ಮಂಡ್ಯ: ಹಿಂದುತ್ವದಲ್ಲೇ ಬ್ರಾಹ್ಮಣತ್ವವೂ ಇದೆ. ಆದರೆ ನಟ ಚೇತನ್ (Chetan Ahimsa) ಚೀಪ್ ಪಬ್ಲಿಸಿಟಿಗೋಸ್ಕರ ಕಾಂತಾರ ಸಿನಿಮಾ (Cinema) ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಪೇಜಾವರ ಶ್ರೀಗಳು (Vishwa Prasanna Theertha Swamiji) ಕಿಡಿಕಾರಿದ್ದಾರೆ.
Advertisement
ಮಂಡ್ಯದ (Mandya) ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚೀಪ್ ಪಬ್ಲಿಸಿಟಿಗೋಸ್ಕರ ಚೇತನ್ (Chetan Ahimsa) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಾವು ಯಾವುದಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ. ಅವರವರ ನಂಬಿಕೆ ಆಚರಣೆಗಳನ್ನ ವಿರೋಧಿಸುವುದು ತಪ್ಪು. ಅದು ಯಾವ ನೆಲೆಯಲ್ಲಿ ಮಾತನಾಡ್ತಿದ್ದಾರೊ ನನಗೆ ಅರ್ಥವಾಗ್ತಿಲ್ಲ. ಎಲ್ಲವೂ ಅವರು ನೋಡುವ ದೃಷ್ಟಿಕೋನದಲ್ಲಿ ಅಡಗಿರುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾಂತಾರ ನೋಡಿ, ಆದ್ರೆ ಓ.. ಎಂದು ಕೂಗ್ಬೇಡಿ – ಆಚಾರಕ್ಕೆ ಧಕ್ಕೆಯಾಗುತ್ತೆ ಎಂದ ರಿಷಬ್
Advertisement
Advertisement
ಹಿಂದುತ್ವ ಹಾಗೂ ಬ್ರಾಹ್ಮಣತ್ವ ಬೇರೆ ಬೇರೆ ಅಲ್ಲ. ಹಿಂದುತ್ವ ವಿಶಾಲವಾದದ್ದು, ಅದರೊಳಗೇ ಬ್ರಾಹ್ಮಣತ್ವವೂ ಬರುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಜನ, ಜನರ ಮೇಲೆ ನಿಯಂತ್ರಣ ಕಳೆದುಕೊಂಡು ಹುಚ್ಚರಾಗ್ತಾರೆ: ಕೋಡಿ ಶ್ರೀ
Advertisement
ನಟ ಚೇತನ್ ಹೇಳಿದ್ದೇನು?
ಕಾಂತಾರ ಸಿನಿಮಾ ನಿರ್ದೇಶಕ ರಿಷಬ್ ಶೆಟ್ಟಿ (Rishabh Shetty) ಹೇಳಿಕೆ ಕುರಿತು ಪ್ರತಿಕ್ರಿಯಿಸಿದ್ದ ನಟ ಚೇತನ್ `ನಮ್ಮ ಕನ್ನಡದ ಚಲನಚಿತ್ರ `ಕಾಂತಾರ’ವು (Kantara) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿಯ ಸಂಗತಿ. ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದಾರೆ. ಇದು ನಿಜವಲ್ಲ. ನಮ್ಮ ಪಂಬದ/ನಲಿಕೆ/ಪರವರ ಬಹುಜನ ಸಂಪ್ರದಾಯಗಳು, ವೈದಿಕ-ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇರುವವು. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲೆಯಾಗಲಿ, ಅದರಾಚೆಯಾಗಲಿ, ಸತ್ಯ ಸಂಗತಿಗಳೊಂದಿಗೆ ತೋರಿಸಬೇಕೆಂದು ನಾವು ಕೇಳುತ್ತೇವೆ ಎಂದು ತಮ್ಮ ಫೇಸ್‌ಬುಕ್ ಪುಟದಲ್ಲಿ ಬರೆದುಕೊಂಡಿದ್ದರು.