ಜೈಪುರ: ಭಯೋತ್ಪಾದಕರು ಕೃತ್ಯಗಳನ್ನ ಎಸಗಲು ಕಾಂಗ್ರೆಸ್ ಮುಕ್ತ ಅವಕಾಶ ಕೊಟ್ಟಿದೆ. ಹೀಗಿರುವಾಗ ಅಪರಾಧಿಗಳಿಗೆ ಕಾನೂನಿನ ಮೇಲೆ ಭಯ ಹೇಗೆ ಬರುತ್ತದೆ? ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ವಾಗ್ದಾಳಿ ನಡೆಸಿದರು.
ರಾಜಸ್ಥಾನದಲ್ಲಿ ಬಿಜೆಪಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ ವರ್ಷ ಜೂನ್ ತಿಂಗಳಲ್ಲಿ ಉದಯಪುರದ ಟೈಲರ್ ಕನ್ಹಯ್ಯಾ ಲಾಲ್ ಹತ್ಯೆ (Udaipur Tailor Killing) ಪ್ರಕರಣವನ್ನು ಖಂಡಿಸಿದರು. ಜೊತೆಗೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದರು. ಈ ವಿಚಾರದಲ್ಲಿಯೂ ಕಾಂಗ್ರೆಸ್ ವೋಟ್‌ಬ್ಯಾಂಕ್ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಟ್ರ್ಯಾಕ್ ಮೇಲೆ ಕಲ್ಲು, ರಾಡ್‌ಗಳನ್ನಿಟ್ಟ ಕಿಡಿಗೇಡಿಗಳು – ವಂದೇ ಭಾರತ್ ರೈಲು ತುರ್ತು ನಿಲುಗಡೆ
Advertisement
Advertisement
ಉದಯಪುರದಲ್ಲಿ ಅಂತಹ ಘಟನೆಯನ್ನು ಯಾರೂ ಊಹಿಸಿರಲ್ಲ. ಜನ ಸಾಮಾನ್ಯರಂತೆ ಬಟ್ಟೆ ಹೊಲಿಸುವ ನೆಪದಲ್ಲಿ ಬಂದು ಟೈಲರ್ ಕತ್ತು ಕತ್ತರಿಸುತ್ತಾರೆ. ಆ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಏನು ಕ್ರಮ ಕೈಗೊಂಡಿತು? ಆ ಘಟನೆಯನ್ನೂ ಕಾಂಗ್ರೆಸ್ ವೋಟ್ ಬ್ಯಾಂಕಿಗೆ (Congress Vote Bank) ಬಳಸಿಕೊಂಡಿತು. ತಲೆ ಕಡಿಯುವ ಪರಿಸರದಲ್ಲಿ ಹೊಸ ಉದ್ಯಮಗಳಿಗೆ ಹೂಡಿಕೆ ಹೇಗೆ ಬರುತ್ತದೆ? ಇದು ಸಾಮಾನ್ಯ ಅಪರಾಧವಲ್ಲ. ಕಾಂಗ್ರೆಸ್ ಸರ್ಕಾರದ ವೋಟ್ ಬ್ಯಾಂಕ್ ರಾಜಕಾರಣದ ಪರಿಣಾಮ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಉದಯಪುರ ಟೈಲರ್ ಹತ್ಯೆ ಪ್ರಕರಣ – ಟೀಕೆ ಬೆನ್ನಲ್ಲೇ 32 ಪೊಲೀಸ್ ಅಧಿಕಾರಿಗಳ ವರ್ಗಾವಣೆ
Advertisement
Advertisement
ಕಾಂಗ್ರೆಸ್ ಸರ್ಕಾರ (Congress Government) ಭಯೋತ್ಪಾದಕರ ಬಗ್ಗೆ ಪ್ರೀತಿಯಿಂದ ವರ್ತಿಸುತ್ತಿದೆ. ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಇನ್ನಷ್ಟು ಕೃತ್ಯಗಳನ್ನ ಎಸಗಲು ಮುಕ್ತ ಅವಕಾಶ ನೀಡುತ್ತಿದೆ. ಹೀಗಿರುವಾಗ ಅಪರಾಧಿಗಳಿಗೆ ಕಾನೂನಿನ ಮೇಲೆ ಭಯ ಹೇಗೆ ಬರುತ್ತದೆ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಉದಯಪುರದ ಹತ್ಯೆ ಖಂಡನೀಯ: ಇದು ದೇಶದ ಕಾನೂನು, ಇಸ್ಲಾಂ ಧರ್ಮಕ್ಕೆ ವಿರುದ್ಧವಾದದ್ದು – ಮುಸ್ಲಿಂ ಮಂಡಳಿ
ಕಳೆದ ವರ್ಷ ಜೂನ್ ತಿಂಗಳಿನ ಲ್ಲಿ ಪ್ರವಾದಿ ಮೊಹಮ್ಮದ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ನೂಪುರ್ ಶರ್ಮಾರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿಕೊಂಡಿದ್ದರು ಎಂಬ ಕಾರಣಕ್ಕೆ ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಎಂಬುವವರನ್ನು ಇಬ್ಬರು ದುಷ್ಕರ್ಮಿಗಳು ಮಂಗಳವಾರ ಕತ್ತು ಸೀಳಿ ಹತ್ಯೆ ಮಾಡಿದ್ದರು. ಈ ಘಟನೆಯಿಂದ ರಾಜಸ್ಥಾನದ ದೇಶದ ವಿವಿಧೆಡೆ ಪ್ರತಿಭಟನೆ ಭುಗಿಲೆದ್ದಿತ್ತು. ಇದನ್ನೂ ಓದಿ: ಕಗ್ಗತ್ತಲ ಮಳೆಯಲ್ಲಿ ನದಿಯನ್ನು ರಸ್ತೆ ಎಂದು ತೋರಿಸಿದ ಜಿಪಿಎಸ್ – ಕಾರು ಮುಳುಗಿ ಕೇರಳದ ಇಬ್ಬರು ವೈದ್ಯರು ಸಾವು
Web Stories