– ಯಾರಿಗೆ ಯಾವುದು ಬೇಕೋ ತೀರ್ಮಾನ ಮಾಡಿ ಎಂದ ಗೃಹ ಸಚಿವ
ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ (Police Department) ಸೆಲ್ಯೂಟ್ ಇರುತ್ತೆ, ಒದೆನೂ ಇರುತ್ತೆ, ಮುಂದುವರೆದು ಗುಂಡು ಹಾರಿಸೋದು ಇರುತ್ತೆ. ಯಾರಿಗೆ ಯಾವುದು ಬೇಕೋ ತೀರ್ಮಾನ ಮಾಡಿ ಎಂದು ಗೃಹಸಚಿವ ಜಿ. ಪರಮೇಶ್ವರ್ (G.Parameshwara) ಹೇಳಿದ್ದಾರೆ.
Advertisement
ವಿಧಾನಸೌಧದಲ್ಲಿ ಕೊಠಡಿ ಪೂಜೆ ಮಾಡಿದ ಬಳಿಕ ಮಾತನಾಡಿದ ಅವರು, ಪೊಲೀಸ್ ಇಲಾಖೆ ಶಿಸ್ತಿನ ಇಲಾಖೆ. ಪೊಲೀಸ್ ಇಲಾಖೆಯಲ್ಲಿ ಸೆಲ್ಯೂಟ್ ಸಿಗುತ್ತದೆ. ಒದೆನೂ ಸಿಗುತ್ತದೆ, ಮುಂದುವರಿದು ಗುಂಡು ಹಾರಿಸೋದು ಇರುತ್ತದೆ. ಆದರೆ ಯಾರಿಗೆ ಯಾವುದು ಬೇಕೋ ತೀರ್ಮಾನ ಮಾಡಿ. ಲಾಠಿ ಏಟು ತಿನ್ನಬೇಕೋ ಅಥವಾ ಗುಂಡು ಹಾರಿಸಿಕೊಳ್ಳಬೇಕೋ ಅಥವಾ ಶಾಂತಿಯಿಂದ ರಾಜ್ಯ ನಡೆಸಬೇಕೋ ಎಂದು ಜನರೇ ತೀರ್ಮಾನ ಮಾಡಲಿ ಎಂದರು. ಇದನ್ನೂ ಓದಿ: ಮಕ್ಕಳ ಜೊತೆ ಕ್ರಿಕೆಟ್ ಆಡಿದ ರೇಣುಕಾಚಾರ್ಯ
Advertisement
Advertisement
ಬಜರಂಗದಳ (Bajarang Dal) ನಿಷೇಧ ಮಾಡುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಮ್ಮ ಪ್ರಣಾಳಿಕೆಯಲ್ಲಿ ಯಾರು ಶಾಂತಿ ಕದಡುತ್ತಾರೆ. ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ವ್ಯಕ್ತಿ ಅಥವಾ ಸಂಘಟನೆಯ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದೇವೆ. ಅವರು ಯಾರೂ ಅದನ್ನು ಮಾಡಲ್ಲ ಎಂದರೆ ಭಯ ಪಡುವ ಅಗತ್ಯವಿಲ್ಲ. ಮಾಡುತ್ತೇವೆ ಎಂದರೆ ಅವರಿಗೆ ಭಯ ಆಗುತ್ತದೆ. ಕಾನೂನು ಮುರಿಯಲ್ಲ ಎಂದರೆ ಭಯ ಯಾಕೆ? ಅದು ಅವರಿಗೆ ಅರ್ಥ ಆದರೆ ಸಾಕು ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಮಂಥರ್ ಗೌಡ ಗೆಲುವು – 135 ಕಿಮೀ ದೂರದ ಚಾಮುಂಡಿ ಬೆಟ್ಟಕ್ಕೆ ಪಾದಯಾತ್ರೆ
Advertisement
ನಮ್ಮ ಕಚೇರಿಯ ಪೂಜೆ ಮಾಡಿದ್ದೇವೆ. ಅನೇಕ ಜನ ಟೀಕೆ ಟಿಪ್ಪಣಿ ಮಾಡಬಹುದು. ದೇವರ ಹೆಸರಲ್ಲಿ ಪ್ರಮಾಣ ವಚನ ತೆಗೆದುಕೊಳ್ಳುತ್ತೇವೆ. ದೇವರನ್ನು ನೆನೆಸಿಕೊಂಡು ಕಚೇರಿ ಪೂಜೆ ಮಾಡಿದ್ದೇವೆ. ಇದು ನಮ್ಮೆಲ್ಲರಿಗೂ ಶಕ್ತಿ ಕೊಡುವಂತದ್ದು. ರಾಜ್ಯದ ಕಾನೂನು ವ್ಯವಸ್ಥೆಯನ್ನು ಕಾಪಾಡಬೇಕು. ಮುಖವಾಣಿಯಲ್ಲಿರುವ ಗೃಹ ಖಾತೆ ಬಹಳ ಪ್ರಾಮುಖ್ಯ. ಇಲ್ಲಿ ಏನೇ ವಿದ್ಯಮಾನಗಳು ನಡೆದರೂ ಜನತೆಗೆ ಮುಟ್ಟುತ್ತದೆ. ಇಲ್ಲಿಂದ ಒಳ್ಳೆಯ ಕೆಲಸಗಳಾಗಲಿ. ಕ್ಯಾಬಿನೆಟ್‌ನಲ್ಲಿ ಗ್ಯಾರಂಟಿ ಯೋಜನೆ ಬಗ್ಗೆ ಬ್ರೀಫ್ ಮಾಡುತ್ತೇವೆ. ಈಗ ಏನೇ ಹೇಳಿದರೂ ಅಪ್ರಸ್ತುತವಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಕೃಷಿ ಚಟುವಟಿಕೆ ಮಾದರಿಯ ಕೇಕ್ ಮಾಡಿ ಚೆಲುವರಾಯಸ್ವಾಮಿ ಹುಟ್ಟುಹಬ್ಬ ಆಚರಣೆ