– ಪಾಪ ಆ ಡ್ರೈವರ್‌ಗೆ ಹಾರ್ಟ್ ಅಟ್ಯಾಕ್ ಆಗಿರುತ್ತೆ ಎಂದ ನೆಟ್ಟಿಗರು
ಹೈದರಾಬಾದ್: ಸೋಷಿಯಲ್ ಮೀಡಿಯಾದಲ್ಲಿ ಈಗ ರೀಲ್ಸ್ ಹವಾ ಜಾಸ್ತಿಯಾಗಿದೆ. ಯುವಕ-ಯುವತಿಯರಂತು (Youngster) ತಮ್ಮ ಫಾಲೋವರ್‌ಗಳನ್ನ ಹೆಚ್ಚಿಸಿಕೊಳ್ಳಲು, ಹೆಚ್ಚು ವೀವ್ಸ್ ಮತ್ತು ಲೈಕ್ಸ್ ಪಡೆಯಲು ಜೀವಕ್ಕೆ ಅಪಾಯವಾಗುವಂತಹ ಸ್ಟಂಟ್ ಗಳನ್ನು ಮಾಡುತ್ತಿದ್ದಾರೆ. ಇದರಿಂದ ಕೆಲವರು ಸಾವನ್ನಪ್ಪಿರುವ ಘಟನೆಯನ್ನೂ ನಾವು ಆಗಾಗ್ಗೆ ನೋಡಿದ್ದೇವೆ. ಇಷ್ಟಾದರೂ ಯುವಜನತೆಗೆ ರೀಲ್ಸ್ (Reels) ಹುಚ್ಚು ಬಿಟ್ಟಿಲ್ಲ.
In a bid to make #reel, a youngster risked his life by doing dangerous stunt by suddenly laying on road in front of a running bus in #Hyderabad. The stunt video is now going viral on #SocialMedia, triggering outrage among netizens pic.twitter.com/5bD2XQuEAT
— Aneri Shah Yakkati (@tweet_aneri) June 21, 2024
Advertisement
ಇತ್ತೀಚೆಗಷ್ಟೇ ಪುಣೆಯಲ್ಲಿ (Pune) ಯುವತಿಯೊಬ್ಬಳು, ಹುಡುಗನೊಬ್ಬನ ಕೈ ಹಿಡಿದುಕೊಂಡು ಪಾಳುಬಿದ್ದ ಕಟ್ಟಡದ ಮೇಲಿಂದ ನೇತಾಡುತ್ತಿರುವ ರೀತಿ ರೀಲ್ಸ್ ಮಾಡಿದ್ದ ವಿಡಿಯೋ ವೈರಲ್ ಆಗಿತ್ತು. ಇದೀಗ ಹೈದರಾಬಾದ್‌ನಲ್ಲಿ (Hyderabad) ಯುವಕನೊಬ್ಬ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಚಲಿಸುತ್ತಿದ್ದ ಬಸ್ ಕೆಳಗೆ ಹಠಾತ್ತನೆ ಮಲಗುವ ಸಾಹಸ ರೀಲ್ಸ್ ಮಾಡಿದ್ದಾನೆ. ಈ ಕುರಿತ ವೀಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಇದನ್ನೂ ಓದಿ: ಪೊದೆಯೊಂದರಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ – ಅತ್ಯಾಚಾರ ಶಂಕೆ
Advertisement
Advertisement
ಬಹುತೇಕ ವಾಹನಗಳು ಸಂಚರಿಸುವ ಸಮಯದಲ್ಲಿ ಯುವಕನೊಬ್ಬ ದಿಢೀರನೆ ರಸ್ತೆ ಮಧ್ಯಕ್ಕೆ ಬಂದು ನಿಂತಿದ್ದಾನೆ. ನಂತರ ಒಂದೆರಡು ಹೆಜ್ಜೆ ಮುಂದಕ್ಕೆ ಸಾಗಿ ಚಲಿಸುತ್ತಿದ್ದ ಬಸ್ ಕೆಳಗೆ ಮಲಗಿದ್ದಾನೆ. ಬಸ್ ಸಹ ತಕ್ಷಣಕ್ಕೆ ನಿಲ್ಲಿಸಲಾಗದೇ ಮುಂದೆ ಸಾಗಿದೆ. ಏನೋ ಅನಾಹುತ ಸಂಭವಿಸಿತೇನೋ ಎನ್ನುವಷ್ಟರಲ್ಲಿ ಯುವಕ ಎದ್ದು ರಸ್ತೆ ಪಕ್ಕಕ್ಕೆ ತೆರಳಿದ್ದಾರೆ. ಬಿಡ್ ಕಟ್ಟಿ ರೀಲ್ಸ್‌ಗಾಗಿ ಯುವಕನೊಬ್ಬ ಇಂತಹ ಕೆಲಸ ಮಾಡಿದ್ದಾನೆ. ಇದನ್ನೂ ಓದಿ: ʻದಾಸʼನಿಗೆ ಕಾನೂನು ಕುಣಿಕೆ ಮತ್ತಷ್ಟು ಬಿಗಿ – ಪೊಲೀಸರಿಂದ 2 ಹಲ್ಲೆ ವೀಡಿಯೋ ಸಂಗ್ರಹ!
Advertisement
ಆನೇರಿ ಶಾ ಯಕ್ಕತಿ ಎಂಬ ಎಕ್ಸ್ ಖಾತೆಯಲ್ಲಿ ಜೂನ್ 21 ರಂದು ವೀಡಿಯೋ ಹಂಚಿಕೊಳ್ಳಲಾಗಿದ್ದು, 78 ಸಾವಿರಕ್ಕೂ ಹೆಚ್ಚು ಮಂದಿ ವೀಕ್ಷಣೆ ಮಾಡಿದ್ದಾರೆ. ಯುವಜನ ಹುಚ್ಚಾಟಕ್ಕೆ ನೆಟ್ಟಿಗರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಕೆಲವರು ಇದು ಎಡಿಟ್ ಮಾಡಿದ ವೀಡಿಯೋ, ನಕಲಿ ವೀಡಿಯೋ ಎಂದು ಹೇಳಿದರೆ, ಇನ್ನೂ ಕೆಲವರು ಪಾಪ ಆ ಬಸ್ ಡ್ರೈವರ್‌ಗೆ ಹಾರ್ಟ್ ಅಟ್ಯಾಕ್ ಆಗಿರುತ್ತೆ, ಇಂಥವನನ್ನ ಅರೆಸ್ಟ್ ಮಾಡಿ ಜೈಲಿಗೆ ಕಳುಹಿಸಿ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್ - ಇಂದು ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳಿಗೆ ಜೈಲು ಫಿಕ್ಸ್?