ನವದೆಹಲಿ: ನೂತನ ಸಂಸತ್ ಭವನ (New Parliament) ಉದ್ಘಾಟನಾ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ (Narendra Modi) ಅವರು ನಾಮಫಲಕವನ್ನು ಅನಾವರಣಗೊಳಿಸಿದರು. ಕಾರ್ಯಕ್ರಮದಲ್ಲಿ ಸರ್ವಧರ್ಮೀಯರ ಸಮ್ಮಿಲನವು ವಿಶೇಷವಾಗಿ ಗಮನ ಸೆಳೆಯಿತು.
#WATCH | PM Modi, Lok Sabha Speaker Om Birla, Union ministers and CMs of different States attend a multi-faith prayer meeting underway at the new Parliament building pic.twitter.com/uitIOw63ri
— ANI (@ANI) May 28, 2023
Advertisement
ಹೌದು. ನೂತನ ಸಂಸತ್ ಭವನ ಉದ್ಘಟನಾ ಕಾರ್ಯಕ್ರಮದ ಅಂಗವಾಗಿ ಪೂಜಾ ಕೈಂಕರ್ಯಗಳು ಬೆಳಗ್ಗೆ 7.30 ರಿಂದ ಆರಂಭವಾಗಿದೆ. ಬಳಿಕ ಐತಿಹಾಸಿಕ ಸೆಂಗೋಲ್ ಅನ್ನು ಪ್ರಧಾನಿ ಮೋದಿ ಅವರು ಲೋಕಸಭಾ ಸ್ಪೀಕರ್ ಸ್ಥಾನದ ಸಮೀಪದಲ್ಲಿ ಪ್ರತಿಷ್ಠಾಪಿಸಿ, ದೀಪ ಬೆಳಗಿದರು. ಮಂತ್ರ-ವಾದ್ಯ ಘೋಷ, ಮಂಗಳವಾದ್ಯಗಳಿಂದ ರಾಜದಂಡವನ್ನು ಪ್ರತಿಷ್ಠಾಪಿಸಲಾಯಿತು. ಈ ವೇಳೆ ಪ್ರಧಾನಿಯವರಿಗೆ ಲೋಕಸಬಾ ಸ್ಪೀಕರ್ ಓಂ ಬಿರ್ಲಾ (Om Birla) ಸಾಥ್ ನೀಡಿದರು. ಇದನ್ನೂ ಓದಿ: ಭಾರತದ ನೂತನ ಸಂಸತ್ ಭವನಕ್ಕೆ ದೇಶದ ವಿವಿಧತೆಯ ಮೆರುಗು
Advertisement
Advertisement
ಪೂಜಾ-ವಿಧಿವಿಧಾನಗಳು ನಡೆಯುತ್ತಿದ್ದು, ವಿವಿಧ ಧರ್ಮದ ಮುಖಂಡರು ಪ್ರಾರ್ಥನೆ ಸಲ್ಲಿಸುವ ಮೂಲಕ ಸೌಹಾರ್ದತೆಯ ಸಂದೇಶವನ್ನು ಸಾರಿದರು. ಪ್ರಾರ್ಥನಾ ಸಭೆಯಲ್ಲಿ ಪಂಡಿತರು, ಸಾಧು-ಸಂತರು ಭಾಗಿಯಾಗಿದ್ದು, 12 ಮಂದಿ ಧಾರ್ಮಿಕ ನಾಯಕರಿಂದ ಪ್ರಾರ್ಥನೆ ನಡೆಯುತ್ತಿದೆ. ಈ ಮಧ್ಯೆ ಕಾರ್ಮಿಕರಿಗೆ ಶಾಲು ಹೊದಿಸಿ ಪ್ರಧಾನಿಯವರು ಸನ್ಮಾನಿಸಿದರು. ಇದನ್ನೂ ಓದಿ: ಸಂಸತ್‍ನಲ್ಲಿ ಚಿನ್ನದ ರಾಜದಂಡ ಪ್ರತಿಷ್ಠಾಪನೆ
Advertisement
#WATCH | 'Sarv-dharma' prayers are underway at the new Parliament building as the inauguration ceremony is led by PM Modi pic.twitter.com/6NyADeDZoM
— ANI (@ANI) May 28, 2023
ಕಾರ್ಯಕ್ರಮಕ್ಕೆ ಸುಮಾರು 60 ಧಾರ್ಮಿಕ ಮುಖ್ಯಸ್ಥರನ್ನು ಕರೆಸಲಾಗಿದ್ದು, ಅವರಲ್ಲಿ ಹಲವರು ತಮಿಳುನಾಡಿನವರಾಗಿದ್ದಾರೆ. ಧಾರ್ವಿಕ ಕಾರ್ಯಕ್ರಮದಲ್ಲಿ ಶೃಂಗೇರಿ ಶ್ರೀ ಶಾರದಾ ಪೀಠದ ಋತ್ವಿಜರಾದ ಟಿ.ವಿ. ಸೀತಾರಾಮ ಶರ್ಮ, ಶ್ರೀರಾಮ ಶರ್ಮ, ಲಕ್ಷ್ಮೀಶ ತಂತ್ರಿ ಹಾಗೂ ದೆಹಲಿ ಶಾಖಾ ಮಠದ ನಾಗರಾಜ ಅಡಿಗ, ಋಷ್ಯಶೃಂಗ ಭಟ್ ಭಾಗಿಯಾಗಿದ್ದಾರೆ.