75ನೇ ಸ್ವಾತಂತ್ರ್ಯೋತ್ಸವ – ರಾಷ್ಟ್ರಪತಿಯಾಗಿ ದೇಶವನ್ನುದ್ದೇಶಿಸಿ ಚೊಚ್ಚಲ ಭಾಷಣ ಮಾಡಿದ ದ್ರೌಪದಿ ಮುರ್ಮು

Advertisements

ನವದೆಹಲಿ: ದೇಶವು 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶವನ್ನುದ್ದೇಶಿಸಿ ತಮ್ಮ ಚೊಚ್ಚಲ ಭಾಷಣ ಮಾಡಿದ್ದಾರೆ. ಈ ವೇಳೆ ವಸಾಹತುಶಾಹಿ ಆಡಳಿತದಿಂದ ಭಾರತವನ್ನು ಮುಕ್ತಗೊಳಿಸಿದ ಸ್ವಾತಂತ್ರ್ಯ ಹೋರಾಟಗಾರರ ಅಪಾರ ತ್ಯಾಗವನ್ನು ರಾಷ್ಟ್ರಪತಿ ಸ್ಮರಿಸಿದ್ದಾರೆ.

ಸ್ವಾತಂತ್ರ್ಯ ದಿನವನ್ನು ಆಚರಿಸುವಾಗ ನಾವು ನಮ್ಮ ‘ಭಾರತೀಯತೆ’ಯನ್ನು ಆಚರಿಸುತ್ತೇವೆ. ಭಾರತವು ವೈವಿಧ್ಯತೆಯಿಂದ ಕೂಡಿದೆ. ಇದು ‘ಏಕ ಭಾರತ, ಶ್ರೇಷ್ಠ ಭಾರತ’ ಎಂಬ ಮನೋಭಾವದೊಂದಿಗೆ ಒಟ್ಟಿಗೆ ಸಾಗಲು ಪ್ರೇರೇಪಿಸುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸ್ವಾತಂತ್ರ್ಯ ದಿನಾಚರಣೆ; ಗಡಿಯಲ್ಲಿ ಸಿಹಿ ಹಂಚಿಕೊಂಡು ಶುಭಕೋರಿದ ಭಾರತ-ಪಾಕ್‌ ಸೇನೆ

Advertisements

2047 ರ ವೇಳೆಗೆ, ನಾವು ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ಸಂಪೂರ್ಣವಾಗಿ ಸಾಕಾರಗೊಳಿಸುತ್ತೇವೆ. ಬಾಬಾಸಾಹೇಬ್ ಭೀಮರಾವ್ ಅಂಬೇಡ್ಕರ್ ಅವರ ನೇತೃತ್ವದಲ್ಲಿ ಸಂವಿಧಾನವನ್ನು ರಚಿಸಿದವರ ದೂರದೃಷ್ಟಿಗೆ ನಾವು ಕಾಂಕ್ರೀಟ್ ರೂಪವನ್ನು ನೀಡುತ್ತೇವೆ ಎಂದು ಹೇಳಿದ್ದಾರೆ.

ಅನೇಕ ವೀರರು ಹಾಗೂ ಅವರ ಹೋರಾಟವನ್ನು ಮರೆತು ಬಿಟ್ಟಿದ್ದೇವೆ. ವಿಶೇಷವಾಗಿ ಬುಡಕಟ್ಟು ಜನಾಂಗದ ನಾಯಕರು ಪ್ರಾದೇಶಿಕ ಐಕಾನ್‌ಗಳಾಗಿದ್ದಾರೆ. ನವೆಂಬರ್ 15 ಅನ್ನು ‘ಜನಜಾತಿಯ ಗೌರವ ದಿವಸ’ವಾಗಿ ಆಚರಿಸಲು ಸರ್ಕಾರ ನಿರ್ಧರಿಸಿರುವುದು ಸ್ವಾಗತಾರ್ಹವಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಓಂ ಜೈ ಜಗದೀಶ್‌ ಹರೇ ಭಕ್ತಿಗೀತೆ ಹಾಡಿದ 75ನೇ ಸ್ವಾತಂತ್ರ್ಯೋತ್ಸವದ ಅತಿಥಿ ಅಮೆರಿಕ ಗಾಯಕಿ – ವೀಡಿಯೋ ವೈರಲ್‌

Advertisements

ಕೋವಿಡ್ ನಿರ್ವಹಣೆ ಕುರಿತು ಮಾತನಾಡಿದ ಅವರು, ಕೊರೊನಾ ಸಂಕಷ್ಟದ ನಡುವೆ ಇತಿಹಾಸದಲ್ಲೇ ಅತಿದೊಡ್ಡ ಲಸಿಕೆ ಅಭಿಯಾನವನ್ನು ಪ್ರಾರಂಭಿಸಿದ್ದೇವೆ. 200 ಕೋಟಿ ಡೋಸ್‌ಗಳ ಒಟ್ಟು ಲಸಿಕೆ ವ್ಯಾಪ್ತಿಯನ್ನು ದಾಟಿದ್ದೇವೆ ಎಂದು ಉಲ್ಲೇಖಿಸಿದ್ದಾರೆ.

ಲಿಂಗ ಅಸಮಾನತೆ ಕಡಿಮೆಯಾಗುತ್ತಿದೆ. ಹೆಣ್ಣು ಮಕ್ಕಳು ದೇಶದ ಭವಿಷ್ಯದ ದೊಡ್ಡ ಭರವಸೆಯಾಗಿದ್ದಾರೆ ಎಂದರಲ್ಲದೇ, ಪ್ರಜಾಪ್ರಭುತ್ವದ ನೈಜ ಸಾಮರ್ಥ್ಯವನ್ನು ಕಂಡುಹಿಡಿಯಲು ಜಗತ್ತಿಗೆ ಸಹಾಯ ಮಾಡಿದ ಕೀರ್ತಿ ಭಾರತಕ್ಕೆ ಸಲ್ಲುತ್ತದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಪ್ರತಿಕ್ರಿಯಿಸಿ, ಈ ನೀತಿಯು ಮುಂದಿನ ಹಂತದ ಕೈಗಾರಿಕಾ ಕ್ರಾಂತಿಗೆ ಭವಿಷ್ಯದ ಪೀಳಿಗೆಯನ್ನು ಸಿದ್ಧಪಡಿಸುವ ಗುರಿಯನ್ನು ಹೊಂದಿದೆ ಎಂದು ಬಣ್ಣಿಸಿದ್ದಾರೆ.

Live Tv

Advertisements
Exit mobile version