ರಾಂಚಿ: ಅತ್ಯಾಚಾರದಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ ಎಂದು ಜಾರ್ಖಂಡ್‍ನ ಮುಖ್ಯಮಂತ್ರಿ ಹೇಮಂತ್ ಸೊರೆನ್ ತಿಳಿಸಿದ್ದರು. ಇದೀಗ ಈ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ.
ಜಾರ್ಖಂಡ್‍ನಲ್ಲಿ ಬುಡಕಟ್ಟು ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಹತ್ಯೆ ನಡೆದಿತ್ತು. ಈ ಘಟನೆಗೆ ಸಂಬಂಧಿಸಿ ಪ್ರತಿಕ್ರಿಯಿಸಿದ್ದ ಅವರು, ಎಲ್ಲೆಂದರಲ್ಲಿ ಈ ರೀತಿ ಘಟನೆಗಳು ನಡೆಯುತ್ತಲೇ ಇರುತ್ತವೆ. ಈ ರೀತಿ ಘಟನೆಗಳು ಯಾವ ರಾಜ್ಯದಲ್ಲಿ ಆಗಿಲ್ಲ, ಇಂತಹ ಘಟನೆಗಳನ್ನು ಊಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು.
Advertisement
Advertisement
ಸಿಎಂ ಹೇಳಿಕೆಯನ್ನು ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಬಿಜೆಪಿ ಈ ಘಟನೆಗೆ ಸಂಬಂಧಿಸಿದಂತೆ ಜಾರ್ಖಂಡ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಕಳೆದ ವಾರ ಹುಡುಗಿಯೊಬ್ಬಳನ್ನು ಸುಟ್ಟು ಹಾಕಲಾಯಿತು. ಈಗ ಬುಡಕಟ್ಟು ಹುಡುಗಿಯನ್ನು ಮರಕ್ಕೆ ನೇಣು ಹಾಕಲಾಗಿದೆ. ಆ ಹುಡುಗಿ ಗರ್ಭಿಣಿಯಾಗಿದ್ದಳು. ಅಂದರೆ, ಆಕೆಯ ಮೇಲೆ ಈ ಮೊದಲು ಕೂಡ ಅತ್ಯಾಚಾರ ನಡೆಸಲಾಗಿತ್ತು. ಆಕೆಯ ಸಾವಿಗೆ ಸರ್ಕಾರವೇ ನೇರ ಹೊಣೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿರುವಂತೆ ಕಾಣುತ್ತಿದೆ ಎಂದು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಟೀಕಿಸಿದ್ದಾರೆ. ಇದನ್ನೂ ಓದಿ: ಪ್ಲೇಟ್‍ನಲ್ಲಿದ್ದ ಮೊಮೊಸ್ ಬೀಳಿಸಿದ್ದಕ್ಕೆ ನಡೀತು ವ್ಯಕ್ತಿ ಬರ್ಬರ ಹತ್ಯೆ
Advertisement
Advertisement
ಜಾರ್ಖಂಡ್‍ನ ದುಮ್ಕಾ ಗ್ರಾಮದಲ್ಲಿ 14 ವರ್ಷದ ಹುಡುಗಿಯು ಮರಕ್ಕೆ ನೇಣು ಬೀಗಿದ ಸ್ಥಿತಿಯಲ್ಲಿ ಪತ್ತೆ ಆಗಿದ್ದಳು. ಘಟನೆಗೆ ಸಂಬಂಧಿಸಿ ಆಕೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿರುವುದು ಪೊಲೀಸ್ ತನಿಖೆಯಲ್ಲಿ ಬಯಲಾಗಿತ್ತು, ಘಟನೆಗೆ ಸಂಬಂಧಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಿಗೆ ಕಾವೇರಿ ನೀರು ಪೂರೈಕೆ ಮಾಡೋ ಟಿಕೆ ಹಳ್ಳಿ ಪಂಪ್ ಸ್ಟೇಷನ್ ಮುಳುಗಡೆ