ಇಸ್ಲಾಮಾಬಾದ್: ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ನೇತೃತ್ವದ ಪಾಕಿಸ್ತಾನ ತಹ್ರಿಕ್ ಎ ಇನ್ಸಾಫ್ (PTI) ಪಕ್ಷ ನಿಷೇಧಿಸಲು ಪಾಕಿಸ್ತಾನದ ಶೆಹಬಾಜ್ ಷರೀಫ್ ನೇತೃತ್ವದ ಸರ್ಕಾರ ನಿರ್ಧರಿಸಿದೆ ಎಂದು ಸಚಿವರೊಬ್ಬರು ಹೇಳಿದ್ದಾರೆ.
ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪಾಕ್ ಸಚಿವ ಅತ್ತಾವುಲ್ಲಾ ತರಾತ್, ಸರ್ಕಾರ ಪಿಟಿಐ ಪಕ್ಷದ ಮೇಲೆ ನಿಷೇಧ ಹೇರಲು ನಿರ್ಧರಿಸಿದೆ. ಪಿಟಿಐ ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದೆ. ಈ ಪ್ರಕರಣವನ್ನು ಸುಪ್ರೀಂ ಕೋರ್ಟ್‌ಗೆ (Pak Supreme Court) ವಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: Trump Assassination Attempt | ಮನೆಯಿಂದ ಮನೆಗೆ ಟೆರೇಸ್ ಮೇಲೆ ಜಿಗಿಯುತ್ತಾ ಬಂದಿದ್ದ ಯುವಕ
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಅವರು 1996ರಲ್ಲಿ ಪಾಕಿಸ್ತಾನ್ ತೆಹ್ರೀಕ್ ಇ ಇನ್ಸಾಫ್ ಪಕ್ಷವನ್ನು ಸ್ಥಾಪಿಸಿದ್ದರು. ಸಾಕಷ್ಟು ರಾಜಕೀಯ ಸಂಘರ್ಷಗಳ ಬಳಿಕ 2018ರಲ್ಲಿ ಅವರ ಪಕ್ಷ ಮೊದಲ ಬಾರಿಗೆ ಅಧಿಕಾರಕ್ಕೆ ಬಂದಿತ್ತು. ಇಮ್ರಾನ್ ಖಾನ್ ಪ್ರಧಾನಿಯಾಗುವುದರಲ್ಲಿ ಯಶಸ್ವಿಯಾಗಿದ್ದರು. ಇದನ್ನೂ ಓದಿ: ಬಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ ಸಹೋದರ ಅರೆಸ್ಟ್; 2 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್!
ಇದೀಗ ಪಿಟಿಐ ಪಕ್ಷ ವಿದೇಶಿ ಮೂಲಗಳಿಂದ ಅಕ್ರಮವಾಗಿ ಹಣ ಸ್ವೀಕರಿಸಿರುವ ಬಗ್ಗೆ ಪುರಾವೆಗಳಿವೆ. ಅದೂ ಅಲ್ಲದೇ ಆ ಹಣವನ್ನು ಬಳಸಿಕೊಂಡು ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿರುವುದು ಬಯಲಾಗಿದೆ. ವಿದೇಶಿ ನಿಧಿ ಪ್ರಕರಣ, ಮೇ 9 ರ ಗಲಭೆಗಳು, ಸೈಫರ್ ಎಪಿಸೋಡ್ ಮತ್ತು ಯುಎಸ್‌ನಲ್ಲಿ ಅಂಗೀಕರಿಸಿದ ನಿರ್ಣಯದ ದೃಷ್ಟಿಯಿಂದ, ಪಿಟಿಐ ಅನ್ನು ನಿಷೇಧಿಸಲು ಸಾಕಷ್ಟು ವಿಶ್ವಾಸಾರ್ಹ ಪುರಾವೆಗಳಿವೆ. ಹೀಗಾಗಿ ಅದನ್ನು ಬ್ಯಾನ್ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ
2022ರಲ್ಲಿ ವಿಶ್ವಾಸ ಮತ ಕಳೆದುಕೊಂಡ ಬಳಿಕ ಇಮ್ರಾನ್ ಖಾನ್ ನೇತೃತ್ವದ ಸರ್ಕಾರ ಪತನಗೊಂಡಿತ್ತು. ನವಾಜ್ ಷರೀಫ್ ಅವರ ಸಹೋದರ ಶೆಹಬಾಜ್ ಷರೀಫ್ ನೇತತ್ವದ ಸರ್ಕಾರ ರಚನೆಯಾಗಿತ್ತು. ಅದರ ಬೆನ್ನಲ್ಲೇ ಇಮ್ರಾನ್ ಖಾನ್ ಅವರನ್ನು ಸಂಪೂರ್ಣವಾಗಿ ಹಣಿಯುವ ಪ್ರಯತ್ನಗಳು ಆರಂಭವಾಗಿದ್ದವು. ಉಡುಗೊರೆಗಳ ದುರ್ಬಳಕೆ ಸೇರಿದಂತೆ ಅನೇಕ ಹಗರಣಗಳ ಅಡಿ ಇಮ್ರಾನ್ ಖಾನ್ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು. ಪ್ರಸ್ತುತ ಅವರು ರಾವಲ್ಪಿಂಡಿಯ ಅಡಿಯಾಲಾ ಜೈಲಿನಲ್ಲಿದ್ದಾರೆ.