ಬೆಂಗಳೂರು: ನಮ್ಮ ಮೆಟ್ರೋ (Namma Metro) ದೇಶದ ಇತರೇ ಭಾಗಗಳ ಮೆಟ್ರೋಗಳಿಗಿಂತ ಗುಣಮಟ್ಟದಲ್ಲಿ ಅತ್ಯುತ್ತಮವಾಗಿದ್ದು, 2ನೇ ಹಂತದ ರೀಚ್- 6 ಮೆಟ್ರೋ ಮಾರ್ಗ 2025 ರ ವೇಳೆಗೆ ಲೋಕಾರ್ಪಣೆಯಾಗಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದರು.
ಈ ಕುರಿತು ಮಾತನಾಡಿದ ಅವರು, ಈ ಮಾರ್ಗದಲ್ಲಿ ಒಟ್ಟು 13.76 ಕಿ.ಮೀ ಉದ್ದ ಸುರಂಗ ಇರಲಿದ್ದು, ಡೈರಿ ವೃತ್ತದಿಂದ ನಾಗಾವರದ ತನಕ 12 ನಿಲ್ದಾಣಗಳು ಬರಲಿವೆ. ಕಾಳೇನ ಅಗ್ರಹಾರದಿಂದ ನಾಗಾವರದ ತನಕ ಈ ಮಾರ್ಗವು ಒಟ್ಟು 21.26 ಕಿಮೀ ಉದ್ದವಿದೆ. 9 ಸುರಂಗ ಕೊರೆಯುವ ಯಂತ್ರಗಳು ಈಗ ಕಾರ್ಯನಿರ್ವಹಿಸುತ್ತಿದ್ದು, 7 ಕಡೆಗಳಲ್ಲಿ ಕೆಲಸ ಮುಗಿಯುವ ಹಂತಕ್ಕೆ ಬಂದಿದೆ. ಒಟ್ಟು 12 ನಿಲ್ದಾಣಗಳಿದ್ದು, ಶೇ. 75 ರಷ್ಟು ಕಾಮಗಾರಿ ಮುಗಿದಿದೆ ಎಂದರು. ಇದನ್ನೂ ಓದಿ: ದೇಶದ್ರೋಹದ ಹೇಳಿಕೆ ನೀಡುವವರನ್ನ ಗುಂಡಿಕ್ಕಿ ಕೊಲ್ಲುವ ಕಾನೂನು ಜಾರಿಯಾಗಲಿ: ಈಶ್ವರಪ್ಪ
Advertisement
Advertisement
ಈ ಹಂತದ ಮೆಟ್ರೋ ಕಾಮಗಾರಿ ಜವಾಬ್ದಾರಿಯನ್ನು ಅಬ್‌ಕಾಮ್, ಎಲ್ ಅಂಡ್ ಟಿ ಮತ್ತು ಐಟಿಡಿ ಸಂಸ್ಥೆಗಳು ಗುತ್ತಿಗೆ ತೆಗೆದುಕೊಂಡಿವೆ. ಪ್ರಸ್ತುತ ಐಟಿಡಿ ಸಂಸ್ಥೆ ಗುತ್ತಿಗೆ ತೆಗೆದುಕೊಂಡಿರುವ ಭಾಗದಲ್ಲಿ ಸುರಂಗ ಕೊರೆಯುವ ಕೆಲಸವನ್ನು ವೀಕ್ಷಿಸಲಾಯಿತು. ಜಯದೇವ ಬಳಿ ರೀಚ್ – 6, ಎಂ.ಜಿ ರಸ್ತೆಯ ಬಳಿ ಇಂಟರ್ ಚೇಂಜ್, ಕಂಟೋನ್ಮೆಂಟ್ ಮೆಟ್ರೋ ನಿಲ್ದಾಣ, ನಾಗವಾರ ಇಂಟರ್‌ಚೇಂಜ್ ನಿಲ್ದಾಣಗಳು ಈ ಭಾಗದ ಪ್ರಮುಖ ನಿಲ್ದಾಣಗಳಾಗಿವೆ ಎಂದು ತಿಳಿಸಿದರು. ಇದನ್ನೂ ಓದಿ: ಯುಪಿಎ 10 ವರ್ಷಗಳಲ್ಲಿ ಆರ್ಥಿಕತೆಯನ್ನು ನಿಷ್ಕ್ರಿಯಗೊಳಿಸಿತ್ತು: ಶ್ವೇತಪತ್ರ ಹೊರಡಿಸಿದ ಮೋದಿ ಸರ್ಕಾರ
Advertisement
ನಮ್ಮ ಮೆಟ್ರೋ ಅಂತರರಾಷ್ಟ್ರೀಯ ಗುಣಮಟ್ಟ ಕಾಪಾಡಿಕೊಂಡಿದೆ. ದೆಹಲಿಗಿಂತ ಉತ್ತಮವಾದ ಕೆಲಸ ನಮ್ಮಲ್ಲಿ ನಡೆದಿದೆ. ಯಾವುದೇ ಹಂತದಲ್ಲೂ ಕೆಲಸದ ಗುಣಮಟ್ಟದಲ್ಲಿ ರಾಜಿಯಾಗಿಲ್ಲ. ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಸುರಂಗ ರಸ್ತೆಗಳನ್ನು ಮಾಡುವ ಆಲೋಚನೆ ನಮ್ಮ ಮುಂದಿದೆ. ಆದ ಕಾರಣ ಎಷ್ಟು ಆಳ ಹೋಗಬೇಕಾಗುತ್ತದೆ. ಈ ಕಾರ್ಯ ಮಾಡಲು ಏನಾದರೂ ಅಡಚಣೆ ಉಂಟಾಗುತ್ತದೆಯೇ? ಸವಾಲುಗಳು ಏನು ಬರಬಹುದು ಎಂದು ತಿಳಿದುಕೊಳ್ಳಲು ಖುದ್ದಾಗಿ ಕಾಮಗಾರಿ ವೀಕ್ಷಣೆಗೆ ಬಂದಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಫೆಬ್ರವರಿ 9ರಿಂದ ‘ಗ್ರಾಮ ಚಲೋ’ ಅಭಿಯಾನ: ವಿಜಯೇಂದ್ರ
Advertisement
ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೋ ಯೋಜನೆ ಬಗ್ಗೆ ಸಾರ್ವಜನಿಕ ಚರ್ಚೆ ಏರ್ಪಟ್ಟಿದೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಕಾಮಗಾರಿ ವೇಗದಿಂದ ಸಾಗುತ್ತಿದೆ. ಪಿಲ್ಲರ್‌ಗಳನ್ನು ಹಾಕದೆ ಇರುವ ಕಡೆ ಎರಡು ಹಂತಗಳನ್ನು ನಿರ್ಮಾಣ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಮೇಲಿನ ಹಂತದಲ್ಲಿ ಮೆಟ್ರೋ ಕೆಳಗಿನ ಹಂತದಲ್ಲಿ ರಸ್ತೆ ಮಾಡುವಂತೆ ಸೂಚನೆ ನೀಡಲಾಗಿದೆ. ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲಾ ಈ ಆಲೋಚನೆಯನ್ನು ಅನುಷ್ಠಾನ ಮಾಡುವಂತೆ ತಿಳಿಸಿದ್ದೇನೆ ಎಂದರು. ಇದನ್ನೂ ಓದಿ: 2047ಕ್ಕೆ ಭಾರತವನ್ನು ಇಸ್ಲಾಮೀಕರಣ ಮಾಡುವ ತಂತ್ರ ರೂಪಿಸಲಾಗಿದೆ: ಜಗದೀಶ್ ಕಾರಂತ್
ಇದರಿಂದ ಮೇಲ್ಸೇತುವೆ ನಿರ್ಮಾಣಕ್ಕೆ ಆಗುವಂತಹ ಶೇ.60 ರಷ್ಟು ವೆಚ್ಚ ತಗ್ಗಲಿದೆ. ಬಿಬಿಎಂಪಿ ಮತ್ತು ಬಿಎಂಆರ್‌ಸಿಎಲ್ ಜಂಟಿಯಾಗಿ ಈ ಯೋಜನೆಗೆ ವೆಚ್ಚ ಮಾಡಲಿವೆ. ಮೇಲ್ಸೇತುವೆ ನಿರ್ಮಾಣದ ವೆಚ್ಚವನ್ನು ಬಿಬಿಎಂಪಿ ಭರಿಸಲಿದೆ. ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ನಿಯಂತ್ರಣ ಮಾಡಲು ಈ ರೀತಿಯ ಯೋಜನೆ ರೂಪಿಸಲಾಗಿದೆ. ನಾಗ್ಪುರದಲ್ಲಿ ಈ ರೀತಿಯ ಯೋಜನೆ ಗಮನಿಸಿದ್ದೆ. ಮುಂದಿನ ಮೆಟ್ರೋ ಕಾಮಗಾರಿಗಳಲ್ಲಿ ಈ ಆಲೋಚನೆಯನ್ನು ಕಾರ್ಯಗತ ಮಾಡುತ್ತೇವೆ ಎಂದು ನುಡಿದರು. ಇದನ್ನೂ ಓದಿ: ರಾಹುಲ್ ಗಾಂಧಿ ಬಾಯಿ ಬಿಟ್ಟರೆ ಬರೀ ಸುಳ್ಳು – ಸಚಿವ ಪ್ರಹ್ಲಾದ್ ಜೋಶಿ ಕಿಡಿ
2024 ರಲ್ಲಿಯೇ ಕಾಮಗಾರಿ ಮುಗಿಯುತ್ತದೆ ಎಂದು ಹೇಳಲಾಗಿತ್ತು ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, 98% ರಷ್ಟು ಭೂಸ್ವಾಧೀನ ಪ್ರಕ್ರಿಯೆ ಮುಗಿದಿದೆ. ಭೌತಿಕ ಕೆಲಸಗಳು 53% ರಷ್ಟು ಪೂರ್ಣಗೊಂಡಿದೆ. 17 ಎಲಿವೇಟೆಡ್ ನಿಲ್ದಾಣಗಳ ಕೆಲಸ ಪ್ರಗತಿಯಲ್ಲಿವೆ ಎಂದು ತಿಳಿಸಿದರು. ಮುಂಬರುವ ಬಜೆಟ್‌ನಲ್ಲಿ ಹೊಸ ಮೆಟ್ರೋ ಮಾರ್ಗಗಳ ಯೋಜನೆ ನೀಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ತುಮಕೂರು, ಆನೇಕಲ್, ಬಿಡದಿ ಮಾರ್ಗಗಳಲ್ಲಿ ಡಿಪಿಆರ್ ನಡೆಸಲು ಈಗಾಗಲೇ ಸೂಚನೆ ನೀಡಲಾಗಿದೆ. ಈಗಲೇ ಮಾಹಿತಿ ನೀಡುವುದಿಲ್ಲ. ಡಿಪಿಆರ್ ಬಂದ ನಂತರ ಮಾಹಿತಿ ನೀಡಲಾಗುವುದು. ಇಲ್ಲಿ ಕೇಂದ್ರ ಸರ್ಕಾರದ ಪ್ರಾಯೋಜಕತ್ವವೂ ಇರುವುದರಿಂದ, ಅವರನ್ನೂ ಸಹ ವಿಶ್ವಾಸಕ್ಕೆ ತೆಗೆದುಕೊಂಡ ನಂತರ ಸಂಪೂರ್ಣ ಮಾಹಿತಿ ನೀಡುತ್ತೇನೆ ಎಂದರು. ಇದನ್ನೂ ಓದಿ: ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮ ಯಶಸ್ವಿ; 20 ಸಾವಿರ ಜನ ಭಾಗಿ, 11,000 ಅರ್ಜಿ ಸಲ್ಲಿಕೆ