LatestLeading NewsMain PostNational

ಮಹಾರಾಷ್ಟ್ರ ಸಿಎಂ ಶಿಂದೆ ಸಂಪುಟದಲ್ಲಿ ದೇವೇಂದ್ರ ಫಡ್ನವಿಸ್‌ಗೆ ಗೃಹ, ಹಣಕಾಸು ಖಾತೆ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂದೆ ನೇತೃತ್ವದ ಸರ್ಕಾರದ ಸಚಿವ ಸಂಪುಟದಲ್ಲಿ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಅವರಿಗೆ ಗೃಹ ಹಾಗೂ ಹಣಕಾಸು ಖಾತೆಗಳನ್ನು ನೀಡಲಾಗಿದೆ.

ಬಿಜೆಪಿ ಹಾಗೂ ಶಿವಸೇನಾದ ಶಿಂದೆ ಬಣ ಮೈತ್ರಿ ಸರ್ಕಾರದ ರಚನೆಯಾಗಿದ್ದು, ಮಂಗಳವಾರ 18 ಸಚಿವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಯಿತು. ಶಿಂಧೆ ಅವರು ನಗರಾಭಿವೃದ್ಧಿ ಖಾತೆಯನ್ನು ತಮ್ಮಲ್ಲಿಯೇ ಉಳಿಸಿಕೊಂಡಿದ್ದಾರೆ. ಇದನ್ನೂ ಓದಿ: ಪಂಜಾಬ್‌ನಲ್ಲಿ ಇನ್ಮುಂದೆ ಒಬ್ಬ ಶಾಸಕನಿಗೆ ಒಂದೇ ಬಾರಿ ಪಿಂಚಣಿ – 100 ಕೋಟಿ ಉಳಿತಾಯಕ್ಕೆ ಸಿಎಂ ಪ್ಲ್ಯಾನ್‌

ಫಡ್ನವಿಸ್ ಅವರು ಯೋಜನಾ ಖಾತೆಯನ್ನೂ ನಿಭಾಯಿಸಲಿದ್ದಾರೆ. ಬಿಜೆಪಿ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್ ಅವರು ನೂತನ ಕಂದಾಯ ಸಚಿವರಾಗಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಬಿಜೆಪಿ ಸಚಿವ ಸುಧೀರ್ ಮುಂಗಂತಿವಾರ್ ಅವರು ಅರಣ್ಯ ಸಚಿವರಾಗಿದ್ದಾರೆ.

ರಾಜ್ಯ ಬಿಜೆಪಿಯ ಮಾಜಿ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್ ಅವರು ಉನ್ನತ ಮತ್ತು ತಾಂತ್ರಿಕ ಶಿಕ್ಷಣದ ನೂತನ ಸಚಿವರಾಗಿದ್ದು, ಸಂಸದೀಯ ವ್ಯವಹಾರಗಳನ್ನೂ ಅವರು ನಿಭಾಯಿಸಲಿದ್ದಾರೆ. ಇದನ್ನೂ ಓದಿ: ಕೇವಲ ತ್ರಿವರ್ಣ ಧ್ವಜ ಹಾರಿಸುವುದರಿಂದ ನಾವು ದೇಶಭಕ್ತರಾಗುವುದಿಲ್ಲ: ಉದ್ಧವ್ ಠಾಕ್ರೆ ಟಾಂಗ್

ಏಕನಾಥ್ ಶಿಂಧೆ ಬಣದ ದೀಪಕ್ ಕೇಸರ್ಕರ್ ಅವರು ಶಿಕ್ಷಣ ಸಚಿವರಾಗಿದ್ದರೆ, ಅಬ್ದುಲ್ ಸತ್ತಾರ್ ಅವರಿಗೆ ಕೃಷಿ ಖಾತೆ ನೀಡಲಾಗಿದೆ.

Live Tv

Leave a Reply

Your email address will not be published.

Back to top button