ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧದ ಇಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೆಹಲಿಯ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ವಿಚಾರಣೆ ವೇಳೆ ಅಕ್ರಮ ಹಣ ವರ್ಗಾವಣೆ ತಡೆ (PMLA)ನಲ್ಲಿ IPC 120B (ವ್ಯವಸ್ಥಿತ ಪಿತೂರಿ) ಸೇರ್ಪಡೆ ಬಗ್ಗೆ ಕೋರ್ಟ್ ಸ್ಪಷ್ಟನೆ ಪಡೆಯಿತು.
ಅಕ್ರಮ ಹಣ ವರ್ಗಾವಣೆ ಮತ್ತು ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಶೇಷ ನ್ಯಾಯಾಲಯಕ್ಕೆ ಶುಕ್ರವಾರ ಜಾರ್ಜ್‍ಶೀಟ್ ಸಲ್ಲಿಸಿದ್ದರು. ಜಾರ್ಜ್‍ಶೀಟ್‍ನಲ್ಲಿ 120B ಉಲ್ಲೇಖಕ್ಕೆ ಸಂಬಂಧಿಸಿದಂತೆ ಇಂದು ಕೋರ್ಟ್ ಮುಂದೆ ಹಾಜರಾಗಿ ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಮೊಮ್ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ – ಉತ್ತರಾಖಂಡದ ಮಾಜಿ ಸಚಿವ ರಾಜೇಂದ್ರ ಬಹುಗುಣ ಆತ್ಮಹತ್ಯೆ
ಇಡಿ ಪರ ವಾದ ಮಂಡಿಸಿದ ವಕೀಲರು, PMLA ಜೊತೆಗೆ IPC 120B ಜೊತೆಗೂಡಿಸಿ ತನಿಖೆ ನಡೆಸಬಹುದು ಮತ್ತು ಅದನ್ನು ವಿಚಾರಣೆ ನಡೆಸುವ ಅಧಿಕಾರವೂ ವಿಶೇಷ ನ್ಯಾಯಾಲಯಕ್ಕಿದೆ. ಇದಕ್ಕೆ ಸಂಬಂಧಿಸಿದಂತೆ ಪ್ರಕರಣದ ಮತ್ತೋರ್ವ ಆರೋಪಿ ಸಚಿನ್ ನಾರಯಣ್ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಇದಲ್ಲದೇ ಇನ್ನು ಎರಡು ಹೈಕೋರ್ಟ್‍ಗಳು ಈ ಬಗ್ಗೆ ಆದೇಶ ನೀಡವೆ ಎಂದು ಹೇಳಿದರು. ಇದನ್ನೂ ಓದಿ: ರಾಜ್ಯಸಭೆ ಚುನಾವಣೆಗೆ ಟಿಕೆಟ್ ನನಗೆ ಕೊಡಬೇಡಿ- ನಡ್ಡಾಗೆ ಸುರಾನಾ ಪತ್ರ
ಈ ಸಂದರ್ಭದಲ್ಲಿ ವಕೀಲರನ್ನು ನ್ಯಾಯಾಂಗ ವ್ಯಾಪ್ತಿಯ ಬಗ್ಗೆ ನ್ಯಾಯಾಧೀಶ ವಿಕಾಸ್ ದುಲ್ ಪ್ರಶ್ನೆ ಮಾಡಿದರು. ಇದಕ್ಕೆ ಉತ್ತರಿಸಿದ ವಕೀಲರು, ದೆಹಲಿಯ ಸಬ್ದರಜಂಗ್ ಎನ್ಕ್ಲೇವ್‍ನಲ್ಲಿರುವ ಡಿ.ಕೆ ಶಿವಕುಮಾರ್ ನಿವಾಸದಲ್ಲಿ ಐಟಿ ದಾಳಿ ವೇಳೆ 8.5 ಕೋಟಿ ಹಣ ದೊರಕಿತ್ತು, ಈ ಹಿನ್ನಲೆ ದೆಹಲಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ಸ್ಪಷ್ಟನೆ ನೀಡಿದರು. ವಾದವನ್ನು ಆಲಿಸಿದ ನ್ಯಾಯಾಧೀಶರು ಪಿಎಂಎಲ್‍ಎ ನ್ಯಾಯಾಲಯ IPC 120B ವಿಚಾರಣೆ ನಡೆಸುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿ ವಿಚಾರಣೆಯನ್ನು ಮೇ 31 ಕ್ಕೆ ವಿಚಾರಣೆ ಮುಂದೂಡಿದರು.