ಲಕ್ನೋ: ಬಾಲಕಿಯರ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ಉತ್ತರ ಪ್ರದೇಶ ಸರ್ಕಾರ ಎಸ್‍ಎಸ್‍ಎಲ್‍ಸಿ ತೇರ್ಗಡೆಯಾದ ವಿದ್ಯಾರ್ಥಿನಿಯರಿಗೆ 10 ಸಾವಿರ ರೂ. ಬಹುಮಾನ ನೀಡುವುದಾಗಿ ಹೇಳಿದೆ.
ಯುಪಿ ಬೋರ್ಡ್ ಪರೀಕ್ಷೆಯಲ್ಲಿ ತೇರ್ಗಡೆಯಾದ ಪ್ರತಿ ವಿದ್ಯಾರ್ಥಿನಿಗೆ 10 ಸಾವಿರ ರೂ. ಬಹುಮಾನ ನೀಡಲಾಗುವುದು ಎಂದು ಉತ್ತರಪ್ರದೇಶ ಉಪಮುಖ್ಯಮಂತ್ರಿ ದಿನೇಶ್ ಶರ್ಮಾ ಹೇಳಿದ್ದಾರೆ.
Advertisement
ಪಸ್ತುತ ಈಗ ಇರುವ ಕನ್ಯಾ ವಿದ್ಯಾ ಧನ್ ಯೋಜನೆ ಅಡಿಯಲ್ಲಿ ಹೊಸ ಯೋಜನೆ ಬರಲಿದೆ. ಸೋಮವಾರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 45ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಈ ದಿನವೇ ಈ ಯೋಜನೆ ಪ್ರಕಟವಾಗಿದೆ.
Advertisement
ಸಿಬಿಎಸ್‍ಇ ಮತ್ತು ಐಸಿಎಸ್‍ಇ 10ನೇ ತರಗತಿಯ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಉತ್ತರ ಪ್ರದೇಶ ಬೋರ್ಡ್ ನಡೆಸಿದ್ದ ಪರೀಕ್ಷೆಯ ಫಲಿತಾಂಶ ಪ್ರಕಟವಾಗಬೇಕಿದೆ.