ಲಕ್ನೋ: ಉತ್ತರಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಅಂಜುಮನ್ ಇಂತೇಜಾಮಿಯಾ ಮಸಾಜಿದ್ ಸಮಿತಿ (ಆಡಳಿತ ಮಂಡಳಿ) ಸಲ್ಲಿಸಿದ್ದ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.
ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠವು ನೀಡಿದ ಲಿಖಿತ ಆದೇಶದಂತೆ ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಮತ್ತು ಪಿಎಸ್ ನರಸಿಂಹ ಅವರನ್ನೊಳಗೊಂಡ ಪೀಠವು ಜ್ಞಾನವ್ಯಾಪಿ ಮಸೀದಿಯ ಆಡಳಿತ ಮಂಡಳಿಯ ಅರ್ಜಿಯನ್ನು ವಿಚಾರಣೆ ನಡೆಸಲಿದೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ, ನಂದಿ ವಿಗ್ರಹ ಪತ್ತೆ
Advertisement
Advertisement
ಹಲವು ಮಹತ್ವದ ಬೆಳವಣಿಗೆಯ ನಡುವೆ ವಾರಣಾಸಿ ನ್ಯಾಯಾಲಯವು ಅರ್ಜಿ ವಿಚಾರಣೆ ನಡೆಸಿದೆ. ಈಗಾಗಲೇ ಸಮೀಕ್ಷಾ ತಂಡವು ಶಿವಲಿಂಗ ಪತ್ತೆಯಾಗಿದೆ ಎಂದು ಹೇಳಲಾಗಿರುವ ಸ್ಥಳವನ್ನು ಬಂದ್ ಮಾಡುವಂತೆ ಅಲ್ಲಿನ ಜಿಲ್ಲಾಡಳಿತಕ್ಕೆ ಸೂಚಿಸಿದೆ.
Advertisement
ಕಳೆದ ವಾರ, ಮುಸ್ಲಿಂ ಮುಖಂಡ ಮನವಿಯಂತೆ ಸಮೀಕ್ಷೆ ವಿರುದ್ಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಮಧ್ಯಂತರ ಆದೇಶ ರವಾನಿಸಲು ಸುಪ್ರೀಂ ನಿರಾಕರಿಸಿತ್ತು. ಆದರೆ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠವು ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡಲು ಪರಿಗಣಿಸಲು ಒಪ್ಪಿಕೊಂಡಿತು. ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ಪೀಠದ ಮುಂದೆ ಅರ್ಜಿಯನ್ನು ಪಟ್ಟಿ ಮಾಡಲು ಸೂಚಿಸಿತ್ತು. ಇದನ್ನೂ ಓದಿ: ಅಲ್ಪಸಂಖ್ಯಾತರ ಮೀಸಲಾತಿ ನಿಲ್ಲಿಸುತ್ತೇವೆ – ತೆಲಂಗಾಣ ಸರ್ಕಾರದ ವಿರುದ್ಧ ಶಾ ಗುಡುಗು
Advertisement
ಅರ್ಜಿದಾರರ ಪರವಾಗಿ ಹಾಜರಿದ್ದ ಹಿರಿಯ ವಕೀಲ ಹುಝೆಫಾ ಅಹ್ಮದಿ, ವಾರಣಾಸಿ ಆಸ್ತಿ ವಿಚಾರವಾಗಿ ಸಮೀಕ್ಷೆಗೆ ಸಂಬಂಧಿಸಿದಂತೆ ನಾವು ಅರ್ಜಿ ಸಲ್ಲಿಸಿದ್ದೇವೆ. ಇದು (ಜ್ಞಾನವಾಪಿ) ಅನಾದಿ ಕಾಲದಿಂದಲೂ ಮಸೀದಿಯಾಗಿದೆ. ಈ ಹಿನ್ನೆಲೆಯಲ್ಲಿ ಇಂದು ವಿಚಾರಣೆ ನಡೆಯಲಿದೆ.