ಲಕ್ನೋ: ಬಿಎಸ್‍ಪಿ (BSP) ನಾಯಕಿ ಮಾಯಾವತಿಯವರು (mayawati) ತಮ್ಮ ಸೋದರಳಿಯ ಆಕಾಶ್ ಆನಂದ್ (Akash Anand) ಅವರನ್ನು ಉತ್ತರಾಧಿಕಾರಿಯಾಗಿ ಘೋಷಣೆ ಮಾಡಿದ್ದಾರೆ.
ಇಂದು ಬೆಳಗ್ಗೆ ನಡೆದ ಪಕ್ಷದ ಪದಾಧಿಕಾರಿಗಳ ಪ್ರಮುಖ ಸಭೆಯ ನಂತರ ಈ ಮಹತ್ವದ ಬೆಳವಣಿಗೆ ನಡೆದಿದೆ. ಮಾಯಾವತಿಯವರು ತಮ್ಮ ರಾಜಕೀಯ ಉತ್ತರಾಧಿಕಾರಿಯನ್ನು ಘೋಷಣೆ ಮಾಡಿದರು.
Advertisement
ಸದ್ಯಕ್ಕೆ ಉತ್ತರ ಪ್ರದೇಶದ (Uttarapradesh) ಮಾಜಿ ಮುಖ್ಯಮಂತ್ರಿ ಮಾಯಾವತಿಯವರೇ ಪಕ್ಷದ ಮುಖ್ಯಸ್ಥರಾಗಿ ಮುಂದುವರಿಯಲಿದ್ದು, ಇವರ ನಂತರ ಸೋದರಳಿಯ ಆಕಾಶ್ ಆನಂದ್ ಪಕ್ಷದ ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ.
Advertisement
Advertisement
ಬಿಎಸ್‍ಪಿಯ ರಾಷ್ಟ್ರೀಯ ಸಂಯೋಜಕರಾಗಿರುವ ಆಕಾಶ್ ಇತ್ತೀಚೆಗೆ ನಡೆದ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‍ಪಿಯ ಉಸ್ತುವಾರಿಯಾಗಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಮಧ್ಯಪ್ರದೇಶ, ಛತ್ತೀಸ್‍ಗಢ ಮತ್ತು ತೆಲಂಗಾಣದಲ್ಲಿ (Telangana) ಬಿಎಸ್‍ಪಿ ಪ್ರಚಾರಕ್ಕಾಗಿ ಕೆಲಸ ಮಾಡಿದ್ದಾರೆ. ಇದನ್ನೂ ಓದಿ: ಛತ್ತೀಸ್‌ಗಢದ ನೂತನ ಮುಖ್ಯಮಂತ್ರಿಯಾಗಿ ವಿಷ್ಣು ದೇವ್ ಆಯ್ಕೆ – ʼಮೋದಿ ಕಿ ಗ್ಯಾರಂಟಿʼ ಈಡೇರಿಸೋ ಭರವಸೆ
Advertisement
ಲಂಡನ್ ನಲ್ಲಿ ಎಂಬಿಎ ಪದವಿ ಪಡೆದಿರುವ ಆಕಾಶ್ ಆನಂದ್, ತಮ್ಮ 22 ನೇ ವಯಸ್ಸಿನಲ್ಲಿ ರಾಜಕೀಯ ಪ್ರವೇಶಿಸಿದರು. ಮಾಯಾವತಿ ಅವರೊಂದಿಗೆ ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ನಡೆದ ರ್ಯಾಲಿಯಲ್ಲಿ ಪಾಲ್ಗೊಳ್ಳುವ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದರು. ಈ ವೇಳೆ ಅಖಿಲೇಶ್ ಯಾದವ್ ಮತ್ತು ಅಜಿತ್ ಸಿಂಗ್ ಅವರೊಂದಿಗೆ ಆಕಾಶ್ ವೇದಿಕೆ ಹಂಚಿಕೊಂಡಿದ್ದರು.