ಕೊಪ್ಪಳ: ತ್ರಿವಳಿ ಜಿಲ್ಲೆಯ ರೈತರ ಜೀವನಾಡಿ ತುಂಗಭದ್ರಾ ಜಲಾಶಯಕ್ಕೆ ಈ ಬಾರಿ ಬೇಸಿಗೆಯಲ್ಲಿ ಸುಮಾರು 7 ಟಿಎಂಸಿ ನೀರು ಹರಿದು ಬಂದಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿದೆ.
ಇದೆ ಮೊದಲ ಬಾರಿಗೆ ಬೇಸಿಗೆಯಲ್ಲಿ ಡ್ಯಾಂಗೆ ನೀರು ಹರಿದು ಬರುತ್ತಿದೆ. ಕಳೆದ ವರ್ಷ ಮುಂಗಾರು ಮತ್ತು ಹಿಂಗಾರು ಬೆಳೆ ಸೇರಿ ಕಾರ್ಖಾನೆಗೂ ಸಮರ್ಪಕ ನೀರು ವಿತರಣೆ ಮಾಡಲಾಗಿದೆ. ಆದರೂ ಡ್ಯಾಂನಲ್ಲಿ ಇಂದು 12.881 ಟಿಎಂಸಿ ನೀರು ಸಂಗ್ರಹ ಇದೆ. ಸದ್ಯ 500 ಕ್ಯೂಸೆಕ್ ನೀರು ತುಂಗಭದ್ರಾ ಜಲಾಶಯಕ್ಕೆ ಹರಿದು ಬರುತ್ತಿದೆ.
Advertisement
Advertisement
ರಾಜ್ಯದ ವಿವಿಧ ಕಡೆ ಪೂರ್ವ ಮುಂಗಾರು ಮಳೆ ಬೀಳುತ್ತಿರುವ ಪರಿಣಾಮ ತುಂಗಭದ್ರಾ ಜಲಾಶಯಕ್ಕೆ ನೀರು ಬರುತ್ತಿದೆ. ಕಳೆದ ವರ್ಷ 2021ಕ್ಕೆ ಜಲಾಶಯದಲ್ಲಿ ಕೇವಲ 5 ಟಿಎಂಸಿ ನೀರು ಮಾತ್ರ ಸಂಗ್ರಹವಾಗಿತ್ತು. ಆದರೆ ಈ ಬಾರಿ ಜಲಾಶಯದಲ್ಲಿ ಎರಡು ಬೆಳೆಗೆ ಸಾಕಾಗುವಷ್ಟು ನೀರು ಲಭ್ಯವಾಗಿದೆ. ಇದನ್ನೂ ಓದಿ: ಬಂಧಿತ ಐಎಎಸ್ ಅಧಿಕಾರಿ ಜೊತೆಗಿದ್ದ ಅಮಿತ್ ಶಾ ಫೋಟೊ ಶೇರ್ – ನಿರ್ದೇಶಕನ ವಿರುದ್ಧ ಪ್ರಕರಣ ದಾಖಲು
Advertisement
Advertisement
ಕಳೆದ ವರ್ಷದಲ್ಲಿ ಡ್ಯಾಂಗೆ 40 ವರ್ಷದಲ್ಲಿಯೇ ಸುಮಾರು 230 ಟಿಎಂಸಿ ನೀರು ಜಲಾಶಯಕ್ಕೆ ಹರಿದು ಬಂದಿತ್ತು. ಈ ಬಾರಿ ಮುಂಗಾರು ಆರ್ಭಟ ಜೋರಾಗಿದ್ದು, ಮತ್ತೆ ಜಲಾಶಯದಲ್ಲಿ ವರ್ಷಪೂರ್ತಿ ನೀರು ಇರಲಿದೆ. ಜೂನ್ ಹೊತ್ತಿಗೆ ಇನ್ನಷ್ಟು ಪ್ರಮಾಣದಲ್ಲಿ ಒಳಹರಿವು ಹೆಚ್ಚಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಭೂ ವಿವಾದದ ತೀರ್ಪು 108 ವರ್ಷದ ಬಳಿಕ ಪ್ರಕಟ
ಕ್ಯೂಸೆಕ್ ಎಂಬುದು Cubic feet per Secondನ ಹ್ರಸ್ವರೂಪ ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯೂಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯೂಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯೂಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಅಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.