾಗಿದ್ದು, ಅವಿಶ್ವಾಸ ನಿರ್ಣಯದ ಮೇಲೆ ಮತ ನಡೆಸಲು ಮಾರ್ಚ್ 28ರಂದು ದಿನಾಂಕ ನಿಗದಿ ಮಾಡಲಾಗಿದೆ.
ಪಾಕ್ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧದ ಅವಿಶ್ವಾಸ ನಿರ್ಣಯ ಮಂಡನೆಗೆ ದಿನಾಂಕ ನಿಗದಿಯಾಗುತ್ತಿದ್ದಂತೆ, ಆಡಳಿತಾರೂಢ ಪಿಟಿಐ ಪಕ್ಷದ ಹಲವಾರು ಅತೃಪ್ತ ರಾಷ್ಟ್ರೀಯ ಅಸೆಂಬ್ಲಿ (ಎಂಎನ್‍ಎ) ಸದಸ್ಯರು ತಾವು ಆಡಳಿತ ಪಕ್ಷದಿಂದ ಬೇರ್ಪಟ್ಟಿದ್ದೇವೆ ಮತ್ತು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂಬುದಾಗಿಯೂ ಹೇಳಿಕೆ ನೀಡಿದ್ದಾರೆ. ಅಲ್ಲದೆ, ಈಗಾಗಲೇ ಮೂವರು ಸಚಿವರು ಪಿಟಿಐ ತೊರೆದಿದ್ದಾರೆ. ಅಲ್ಲದೆ, ಸ್ವಪಕ್ಷದ 24 ಸದಸ್ಯರೂ ಅವಿಶ್ವಾಸ ನಿರ್ಣಯ ಪರವಾಗಿ ಮತ ಚಲಾಯಿಸವುದಕ್ಕಾಗಿ ಬೆದರಿಕೆ ಒಡ್ಡಿದ್ದಾರೆ. ಈ ನಡುವೆ ಪಾಕ್ ಪ್ರಧಾನಿಯವರ ಅಧಿಕಾರ ಉಳಿಯುತ್ತದೆಯೇ ಎಂಬುದು ಪ್ರಶ್ನೆಯಾಗಿದೆ. ಇದನ್ನೂ ಓದಿ: ಪಬ್ಲಿಕ್ ಪ್ಲೇಸ್‍ನಲ್ಲಿ ಪೊಲೀಸ್‍ಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
Advertisement
Advertisement
ಪಾಕಿಸ್ತಾನದ ಸಂಸತ್ತಿನಲ್ಲಿ ಇಮ್ರಾನ್ ಖಾನ್ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯಕ್ಕೆ ದಿನಾಂಕ ನಿಗದಿಮಾಡುತ್ತಿದ್ದಂತೆ ಆಡಳಿತಾರೂಢ ಪಾಕಿಸ್ತಾನ್ ತೆಹ್ರೀಕ್ -ಎ-ಇನ್ಸಾಫ್ ಪಕ್ಷದ ಸುಮಾರು 20ಕ್ಕೂ ಹೆಚ್ಚು ಸಂಸದರು ಬಂಡಾಯ ಎದ್ದಿದ್ದಾರೆ. ವಿಪಕ್ಷಗಳು ಸಂಸದರ ಕುದುರೆ ವ್ಯಾಪಾರ ನಡೆಸುತ್ತಿವೆ ಎಂದು ಇಮ್ರಾನ್ ಖಾನ್ ನೇತೃತ್ವದ ಸರ್ಕಾರ ಆರೋಪಿಸಿದೆ. ಇದನ್ನೂ ಓದಿ: ‘ದಿ ಕಾಶ್ಮೀರ್ ಫೈಲ್ಸ್’ ಕುರಿತು ಪ್ರಕಾಶ್ ರೈ ಮಾಡಿದ ಟ್ವೀಟ್ ಗೆ ಜಗ್ಗಾಟ ಶುರು
Advertisement
ಮಾರ್ಚ್ 8 ರಂದು ನಡೆದ ಅವಿಶ್ವಾಸ ಗೊತ್ತುವಳಿಯಲ್ಲಿ ಪಾಕ್ ಪ್ರಧಾನಿ ವಿರುದ್ಧದ ನಿರ್ಣಯ ಮಂಡಿಸುವಲ್ಲಿ ದಾಂಡ್ಲಾ ಪ್ರಮುಖರಾಗಿದ್ದರು. ಈ ಕುರಿತು ಚರ್ಚಿಸಲು ಇದೇ 21ರಂದು ಪಾಕಿಸ್ತಾನ ಸಂಸತ್ತಿನ ಅಧಿವೇಶನ ಕರೆಯುವ ಸಾಧ್ಯತೆ ಇದೆ. ಮಾರ್ಚ್ 28ರಂದು ಅವಿಶ್ವಾಸ ನಿರ್ಣಯದ ಮೇಲೆ ಮತ ನಡೆಸುವ ಸಾಧ್ಯತೆಯಿದೆ ಎನ್ನಲಾಗಿದೆ.
Advertisement
ಪಾಕಿಸ್ತಾನ್ ಮುಸ್ಲಿಂ ಲೀಗ್ (ನವಾಜ್) ಪಕ್ಷದ ಹಾಗೂ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ಸುಮಾರು 100 ಸದಸ್ಯರು ಪ್ರಧಾನಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮಾರ್ಚ್ 8 ರಂದು ನೋಟಿಸ್ ಜಾರಿ ಮಾಡಿದ್ದಾರೆ. ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರು ತಮ್ಮ ಸರ್ಕಾರವನ್ನು ಉಳಿಸಿಕೊಳ್ಳಲು ತವಕಿಸುತ್ತಿರುವ ಹೊತ್ತಿನಲ್ಲಿ ಆಡಳಿತ ಪಕ್ಷ ಪಿಟಿಐ ಸದಸ್ಯರಿಂದ ಬೆದರಿಕೆ ವ್ಯಕ್ತವಾಗಿದೆ ಎನ್ನಲಾಗಿದೆ.
ಪಾಕ್ ಎದುರಿಸುತ್ತಿರುವ ಆರ್ಥಿಕ ಬಿಕ್ಕಟ್ಟು ಮತ್ತು ಹಣದುಬ್ಬರ ಏರಿಕೆಗೆ ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ್ ತೆಹ್ರೀಕ್ ಇ ಇನ್ಸಾಫ್ (ಪಿಟಿಐ) ಪಕ್ಷವೇ ನೇರ ಕಾರಣ ಎಂದು ದೂರಲಾಗಿದೆ. ಈ ಮಧ್ಯೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರ ಪಕ್ಷ ಪಕ್ಷಾಂತರ ಆರೋಪದ ಮೇರೆಗೆ ತನ್ನ ಅತೃಪ್ತ ಸಂಸದರಿಗೆ ಶೋಕಾಸ್ ನೋಟಿಸ್ ನೀಡಿದೆ. ಅಲ್ಲದೆ, ನಿಮ್ಮನ್ನು ಪಕ್ಷಾಂತರಿ ಎಂದು ಏಕೆ ಘೋಷಿಸಬಾರದು? ಮತ್ತು ರಾಷ್ಟ್ರೀಯ ಆಸೆಂಬ್ಲಿ ಸದಸ್ಯತ್ವದಿಂದ ಅನರ್ಹಗೊಳಿಸಬಾರದು ಎಂಬುದಕ್ಕೆ ಮಾರ್ಚ್ 26ರ ಒಳಗೆ ವಿವರಣೆ ನೀಡುವಂತೆ ಸೂಚಿಸಲಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ ಇಮ್ರಾನ್ ಖಾನ್, ಕೆಲವರು ನಿಮ್ಮನ್ನು ಟ್ರಾಪ್ ಮಾಡಲು ಯತ್ನಿಸುತ್ತಿದ್ದಾರೆ. ಆದರೆ, ಅಲ್ಹಾ ಅವರನ್ನೇ ಟ್ರಾಪ್ ಮಾಡುತ್ತಿದ್ದಾರೆ. ಇಂತಹ ಗಿಮಿಕ್‍ಗಳಿಗೆ ಹಾಗೂ ಮೋಸಗಾರರ ಬಗ್ಗೆ ಹೆದರುವ ಅವಶ್ಯಕತೆಯಿಲ್ಲ ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.