ಮೊದಲ ಬಾರಿ ನೈಟ್ ವಿಷನ್ ಗಾಗಲ್ಸ್ ಬಳಸಿ ವಿಮಾನ ಲ್ಯಾಂಡ್ ಮಾಡಿದ ಐಎಎಫ್

Public TV
2 Min Read
IAF C

ನವದೆಹಲಿ: ಭಾರತೀಯ ವಾಯುಪಡೆ (IAF) ಮೊದಲ ಬಾರಿಗೆ ಪೂರ್ವ ವಲಯದ ಅಡ್ವಾನ್ಸ್ಡ್ ಲ್ಯಾಂಡಿಂಗ್ ಗ್ರೌಂಡ್‍ನಲ್ಲಿ (Advanced landing ground ) ಎನ್‍ವಿಜಿ ಬಳಸಿ (ರಾತ್ರಿ ದೃಷ್ಟಿ ಕನ್ನಡಕ) ವಿಮಾನವನ್ನು ಯಶಸ್ವಿಯಾಗಿ ಇಳಿಸಿದೆ.

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ವಾಯುಪಡೆ, ಐಎಎಫ್ ಸಿ-130ಜೆ ವಿಮಾನವನ್ನು ಪೂರ್ವ ವಲಯದಲ್ಲಿರುವ ಅಡ್ವಾನ್ಸ್ಡ್ ಲ್ಯಾಂಡಿಂಗ್ ಗ್ರೌಂಡ್‍ನಲ್ಲಿ ನೈಟ್ ವಿಷನ್ ಗಾಗಲ್ಸ್ (Night Vision Goggles) ಸಹಾಯದಿಂದ ಲ್ಯಾಂಡ್ ಮಾಡಲಾಗಿದೆ ಎಂದು ಮಾಹಿತಿ ಹಂಚಿಕೊಂಡಿದೆ. ಅಲ್ಲದೇ ಎಕ್ಸ್‌ನಲ್ಲಿ ವಿಮಾನ ಲ್ಯಾಂಡಿಂಗ್ ಆಗುವ ವೀಡಿಯೋವನ್ನು ಸಹ ಹಂಚಿಕೊಳ್ಳಲಾಗಿದ್ದು, ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿರುವುದನ್ನು ಗಮನಿಸಬಹುದಾಗಿದೆ. ಇದರೊಂದಿಗೆ ಕಿಟಕಿಯಿಂದ ಸಹ ಎನ್‍ವಿಜಿ ಬಳಸಿ ಒಂದು ದೃಶ್ಯವನ್ನು ಸೆರೆ ಹಿಡಿದು ಹಂಚಿಕೊಳ್ಳಲಾಗಿದೆ. ಇದನ್ನೂ ಓದಿ: ವಿಚಾರಣೆಗೆ ಬಾರದ ಭವಾನಿ ರೇವಣ್ಣ- ಸರ್ಕಾರದ ವಿರುದ್ಧ ಜೆಡಿಎಸ್ MLC ಕಿಡಿ

ಪೂರ್ವ ವಲಯವು ಭಾರತದ ಈಶಾನ್ಯ ರಾಜ್ಯಗಳಾದ ಒಡಿಶಾ, ಜಾರ್ಖಂಡ್, ಸಿಕ್ಕಿಂ, ಪಶ್ಚಿಮ ಬಂಗಾಳ ಮತ್ತು ಬಿಹಾರದ ಭಾಗಗಳನ್ನು ಒಳಗೊಂಡಿದೆ. ಇದು ಚೀನಾ, ನೇಪಾಳ, ಭೂತಾನ್, ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶದೊಂದಿಗೆ 6300 ಕಿಮೀ ಉದ್ದದ ಅಂತರಾಷ್ಟ್ರೀಯ ಗಡಿಯ ರಕ್ಷಣೆಯ ಹೊಣೆ ಹೊತ್ತಿದೆ.

ಎನ್‍ವಿಜಿ ತಂತ್ರಜ್ಞಾನ ಬಳಸಿಕೊಂಡು, ವಾಯುಪಡೆ ಈಗ ಕಡಿಮೆ ಬೆಳಕಿರುವ ಸಮಯದಲ್ಲೂ ಸುರಕ್ಷಿತ ಮತ್ತು ಹೆಚ್ಚು ಪರಿಣಾಮಕಾರಿ ಕಾರ್ಯಾಚರಣೆಗಳನ್ನು ನಡೆಸಬಹುದು. ಇದು ರಾತ್ರಿ ವೇಳೆಯ ಕಾರ್ಯಾಚರಣೆಗಳನ್ನು ಪರಿಣಾಮಕಾರಿಯಾಗಿ ನಡೆಸಲು ಸಹಕಾರಿಯಾಗಲಿದೆ.

ಈ ವರ್ಷದ ಆರಂಭದಲ್ಲಿ, ಐಎಎಫ್ ಕಾರ್ಗಿಲ್ ಏರ್‌ಸ್ಟ್ರಿಪ್‌ನಲ್ಲಿ ಇದೇ ವಿಮಾನ ರಾತ್ರಿ ವೇಳೆ ಲ್ಯಾಂಡಿಂಗ್‍ನ್ನು ಯಶಸ್ವಿಯಾಗಿ ನಡೆಸಿತ್ತು. ಇದು ಈ ಏರ್‌ಸ್ಟ್ರಿಪ್‌ನಲ್ಲಿ ರಾತ್ರಿ ವೇಳೆಯ ಕಾರ್ಯಾಚರಣೆ ಮೊದಲಾಗಿತ್ತು. ಇನ್ನೂ ಕಾರ್ಗಿಲ್, ಶ್ರೀನಗರ ಮತ್ತು ಜಮ್ಮು ನಡುವಿನ ನಾಗರಿಕ ಸಾರಿಗೆಗಾಗಿ, ವಿಶೇಷವಾಗಿ ತೀವ್ರ ಚಳಿಗಾಲದಲ್ಲಿ ವಿಮಾನ ಬಳಕೆ ಮಾಡಲಾಗುತ್ತದೆ. ಆದರೂ ಇತ್ತೀಚಿನವರೆಗೆ ಕಾರ್ಗಿಲ್ ಏರ್‌ಸ್ಟ್ರಿಪ್‌ನಲ್ಲಿ ರಾತ್ರಿ ವಿಮಾನ ಇಳಿಸುವ ವ್ಯವಸ್ಥೆ ಇರಲಿಲ್ಲ. ಇದನ್ನೂ ಓದಿ: ಪೊಲೀಸರಿಗಾಗಿ ನಾನು, ನನ್ನ ಪೋಷಕರು, ಹೆಂಡತಿ ಕಾಯುತ್ತಿದ್ದೇವೆ: ಕೇಜ್ರಿವಾಲ್‌ ಪೋಸ್ಟ್‌

Share This Article