ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ತೆಹ್ರಿಕ್-ಇ-ಇನ್ಸಾಫ್ ಪಕ್ಷದ ಸಾಮಾಜಿಕ ಮಾಧ್ಯಮದ 8 ಸದಸ್ಯರನ್ನು ಬಂಧಿಸಲಾಗಿದೆ.
ಇಮ್ರಾನ್ ಖಾನ್ ಅವರ ಸಾಮಾಜಿಕ ಮಾಧ್ಯಮ ತಂಡ ಪಾಕಿಸ್ತಾನ ಸೇನಾ ಮುಖ್ಯಸ್ಥರನ್ನು ಅವಮಾನಿಸಿರುವುದಾಗಿ ಆರೋಪ ಹೊರಿಸಿತ್ತು. ಈ ಹಿನ್ನೆಲೆಯಲ್ಲಿ ಸಾಮಾಜಿಕ ಮಾಧ್ಯಮದ 8 ಸದಸ್ಯರನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಈಶ್ವರಪ್ಪನನ್ನು ವಜಾಗೊಳಿಸಿ – ಅಮಿತ್ ಶಾ ನಿವಾಸದ ಎದುರು ಯುವ ಕಾಂಗ್ರೆಸ್ ಪ್ರತಿಭಟನೆ
ತೆಹ್ರಿಕ್-ಇ-ಇನ್ಸಾಫ್‌ನ ಸಾಮಾಜಿಕ ಮಾಧ್ಯಮ ತಂಡ ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಕಮರ್ ಜಾವೇದ್ ಬಾಜ್ವಾ ಅವರನ್ನು ಅವಮಾನಿಸಿದ್ದಾಗಿ ಆರೋಪಿಸಲಾಗಿತ್ತು. ಇಮ್ರಾನ್ ಖಾನ್ ಪ್ರಧಾನಿ ಪಟ್ಟದಿಂದ ಇಳಿದ ಬಳಿಕ ಪಾಕಿಸ್ತಾನ ಸೇನೆಯನ್ನು ಗುರಿಯಾಗಿಸಿಕೊಂಡಿರುವ ಸಾಮಾಜಿಕ ಮಾಧ್ಯಮ ತಂಡ ನಿರಂತರವಾಗಿ ಟ್ವಿಟ್ಟರ್‌ನಲ್ಲಿ ಸೇನೆಯ ವಿರುದ್ಧ ಹೇಳಿಕೆಯನ್ನು ನೀಡುತ್ತಿತ್ತು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಭೀಕರ ಚಂಡಮಾರುತಕ್ಕೆ 58 ಮಂದಿ ಸಾವು – ಫಿಲಿಪೈನ್ಸ್‌ನಲ್ಲಿ ಬಿಡುವಿಲ್ಲದೇ ನಡೀತಿದೆ ಕಾರ್ಯಾಚರಣೆ
ಸೇನಾ ಮುಖ್ಯಸ್ಥ ಮತ್ತು ಉನ್ನತ ನ್ಯಾಯಾಲಯದ ನ್ಯಾಯಾಧೀಶರನ್ನು ತೆಹ್ರಿಕ್-ಇ-ಇನ್ಸಾಫ್ ಪಕ್ಷದ ಸಾಮಾಜಿಕ ಮಾಧ್ಯಮ ಅವಮಾನ ಮಾಡುತ್ತಿದೆ. ಇದರಲ್ಲಿ ಭಾಗಿಯಾಗಿರುವ 50 ಶಂಕಿತರನ್ನು ಗುಪ್ತಚರ ಸಂಸ್ಥೆ ಪಟ್ಟಿ ಮಾಡಿದೆ. ಈ ಪೈಕಿ ಇದುವರೆಗೆ 8 ಸದಸ್ಯರನ್ನು ಬಂಧಿಸಲಾಗಿದೆ ಎಂದು ಫೆಡರಲ್ ಇನ್ವೆಸ್ಟಿಗೇಶನ್ ಏಜೆನ್ಸಿ(ಎಫ್‌ಐಎ) ತಿಳಿಸಿದೆ.