ಬೆಂಗಳೂರು: ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.
Advertisement
ಮಹಾರಾಷ್ಟ್ರದ ಮಧ್ಯ ಕರಾವಳಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆ ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. 24 ರಿಂದ 28 ರವರೆಗೆ ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕದ್ದುಮುಚ್ಚಿ ಮದುವೆ ಆಗಿಲ್ಲ, ಬಾಡಿಗೆ ತಾಯಿ ಸುಳ್ಳು : ನಯನತಾರಾ
Advertisement
ಈ ಭಾಗದಲ್ಲಿ 24, 25 ರಂದು ಗುಡುಗು ಸಿಡಿಲಿನ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂ.ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ತುಮಕೂರು ಜಿಲ್ಲೆಯಲ್ಲಿ 24 ರಿಂದ 26 ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಲ್ಲೇಶ್ವರಂ 18ನೇ ಅಡ್ಡರಸ್ತೆ ಮೈದಾನದಲ್ಲಿ ವಾಕಿಂಗ್ ಪಥ ನಿರ್ಮಾಣ ಇಲ್ಲ: ಅಶ್ವತ್ಥನಾರಾಯಣ
Advertisement
Advertisement
27, 28ರಂದು ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಗದಗ, ಹಾವೇರಿ, ಬಾಗಲಕೋಟೆ, ಜಿಲ್ಲೆಗಳಲ್ಲಿ 24 ರಿಂದ 28ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.