Monday, 23rd July 2018

ರೇವಾ ವಿಶ್ವ ವಿದ್ಯಾಲಯದಲ್ಲಿ ಆಧುನಿಕ ಭದ್ರತಾ ವ್ಯವಸ್ಥೆ

ಬೆಂಗಳೂರು: ವಿದ್ಯಾರ್ಥಿಗಳಿಗೆ ಸೂಕ್ತ ಭದ್ರತೆ ಕಲ್ಪಿಸುವ ನಿಟ್ಟಿನಲ್ಲಿ ಇದೇ ಪ್ರಥಮ ಬಾರಿಗೆ ನಗರದ ಯಲಹಂಕದಲ್ಲಿರುವ ರೇವಾ ವಿಶ್ವವಿದ್ಯಾನಿಲಯದಲ್ಲಿ ಸ್ಟೇಟ್ ಆಫ್ ದಿ ಆರ್ಟ್ ಸೆಕ್ಯೂರಿಟಿ ಸರ್ವೀಸ್ ಸಿಸ್ಟಂ ನೂತನವಾಗಿ ನಿರ್ಮಿಸಿದ್ದು, ರೇವಾ ವಿಶ್ವವಿದ್ಯಾಲಯದ ಕುಲಾಧಿಪತಿ ಪಿ.ಶ್ಯಾಮರಾಜು ಇಂದು ಚಾಲನೆ ನೀಡಿದರು.

ಅಲರ್ಟ್ ಐ ಪ್ರೀಕ್ವೆನ್ಸಿ ಡಿಟೆಕ್ಟರ್ ಎಂದು ಕರೆಯಲ್ಪಡುವ ಈ ರಕ್ಷಣೆ ವ್ಯವಸ್ಥೆಯಲ್ಲಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡುವವರ ಮಾಹಿತಿಯನ್ನು ವಿಡಿಯೋ ಸಮೇತ ಸಹಿತ ಸ್ವಯಂ ಚಾಲಿತವಾಗಿ ಸಂಪೂರ್ಣ ಮಾಹಿತಿಯನ್ನು ಸಂಗ್ರಹ ಮಾಡುತ್ತದೆ. ಇನ್ನುಳಿದಂತೆ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ನೌಕರರು ಬಾರ್ ಕೋಡ್ ನೀಡಿದ್ದು, ಕಾಲೇಜಿಗೆ ಭೇಟಿ ನೀಡಿದ್ದ ಸಮಯ ಹಾಗೂ ಸಮಗ್ರ ಮಾಹಿತಿ ಕೂಡ ದಾಖಲಾಗುತ್ತದೆ. ಇನ್ನುಳಿದಂತೆ ವಾಹನಗಳ ಮಾಹಿತಿಗಳು ಸಂಗ್ರಹವಾಗುತ್ತದೆ.

ಉದ್ಘಾಟಣೆ ನಂತರ ಮಾತನಾಡಿದ ರೇವಾ ವಿಶ್ವವಿದ್ಯಾಲಯದ ಕುಲಾಧಿಪತಿ ಪಿ.ಶ್ಯಾಮರಾಜು, ನಮ್ಮ ವಿಶ್ವವಿದ್ಯಾಲಯದ ವಸತಿ ನಿಲಯದಲ್ಲಿ 4,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದಾರೆ. ಅವರಿಗೆ ಸೂಕ್ತಭದ್ರತೆ ಹಾಗೂ ಅವರ ಚಲನವಲನಗಳ ಮೇಲೆ ನಿಗಾ ಇಡುವ ಸಲುವಾಗಿಯು ಎಚ್ಎಫ್‍ಡಿ ರಕ್ಷಣಾ ವ್ಯವಸ್ಥೆ ಮಾಡಲಾಗಿದೆ. ಇದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರು ಹಾಗೂ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿರುವ ಸಂಪೂರ್ಣ ಮಾಹಿತಿಯನ್ನು ಪಡೆಯಬಹುದಾಗಿದ್ದು, ಕಾಲೇಜು ವಿದ್ಯಾರ್ಥಿಗಳ ಚಲನ – ವಲನಗಳನ್ನು ವೀಕ್ಷಿಸುವುದರ ಜೊತೆಗೆ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ತಡೆಯಬಹುದಾಗಿದೆ ಎಂದು ಮಾಹಿತಿ ನೀಡಿದರು.

ಇದೇ ವೇಳೆ ರೇವಾ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಎಸ್.ವೈ.ಕುಲಕರ್ಣಿ ಸೇರಿದಂತೆ ಕಾಲೇಜು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *