ಮುಂಬೈ: ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಡಾ. ಪ್ರತೀತ್ ಸಮ್ದಾನಿ ಅವರು ದಿವಂಗತ ಲತಾ ಮಂಗೇಶ್ಕರ್ರವರು ಕೊನೆಯುಸಿರೆಳೆಯುವ ಸಂದರ್ಭದ ಅಂತಿಮ ಕ್ಷಣಗಳಲ್ಲಿ ‘ಅವರ ಮುಖದಲ್ಲಿ ನಗು ಇತ್ತು’ ಎಂಬುದನ್ನು ಬಹಿರಂಗಪಡಿಸಿದ್ದಾರೆ.
ಕಳೆದ ಮೂರು ವರ್ಷಗಳಿಂದ ಲತಾ ಅವರಿಗೆ ಚಿಕಿತ್ಸೆ ನೀಡುತ್ತಿದ್ದ ಡಾ. ಸಮ್ದಾನಿ, ಲತಾ ಜೀ ಅವರ ಆರೋಗ್ಯ ಹದಗೆಟ್ಟಾಗ ನಾನು ಅವರಿಗೆ ಚಿಕಿತ್ಸೆ ನೀಡುತ್ತಿದ್ದೆ. ಆದರೆ ಅವರ ಸ್ಥಿತಿ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿತ್ತು. ಆದರೂ ನಾವು ನಮ್ಮ ಪ್ರಯತ್ನವನ್ನು ಮುಂದುವರೆಸಿದ್ದೆವು. ಆದರೆ ಅಂತಿಮವಾಗಿ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದರು. ಇದನ್ನೂ ಓದಿ: ದಿ.ಲತಾ ಮಂಗೇಶ್ಕರ್ಗೆ ಮರಳು ಕಲಾಕೃತಿ ಅರ್ಪಿಸಿದ ಸುದರ್ಶನ್ ಪಟ್ನಾಯಕ್
Advertisement
Advertisement
ಲತಾ ಮಂಗೇಶ್ಕರ್ ಅವರು ಆಸ್ಪತ್ರೆಗೆ ದಾಖಲಾಗುವ ಮುನ್ನ ನನಗೆ ಒಂದು ಮಾತನ್ನು ಹೇಳಿದ್ದರು. ಯಾವಾಗಲೂ ನಿಮ್ಮ ಆಸ್ಪತ್ರೆಗೆ ಬರುವ ರೋಗಿಗಳೆಲ್ಲರನ್ನೂ ಸಮಾನವಾಗಿ ನೋಡಿಕೊಳ್ಳಿ ಎಂದು ಹೇಳುತ್ತಿದ್ದರು. ಅಲ್ಲದೆ ಅವರು ತಮ್ಮ ಆರೋಗ್ಯಕ್ಕೆ ಸಂಬಂಧಪಟ್ಟ ಯಾವುದೇ ಚಿಕಿತ್ಸೆಯನ್ನು ತೆಗೆದುಕೊಳ್ಳಲು ಯಾವಾಗಲೂ ಸಿದ್ಧರಾಗಿರುತ್ತಿದ್ದರು. ಅವರು ಎಂದಿಗೂ ಚಿಕಿತ್ಸೆಗೆ ಹೆದರಿ ಅದರಿಂದ ದೂರವಿರಲಿಲ್ಲ ಎಂದರು. ಇದನ್ನೂ ಓದಿ: ಲತಾ ಮಂಗೇಶ್ಕರ್ ಅವರನ್ನು ಸಚಿನ್ ತೆಂಡೂಲ್ಕರ್ ಏನೆಂದು ಕರೆಯುತ್ತಿದ್ದರು ಗೊತ್ತಾ?
Advertisement
ಲತಾ ಜೀ ಅವರ ಸರಳ ಸ್ವಭಾವದ ಬಗ್ಗೆ ಮಾತನಾಡುತ್ತಾ ಡಾ ಸಮ್ದಾನಿ ಅವರು, ನನ್ನ ಜೀವನದುದ್ದಕ್ಕೂ ನಾನು ಅವರ ನಗುವನ್ನು ನೆನಪಿಟ್ಟುಕೊಂಡಿರುತ್ತೇನೆ. ನಿಧನ ಹೊಂದುವ ಅಂತಿಮ ಕ್ಷಣಗಳಲ್ಲಿಯೂ ಅವರ ಮುಖದಲ್ಲಿ ನಗು ಇತ್ತು. ಕಳೆದ ಕೆಲವು ವರ್ಷಗಳಿಂದ ಅವರ ಆರೋಗ್ಯವು ಸರಿ ಇರಲಿಲ್ಲ. ಆದ್ದರಿಂದ ಅವರು ಯಾರೊಂದಿಗೂ ಹೆಚ್ಚು ಭೇಟಿಯಾಗಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದರು.
Advertisement
ನಾನು ಲತಾ ಅವರಿಗೆ ಚಿಕಿತ್ಸೆ ನೀಡುತ್ತಿರುವಾಗಿನಿಂದ ಅವರು ತುಂಬಾ ಕಡಿಮೆ ಮಾತನಾಡುತ್ತಿದ್ದರು. ಹೆಚ್ಚು ಮಾತನಾಡುತ್ತಿರಲಿಲ್ಲ. ಆದರೆ ದೇವರ ಯೋಜನೆ ಬೇರೆಯೇ ಇತ್ತು. ಅವರು ನಮ್ಮೆಲ್ಲರನ್ನೂ ಶಾಶ್ವತವಾಗಿಯೇ ಬಿಟ್ಟು ಹೋದರು ಎಂದು ಬೇಸರ ವ್ಯಕ್ತಪಡಿಸಿದರು.
ಭಾರತದ ಗಾನ ಕೋಗಿಲೆ ಎಂದೇ ಹೆಸರಾಗಿದ್ದ ಲತಾ ಮಂಗೇಶ್ಕರ್ ಅವರು ಜನವರಿಯಲ್ಲಿ ಕೋವಿಡ್ -19 ಮತ್ತು ನ್ಯುಮೋನಿಯಾದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಜನವರಿ 8 ರಂದು, 92 ವರ್ಷ ವಯಸ್ಸಿನ ಮಂಗೇಶ್ಕರ್ ಅವರನ್ನು ತೀವ್ರ ನಿಗಾ ಘಟಕಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೋವಿಡ್ನಿಂದ ಚೇತರಿಸಿಕೊಂಡ ನಂತರವೂ, ಶನಿವಾರ ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದ್ದು ಅವರನ್ನು ವೆಂಟಿಲೇಟರ್ನಲ್ಲಿ ಇರಿಸಲಾಗಿತ್ತು. ಈ ವೇಳೆ ಚಿಕಿತ್ಸೆ ಫಲಕಾರಿಯಾದೇ ಭಾನುವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಮುಂಬೈನ ಶಿವಾಜಿ ಪಾರ್ಕ್ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಲತಾ ಅವರ ಅಂತ್ಯಕ್ರಿಯೆ ನಡೆಸಲಾಯಿತು.