ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಏಕನಾಥ್ ಶಿಂಧೆ ಅವರು ಶಿವಸೇನೆ ಸಂಸ್ಥಾಪಕ ಬಾಳ್ ಠಾಕ್ರೆ ಅವರ ಫೋಟೋವನ್ನು ಟ್ವಿಟ್ಟರ್ ಪ್ರೊಫೈಲ್ ಫೋಟೋವಾಗಿ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಬಾಳ್ ಠಾಕ್ರೆ ಅವರೇ ತಮ್ಮ ರಾಜಕೀಯ ಉತ್ತರಾಧಿಕಾರಿ ಎಂಬ ಸೂಕ್ಷ್ಮ ಸಂದೇಶವನ್ನು ರವಾನಿಸಿದ್ದಾರೆ.
ಪ್ರಮಾಣವಚನ ಸಮಾರಂಭದ ನಂತರ ಏಕ್‍ನಾಥ್ ಶಿಂಧೆ ಅವರು, ಹಿಂದೂತ್ವ ವಾದಿ ಮತ್ತು ಮರಾಠಿಗರ ಹೆಮ್ಮೆಯ ನಾಯಕ ಬಾಳಾಸಾಹೇಬ್ ಠಾಕ್ರೆಯವರ ಫೋಟೋವನ್ನು ಟ್ವಿಟ್ಟರ್ ಪ್ರೊಫೈಲ್ ಫೋಟೋವನ್ನು ಬದಲಾಯಿಸಿದ್ದಾರೆ. ಇದನ್ನೂ ಓದಿ: ಇಂದಿನಿಂದ 3 ದಿನ ರಾಹುಲ್ ಗಾಂಧಿ ಕೇರಳ ಪ್ರವಾಸ
ಮಹಾರಾಷ್ಟ್ರದಲ್ಲಿ ಬಿಜೆಪಿ ಬೆಂಬಲದೊಂದಿಗೆ ಶಿವಸೇನೆ ಬಂಡಾಯ ಶಾಸಕರು ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದ್ದರೆ, ಪಕ್ಷವನ್ನು ಹಿಡಿತಕ್ಕೆ ತರುವ ಪ್ರಯತ್ನ ನಡೆಸಲಾಗುತ್ತಿದೆ. ಇದನ್ನೂ ಓದಿ: ಮಹಾರಾಷ್ಟ್ರ ನೂತನ ಸಿಎಂ ಏಕನಾಥ್ ಶಿಂಧೆ, ಡಿಸಿಎಂ ದೇವೇಂದ್ರ ಫಡ್ನವೀಸ್‍ಗೆ ಉದ್ಧವ್ ಠಾಕ್ರೆ ವಿಶ್