ಬಿಗ್ ಬಾಸ್ ಮಾಜಿ ಸ್ಪರ್ಧಿ, ನಟಿ ಸಾನ್ಯಾ ಅಯ್ಯರ್ (Sanya Iyer) ಮತ್ತೊಂದು ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಬ್ಲ್ಯಾಕ್ ಬಾಡಿ ಸೂಟ್ ನಲ್ಲಿ ಅವರು ಮಿರಿ ಮಿಂಚಿದ್ದಾರೆ. ಬ್ಲ್ಯಾಕ್ ಕಾಸ್ಟ್ಯೂಮ್ ತುಂಬಾ ಹೊಳೆಯುವ ಹರಳುಗಳಿದ್ದು, ವಿಶೇಷ ವಿನ್ಯಾಸದಲ್ಲಿ ಅದನ್ನು ಸಿದ್ದಗೊಳಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಫೋಟೋಶೂಟ್ ಗೆ ಅವರು ಒಳಗಾಗಿದ್ದಾರೆ.
ಇತ್ತೀಚೆಗಷ್ಟೇ ಬಾಲಿವುಡ್ (Bollywood) ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ (Daboo Ratnani) ಅವರಿಂದ ಫೋಟೋಶೂಟ್ (Photo Shoot) ಮಾಡಿಸಿಕೊಂಡಿದ್ದರು. ಆ ಫೋಟೋಗಳನ್ನು ಒಂದೊಂದೇ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ ಹಿಂದೆ ಬಿಳಿ ಬಣ್ಣದ ಕಾಸ್ಟ್ಯೂಮ್ ನಲ್ಲಿ ಥೇಟ್ ರಾಣಿಯಂತೆ ಕಂಡಿದ್ದರು.
- Advertisement
- Advertisement
ಕೆಲವು ಘಟನೆಗಳ ನಂತರ ಸಾನ್ಯಾ ತಮ್ಮ ಬದುಕನ್ನು ನಾಜೂಕಾಗಿ ಕಟ್ಟಿಕೊಳ್ಳುತ್ತಿದ್ದಾರೆ. ಅಲ್ಲದೇ ಗ್ಲಾಮರ್ ಬಗ್ಗೆಯೂ ಅವರು ಕಾಳಜಿ ತಗೆದುಕೊಳ್ಳುತ್ತಿದ್ದಾರೆ. ಈ ಕುರಿತು ಅವರು ಮಾತನಾಡಿ, ‘ಕಂಬಳದಲ್ಲಿ ನಾನು ಕುಡಿದುಕೊಂಡು ಬಂದಿದ್ದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದರು. ಅದು ಸುಳ್ಳು. ನಾನು ಜೀರೋ ಶುಗರ್ ಡಯೆಟ್ ಮಾಡುತ್ತಿದ್ದೇನೆ. ಮುಂಬೈನಲ್ಲಿ ಶೂಟಿಂಗ್ ಇರುವ ಕಾರಣಕ್ಕಾಗಿ ಇದೆಲ್ಲವನ್ನೂ ಮಾಡುತ್ತಿದ್ದೇನೆ. ಅಂಥದ್ದರಲ್ಲಿ ಮದ್ಯಪಾನ ಹೇಗೆ ಮಾಡಲಿ? ಜೊತೆಗೆ ನಾನು ರುದ್ರಾಕ್ಷಿಯನ್ನು ಧರಿಸಿದ್ದೇನೆ. ಇದನ್ನು ಧರಿಸಿದಾಗ ಮದ್ಯಪಾನ, ಧೂಮಪಾನ ಮಾಡಲ್ಲ. ಸುಮ್ಮನೆ ನನ್ನ ಮೇಲೆ ಆಪಾದನೆ ಹೊರಿಸಲಾಗುತ್ತಿದೆ’ ಎಂದಿದ್ದರು.
ಈಗಾಗಲೇ ಜೀವನಲ್ಲಿ ಒಂದು ಲವ್ ಫೆಲ್ಯೂವರ್ ಕಂಡಿರುವ ಪುಟ್ಟಗೌರಿ ಖ್ಯಾತಿಯ ಸಾನ್ಯಾ ಅಯ್ಯರ್ ಮತ್ತು ರೂಪೇಶ್ ಶೆಟ್ಟಿ (Rupesh Shetty) ನಡುವೆ ಏನೋ ನಡೀತಾ ಇದೆ ಎನ್ನುವುದು ಬಿಗ್ ಬಾಸ್ ಮನೆಯಲ್ಲಿದ್ದವರ ಗುಮಾನಿಯಾಗಿತ್ತು. ಅದಕ್ಕೆ ಪುಷ್ಠಿ ಎನ್ನುವಂತೆ ಈ ಜೋಡಿ ಸದಾ ಜೊತೆಯಾಗಿಯೇ ಕ್ಯಾಮೆರಾ ಮುಂದೆ ಕಾಣಿಸಿಕೊಳ್ಳುತ್ತಿತ್ತು. ಅದಕ್ಕೂ ಅವರು ಸ್ಪಷ್ಟನೆ ನೀಡಿದ್ದಾರೆ.
ರೂಪೇಶ್ ಮತ್ತು ತಮ್ಮ ನಡುವೆ ಅಂಥದ್ದೂ ಏನೂ ಇಲ್ಲ, ನಾವು ಜಸ್ಟ್ ಫ್ರೆಂಡ್ಸ್ ಎಂದು ಹೇಳುವ ಮೂಲಕ ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ. ಏನೇ ಪ್ರಯತ್ನಿಸಿದರೂ, ಅವರುಗಳ ನಡೆ ಮಾತ್ರ ಹಲವು ಅನುಮಾನಗಳನ್ನು ಬಿತ್ತಿದೆ. ಬಿಗ್ ಬಾಸ್ ಮನೆಯಿಂದ ಆಚೆ ಬಂದ ಮೇಲೂ ಸಾನ್ಯಾ ಮತ್ತು ರೂಪೇಶ್ ಹಲವಾರು ಬಾರಿ ಭೇಟಿ ಮಾಡಿದ್ದಾರೆ. ಹಾಗಾಗಿ ಇಬ್ಬರೂ ಪ್ರೀತಿಸುತ್ತಿದ್ದಾರೆ ಎನ್ನುವ ವಿಚಾರ ಹಾಗೆಯೇ ಜನರ ಮನಸ್ಸಿನಲ್ಲಿ ಉಳಿದಿದೆ.
ತಮ್ಮ ತಾಯಿಯನ್ನು ಅಭಿಮಾನದಿಂದ ಕಾಣುವ ಸಾನ್ಯಾ. ಅವರ ತಾಯಿಯ ಬಗ್ಗೆ ಯಾರೇ ಕೆಟ್ಟ ಕಾಮೆಂಟ್ ಮಾಡಿದರೂ ಸಹಿಸುವುದಿಲ್ಲ. ಇತ್ತೀಚಿಗೆ ದೀಪಾ ಅಯ್ಯರ್ ಅವರ (Deepa Iyer) ಹುಟ್ಟುಹಬ್ಬವಿತ್ತು. ಹಾಗಾಗಿ ಸಾನ್ಯ ಅಮ್ಮನಿಗೆ ಸರ್ಪ್ರೈಸ್ ಉಡುಗೊರೆ ನೀಡಿದ್ದರು. ದೊಡ್ಡ ಹೊಟೇಲಿಗೆ ಕರೆದೊಯ್ದು ಕೇಕ್ ಆರ್ಡರ್ ಮಾಡಿ ಅಮ್ಮನಿಂದ ಕಟ್ ಮಾಡಿಸಿದ್ದರು. ಈ ಖುಷಿಯ ಸನ್ನಿವೇಶವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವೀಡಿಯೋ ಶೇರ್ ಆಗ್ತಿದಂತೆ ದೀಪಾ ಅವರ ಡ್ರೆಸ್‌ಗೆ ನೆಗೆಟಿವ್ ಕಾಮೆಂಟ್ ಹರಿದು ಬಂದಿತ್ತು.