CrimeDakshina KannadaDistrictsKarnatakaLatestLeading NewsMain Post
2016ರಲ್ಲಿ ಡಿಕೆಶಿ ನಿಂದಿಸಿದ್ದ ಬೆಳ್ಳಾರೆಯ ಗಿರಿಧರ ರೈಗೆ 2 ವರ್ಷ ಜೈಲು

ಮಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ನಿಂದಿಸಿದ್ದ ಪ್ರಕರಣದಲ್ಲಿ ವ್ಯಕ್ತಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನ್ಯಾಯಾಲಯದ ನ್ಯಾಯಮೂರ್ತಿ ಸೋಮಶೇಖರ್ ಆದೇಶಿಸಿದ್ದಾರೆ.
ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಗೆ ನಿಂದಿಸಿದ್ದ ಆರೋಪ ಹೊತ್ತಿದ್ದ ಸುಳ್ಯ ತಾಲೂಕಿನ ಬೆಳ್ಳಾರೆಯ ಗಿರಿಧರ್ ರೈಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಇದನ್ನೂ ಓದಿ: 15 ವರ್ಷದ ಹುಡುಗಿ ಮೇಲೆ ಅತ್ಯಾಚಾರ- ಇಬ್ಬರು ಅಪ್ರಾಪ್ತರು ಸೇರಿ ನಾಲ್ವರ ಬಂಧನ
ಏನಿದು ಪ್ರಕರಣ?: 2016ರಲ್ಲಿ ಡಿ.ಕೆ.ಶಿವಕುಮಾರ್ ಇಂಧನ ಸಚಿವರಾಗಿದ್ದ ವೇಳೆ ನಡೆದಿದ್ದ ಪ್ರಕರಣ ಇದಾಗಿದೆ. ಸುಳ್ಯ ತಾಲೂಕಿನ ಬೆಳ್ಳಾರೆಯ ಗಿರಿಧರ್ ರೈ 2016ರ ಫೆಬ್ರವರಿ 28ರಂದು ಡಿ.ಕೆ.ಶಿವಕುಮಾರ್‌ಗೆ ಕರೆ ಮಾಡಿದ್ದರು. ವಿದ್ಯುತ್ ಸಮಸ್ಯೆ ಹೇಳಿಕೊಳ್ಳಲು ಕರೆ ಮಾಡಿದ್ದ ವೇಳೆ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಇದರಿಂದ ಅಂದೇ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರ ಮೂಲಕ ಗಿರಿಧರ್ ವಿರುದ್ಧ ಡಿ.ಕೆ.ಶಿವಕುಮಾರ್ ಪೊಲೀಸರಿಗೆ ದೂರು ನೀಡಿದ್ದರು.