ನವದೆಹಲಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಬಿಗ್ ರಿಲೀಫ್ ಸಿಕ್ಕಿದೆ. 2007ರಲ್ಲಿ ದ್ವೇಷ ಭಾಷಣ ಆರೋಪದ ಮೇಲೆ ಅವರ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
2007ರಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರ ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು. ಯೋಗಿ ಆದಿತ್ಯನಾಥ್ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಲಾಗಿತ್ತು. ಇಂದು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠವು ಅರ್ಜಿ ವಜಾ ಮಾಡಿದೆ. ಇದನ್ನೂ ಓದಿ: ಬಿಬಿಎಂಪಿ ವಾರ್ಡ್ ವಿಂಗಡನೆ ಅರ್ಜಿ ವಿಚಾರಣೆಯ ಅಧಿಕಾರ ಹೈಕೋರ್ಟ್‌ಗಿದೆ: ಸುಪ್ರೀಂ
ಸಾಕ್ಷ್ಯಾಧಾರಗಳ ಕೊರತೆಯ ಕಾರಣಕ್ಕೆ 2017ರ ಮೇನಲ್ಲಿ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಲು ರಾಜ್ಯ ಸರ್ಕಾರ ನಿರಾಕರಿಸಿತ್ತು. 2018ರಲ್ಲಿ ರಾಜ್ಯ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ಎತ್ತಿ ಹಿಡಿದಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು.
ಎರಡು ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸಿದ ಆರೋಪದ ಮೇಲೆ ಆಗಿನ ಸಂಸದರಾಗಿದ್ದ ಯೋಗಿ ಆದಿತ್ಯನಾಥ್ ಮತ್ತು ಇತರ ಹಲವರ ವಿರುದ್ಧ ಗೋರಖ್‌ಪುರದ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಇದನ್ನೂ ಓದಿ: ಆರಗ, VVIP ವ್ಯಕ್ತಿಗಳಿಗೆ ನಿವೇಶನ – ಬಿಡಿಎ ಆಯುಕ್ತರ ವರ್ಗಾವಣೆಗೆ ಸುಪ್ರೀಂ ಸೂಚನೆ
ಯೋಗಿ ಆದಿತ್ಯನಾಥ್ ಅವರ ದ್ವೇಷದ ಭಾಷಣದ ನಂತರ ಗೋರಖ್‌ಪುರದಲ್ಲಿ ಆ ದಿನ ಹಲವಾರು ಹಿಂಸಾಚಾರದ ಘಟನೆಗಳು ವರದಿಯಾಗಿವೆ ಎಂದು ಆರೋಪಿಸಲಾಗಿದೆ.