– ಹಾರ್ದಿಕ್ ಪಾಂಡ್ಯ ಮುಂದಿರುವ ಸವಾಲುಗಳೇನು?
ನವದೆಹಲಿ: ಇತ್ತೀಚೆಗೆ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಸಿಎಸ್‌ಕೆ (MI vs CSK) ಬ್ಯಾಟರ್ ಎಂ.ಎಸ್ ಧೋನಿ, ಹಾರ್ದಿಕ್ ಪಾಂಡ್ಯ (Hardik Pandya) ಅವರ ಬೌಲಿಂಗ್‌ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ್ದರು. ಆ ಓವರ್ ಮುಕ್ತಾಯದ ವೇಳೆಗೆ ಪಾಂಡ್ಯ 26 ರನ್ ಬಿಟ್ಟುಕೊಟ್ಟಿದ್ದರು. ಅಲ್ಲದೇ ಮುಂಬೈ ಇಂಡಿಯನ್ಸ್ 20 ರನ್‌ಗಳ ಅಂತರದಿಂದಲೂ ಸೋಲುವಂತಾಯ್ತು. ಮುಂಬೈ ಈ ಪಂದ್ಯ ಸೋತ ಬಳಿಕ ಹಾರ್ದಿಕ್ ಪಾಂಡ್ಯ ಅವರ ಕಳಪೆ ಬೌಲಿಂಗ್ ಬಗ್ಗೆ ಭಾರೀ ಚರ್ಚೆ ಹುಟ್ಟಿಕೊಂಡಿದೆ. ಅಲ್ಲದೇ ಇದು ಅವರ ವಿಶ್ವಕಪ್ ಕೆರಿಯರ್ ಮೇಲೂ ಪರಿಣಾಮ ಉಂಟುಮಾಡಿದೆ.
Advertisement
ಮುಂಬರುವ ಟಿ20 ವಿಶ್ವಕಪ್‌ಗೆ (T20 World Cup) ಭಾರತ ತಂಡದಲ್ಲಿ ಸ್ಥಾನ ಗಿಟ್ಟಿಸಲು ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಎದುರು ನೋಡುತ್ತಿದ್ದಾರೆ. ಆದರೆ ಸದ್ಯ ನಡೆಯುತ್ತಿರುವ ಐಪಿಎಲ್‌ನಲ್ಲಿ (IPL 2024) ಪಾಂಡ್ಯ ಅವರ ಬೌಲಿಂಗ್ ಪ್ರದರ್ಶನದ ಮೇಲೆ ಅವರ ವಿಶ್ವಕಪ್ ಭವಿಷ್ಯ ಅಡಗಿದೆ ಎಂದು ಹೇಳಲಾಗುತ್ತಿದೆ. ಇದೇ ವೇಳೆ ಬ್ಯಾಟಿಂಗ್‌ನಲ್ಲಿ ಅಬ್ಬರಿಸುತ್ತಿರುವ ಶಿವಂ ದುಬೆ, ಸ್ಪಿನ್ನರ್ ಯಜುವೇಂದ್ರ ಚಹಲ್‌ರನ್ನ ಆಯ್ಕೆ ಸಮಿತಿ ವಿಶ್ವಕಪ್‌ಗೆ ಪರಿಗಣಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
Advertisement
Advertisement
ಕಳೆದ ವಾರ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma), ಕೋಚ್ ರಾಹುಲ್ ದ್ರಾವಿಡ್ ಹಾಗೂ ಆಯ್ಕೆ ಸಮಿತಿ ಸದಸ್ಯರು ಸಭೆ ನಡೆಸಿದ್ದಾರೆ. ಸಭೆಯಲ್ಲಿ ಹಾರ್ದಿಕ್ ಬಗ್ಗೆಯೂ ಚರ್ಚೆಯಾಗಿದ್ದು, ಅವರು ಐಪಿಎಲ್‌ನಲ್ಲಿ ಉತ್ತಮವಾಗಿ ಬೌಲ್ ಮಾಡಿದರಷ್ಟೇ ವಿಶ್ವಕಪ್‌ಗೆ ಆಯ್ಕೆ ಮಾಡುವ ಬಗ್ಗೆ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ. ಸದ್ಯ ಐಪಿಎಲ್‌ನಲ್ಲಿ ಆಡಿರುವ 6 ಪಂದ್ಯಗಳ ಪೈಕಿ 4ರಲ್ಲಿ ಹಾರ್ದಿಕ್ 11 ಓವರ್ ಬೌಲ್ ಮಾಡಿದ್ದಾರೆ. ಆದರೆ 12ರ ಎಕಾನಮಿಯಲ್ಲಿ ರನ್ ಬಿಟ್ಟುಕೊಟ್ಟಿದ್ದು, ಕೇವಲ 3 ವಿಕೆಟ್ ಪಡೆದಿದ್ದಾರೆ. ಇನ್ನುಳಿದ ಪಂದ್ಯಗಳಲ್ಲಿ ಉತ್ತಮ ಬೌಲ್ ಮಾಡಿದರೆ ಅವರು ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಬಹುದು ಎನ್ನಲಾಗುತ್ತಿದೆ.
Advertisement
ಮತ್ತೊಂದೆಡೆ ಸಿಎಸ್‌ಕೆ ತಂಡದ ಪರ ಮಧ್ಯಮ ಕ್ರಮಾಂಕದ ಬ್ಯಾಟರ್ ಶಿವಂ ದುಬೆ ಬ್ಯಾಟಿಂಗ್‌ನಲ್ಲಿ ಮಿಂಚುತ್ತಿದ್ದಾರೆ. ಇದರೊಂದಿಗೆ ಪರ್ಪಲ್ ಕ್ಯಾಪ್ ರೇಸ್‌ನಲ್ಲಿರುವ ಆರ್‌ಆರ್ ಆಟಗಾರ ಯಜುವೇಂದ್ರ ಚಾಹಲ್ ಅವರ ಹೆಸರೂ ಸಹ ವಿಶ್ವಕಪ್ ತಂಡದಲ್ಲಿ ಕೇಳಿಬರುತ್ತಿದೆ. ಇದರಿಂದ ಹಾರ್ದಿಕ್ ಪಾಂಡ್ಯ ನಾಯಕತ್ವದ ಜೊತೆಗೆ ತಮ್ಮ ಆಲ್‌ರೌಂಡ್ ಪ್ರದರ್ಶನದಲ್ಲಿ ಯಾವ ರೀತಿ ಯಶಸ್ಸು ಕಂಡುಕೊಳ್ಳುತ್ತಾರೆ ಎಂದಬುದನ್ನು ಮುಂದೆ ಕಾದು ನೋಡಬೇಕಿದೆ.
ಏಕದಿನ ವಿಶ್ವಕಪ್‌ನಿಂದಲೂ ಹೊರಗುಳಿದಿದ್ದ ಪಾಂಡ್ಯ:
ಕಳೆದ ವರ್ಷ ಭಾರತದ ಆತಿಥ್ಯದಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ (ICC World Cup) ಟೂರ್ನಿಯ 17ನೇ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಸೆಣಸಾಟ ನಡೆಸಿದ್ದವು. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ 9ನೇ ಓವರ್ ನಲ್ಲಿ ಬೌಲಿಂಗ್ ಮಾಡುತ್ತಿದ್ದ ಪಾಂಡ್ಯ 3ನೇ ಎಸೆತ ಬೌಲಿಂಗ್ ಮಾಡಿದಾಗ ಕ್ರೀಸ್‌ನಲ್ಲಿದ್ದ ಲಿಟ್ಟನ್ ದಾಸ್ ಸ್ರೈಟ್‌ಡ್ರೈವ್ ಮಾಡಿದರು. ಆಗ ಪಾಂಡ್ಯ ಕಾಲಿನಿಂದ ಚೆಂಡನ್ನು ತಡೆಯಲು ಪ್ರಯತ್ನಿಸಿದಾಗ ಬ್ಯಾಲೆನ್ಸ್ ತಪ್ಪಿ ಕಾಲು ಉಳುಕಿಸಿಕೊಂಡರು. ತಕ್ಷಣವೇ ಫಿಸಿಯೋ ಥೆರಪಿಸ್ಟ್ ಬಂದು ಚಿಕಿತ್ಸೆ ನೀಡಿದರೂ ಮತ್ತೆ ಬೌಲಿಂಗ್ ಮಾಡಲು ಸಾಧ್ಯವಾಗಿಲ್ಲ. ಹಾಗಾಗಿ ಆಟದ ಮಧ್ಯದಲ್ಲೇ ಮೈದಾನ ತೊರೆಯಲು ನಿರ್ಧರಿಸಿದರು. ಬಳಿಕ ರೋಹಿತ್ ಶರ್ಮಾ ಜೊತೆ ಮಾತುಕತೆ ನಡೆದ ಕೊಹ್ಲಿ ಉಳಿದಿದ್ದ ಮೂರು ಎಸೆತಗಳನ್ನು ತಾವೇ ಎಸೆಯುವ ಮೂಲಕ ಬೌಲಿಂಗ್ ಪೂರ್ಣಗೊಳಿಸಿದರು. ಆ ಬಳಿಕ ವೃತ್ತಿಪರ ಕ್ರಿಕೆಟ್‌ನಿಂದ ದೀರ್ಘಕಾಲ ಹೊರಗುಳಿದಿದ್ದರು.