ಬೆಂಗಳೂರು: ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿಯರು ಬಜೆಟ್‍ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಕ್ಕೆ 9,317 ಕೋಟಿ ರೂ. ಹಣವನ್ನು ಮೀಸಲಿಟ್ಟಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ:
* ಪ್ರಸ್ತುತ ಜಾರಿಯಲ್ಲಿರುವ ಕರೆ ಸಂಖ್ಯೆ 108 ಹಾಗೂ 104 ತುರ್ತು ಪ್ರತಿಕ್ರಿಯೆ ವ್ಯವಸ್ಥೆ ವೈದ್ಯಕೀಯ ಸಹಾಯವಾಣಿ ಸೇವೆಗಳ ವ್ಯಾಪ್ತಿ ವಿಸ್ತರಣೆ.
* ಸಹಾಯವಾಣಿ ಸೇವೆಗಳ ಲಭ್ಯತೆ ಹಾಗೂ ಗುಣಮಟ್ಟ ಹೆಚ್ಚಿಸಲು ಸೇವೆಗಳ ಪುನರ್ರಚನೆ.
* ತಾಯಿ ಮತ್ತು ಮಕ್ಕಳ ಆರೋಗ್ಯ ಸೇವೆಗಳು ಮತ್ತು ಮಾನಸಿಕ ಆರೋಗ್ಯ ರಕ್ಷಣಾ ಸೇವೆಗಳನ್ನು ಇದರಲ್ಲಿ ಸಂಯೋಜನೆ.
* ಔಷಧಿ ನಿಯಂತ್ರಣ ವ್ಯವಸ್ಥೆ ಬಲಪಡಿಸಲು 40 ಕೋಟಿ ರೂ ವೆಚ್ಚದಲ್ಲಿ ಹೊಸ ಯೋಜನೆ, ಮುಂದಿನ ಎರಡು ವರ್ಷಗಳಲ್ಲಿ ಜಾರಿ. ಈ ವರ್ಷ ಈ ಉದ್ದೇಶಕ್ಕಾಗಿ 10 ಕೋಟಿ ರೂ ಅನುದಾನ.
* ಹೃದಯ, ಮೂತ್ರಪಿಂಡ, ಯಕೃತ್ ಹಾಗೂ ಇತರ ಅಂಗಾಂಗ ಕಸಿಗಾಗಿ ಬಡ ರೋಗಿಗಳಿಗೆ ಪ್ರತ್ಯೇಕ ಯೋಜನೆಗೆ 30 ಕೋಟಿ ರೂ. ಅನುದಾನ.
* ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಕಾರ್ಡಿಯಾಲಜಿ ಮತ್ತು ಅಂಕಾಲಜಿಗೆ ಸಂಬಂಧಿಸಿದ ಆರೋಗ್ಯ ಸೇವಾ ಘಟಕ ಹಾಗೂ ಟ್ರಾಮಾ ಘಟಕಗಳ ಸ್ಥಾಪನೆ.
Advertisement
ವೈದ್ಯಕೀಯ ಶಿಕ್ಷಣ:
* ರಾಮನಗರ ಜಿಲ್ಲೆಯ ಕನಕಪುರದಲ್ಲಿ ಹೊಸ ವೈದ್ಯಕೀಯ ಕಾಲೇಜ್ ಸ್ಥಾಪನೆ.
* ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಸ್ಪತ್ರೆಯನ್ನು 800 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು 30 ಕೋಟಿ ರೂ ಅನುದಾನ ಮೀಸಲು.
* ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಬೋನ್ ಮಾರೋ ಪ್ಲಾಂಟೇಶನ್ ಚಿಕಿತ್ಸಾ ಘಟಕ ಸ್ಥಾಪನೆಗೆ 12 ಕೋಟಿ ರೂ ಅನುದಾನ.
Advertisement
* ರಾಮನಗರ ಶೀಘ್ರಗತಿಯಲ್ಲಿ ಬೆಳೆಯುತ್ತಿರುವುದರಿಂದ ರಾಮನಗರದಲ್ಲಿ 300 ಹಾಸಿಗೆಗಳ ಸೂಪರ್ ಸ್ಪೇಶಾಲಿಟಿ ಆಸ್ಪತ್ರೆ ತೆರೆಯಲು 40 ಕೋಟಿ ಅನುದಾನ.
* ಬೆಳಗಾವಿ , ಕಲಬುರಗಿ, ಮೈಸೂರು ನಗರಗಳಲ್ಲಿ ಹೈದ್ರೋಗ, ಕ್ಯಾನ್ಸರ್ ಹಾಗೂ ಇತರೆ ರೋಗಗಳಿಗೆ ಸಂಬಂಧಿಸಿದ ತೃತೀಯ ಹಂತದ ಆರೋಗ್ಯ ಸೇವೆ ಒದಗಿಸಲು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ.
* ಗದಗ, ಕೊಪ್ಪಳ, ಚಾಮರಾಜನಗರ ಹಾಗೂ ಹಾಸನ ನಗರಗಳ ವೈದ್ಯಕೀಯ ಕಾಲೇಜುಗಳಲ್ಲಿ 450 ಹಾಸಿಗೆ ಸಾಮಥ್ರ್ಯದ ಹೊಸ ಆಸ್ಪತ್ರೆಗಳ ಸ್ಥಾಪನೆಗೆ 200 ಕೋಟಿ ರೂ ಅನುದಾನ.