LatestLeading NewsMain PostNational

ಮಕ್ಕಳ ಕಳ್ಳರೆಂದು ಭಾವಿಸಿ ಸಾಧುಗಳಿಗೆ ಹಿಗ್ಗಾಮುಗ್ಗ ಥಳಿತ

ಮುಂಬೈ: ಮಕ್ಕಳ ಕಳ್ಳರೆಂದು ಶಂಕಿಸಿ ಸಾಧುಗಳನ್ನೇ ಹಿಡಿದು ಥಳಿಸಿರುವ ಘಟನೆ ಮಹಾರಾಷ್ಟ್ರದಲ್ಲಿ (Maharashtra) ನಡೆದಿದೆ.

ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ನಾಲ್ವರು ಸಾಧುಗಳ ಮೇಲೆ ಗುಂಪೊಂದು ಮಕ್ಕಳ ಕಳ್ಳರೆಂದು ಶಂಕಿಸಿ ಹಲ್ಲೆ ನಡೆಸಿರುವ ದೃಶ್ಯದ ವೀಡಿಯೋ ವೈರಲ್ ಆಗಿದೆ. ಜಿಲ್ಲೆಯ ಲವಣ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: UP ಬಿಜೆಪಿ ಶಾಸಕನ ತಾಯಿಯ ಕಿವಿ ಕತ್ತರಿಸಿ ಓಲೆ ಕದ್ದ ಕಳ್ಳರು

ಸಾಧುಗಳು ಕಿರಾಣಿ ಅಂಗಡಿಯೊಂದರಲ್ಲಿ ಕುಳಿತು ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ಕೋಲುಗಳನ್ನು ಹಿಡಿದು ಬಂದ ಗುಂಪೊಂದು ಅಂಗಡಿಯ ಹೊರಗೆ ಸಾಧುಗಳನ್ನು ಥಳಿಸಿದ್ದಾರೆ.

ಮಹಾರಾಷ್ಟ್ರದ ಬಿಜೆಪಿ ಶಾಸಕ ರಾಮ್ ಕದಮ್ ಘಟನೆಯನ್ನು ಖಂಡಿಸಿದ್ದಾರೆ. ಸಾಧುಗಳ ಮೇಲಿನ ಇಂತಹ ದುಷ್ಕೃತ್ಯವನ್ನು ಸಹಿಸಲಾಗುವುದಿಲ್ಲ ಎಂದು ಸರ್ಕಾರ ಕೂಡ ಬೇಸರ ವ್ಯಕ್ತಪಡಿಸಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ವೀಡಿಯೋ ಸಂದೇಶದಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: Rantac ಸೇರಿದಂತೆ 26 ಔಷಧಿಗಳನ್ನು ನಿಷೇಧಿಸಿದ ಕೇಂದ್ರ

ಪಾಲ್ಘರ್‌ನಲ್ಲಿ ನಡೆದ ಸಾಧುಗಳ ಹತ್ಯೆ ಪ್ರಕರಣದಲ್ಲಿ ಅಂದಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ (Uddhav Thackeray) ಅವರ ಸರ್ಕಾರವು ಅವರಿಗೆ ಅನ್ಯಾಯವನ್ನು ಮಾಡಿದೆ. ಆದರೆ ಪ್ರಸ್ತುತ ಮಹಾರಾಷ್ಟ್ರ ಸರ್ಕಾರವು ಯಾವುದೇ ಸಾಧುವಿನ ಮೇಲಿನ ದಾಳಿಯನ್ನು ಸಹಿಸುವುದಿಲ್ಲ ಎಂದು 2020ರ ಘಟನೆಯನ್ನು ಉಲ್ಲೇಖಿಸಿ ಸರ್ಕಾರ ಸ್ಪಷ್ಟನೆ ನೀಡಿದೆ.

Live Tv

Leave a Reply

Your email address will not be published.

Back to top button