ನವದೆಹಲಿ: ರಾಷ್ಟ್ರ ರಾಜಧಾನಿ ಸೇರಿದಂತೆ ವಿವಿಧೆಡೆ ಇರುವ ಏಮ್ಸ್ಗಳಿಗೆ ಸ್ವಾತಂತ್ರ್ಯ ಹೋರಾಟಗಾರರು, ಐತಿಹಾಸಿಕ ಘಟನೆಗಳು, ಆಯಾ ಪ್ರದೇಶದ ಸ್ಮಾರಕಗಳು ಅಥವಾ ಸ್ಥಳೀಯ ನಾಯಕರ ಹೆಸರನ್ನು ನಾಮಕರಣ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ.
Advertisement
ಈ ಸಂಬಂಧ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಸಲಹೆಯ ಮೇರೆಗೆ 23 ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ್)ಗಳು ಸ್ವಾತಂತ್ರ್ಯ ಹೋರಾಟಗಾರರು, ಐತಿಹಾಸಿಕ ಸ್ಮಾರಕಗಳು, ಸ್ಥಳೀಯ ನಾಯಕರ ಹೆಸರುಗಳ ಪಟ್ಟಿಯನ್ನು ಸಲ್ಲಿಸಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಅಬಕಾರಿ ನೀತಿ ಹಗರಣ: ಮನೀಶ್ ಸಿಸೋಡಿಯಾ ಸೇರಿ 8 ಆರೋಪಿಗಳ ವಿರುದ್ಧ ಸಿಬಿಐ ಲುಕ್‌ಔಟ್ ನೋಟಿಸ್
Advertisement
Advertisement
ಏಮ್ಸ್‌ಗಳು ಪ್ರಧಾನಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆ (ಪಿಎಂಎಸ್‌ವೈ) ಅಡಿ ಕಾರ್ಯನಿರ್ವಹಿಸುತ್ತಿವೆ. ಕೆಲವು ಸಾಮಾನ್ಯ ಹೆಸರು ಹಾಗೂ ಅವುಗಳ ತಾಣದಿಂದ ಮಾತ್ರ ಗುರುತಿಸಲ್ಪಟ್ಟಿವೆ. ಆದ್ದರಿಂದ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸುತ್ತಿರುವ, ಭಾಗಶಃ ಕಾರ್ಯಾಚರಣೆ ಅಥವಾ ನಿರ್ಮಾಣ ಹಂತದಲ್ಲಿರುವ ಎಲ್ಲಾ 23 ಏಮ್ಸ್‌ಗಳಿಗೆ ನಿರ್ದಿಷ್ಟ ಹೆಸರು ನೀಡುವ ಪ್ರಸ್ತಾವವನ್ನು ಕೇಂದ್ರ ಆರೋಗ್ಯ ಸಚಿವಾಲಯ ಸಿದ್ಧಪಡಿಸಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಬಿಗ್ ಬಾಸ್ ಮನೆಯಿಂದ ಹುಡುಗರನ್ನು ಹೊರಗೆ ಹಾಕಬೇಕು: ಸೋನು ಶ್ರೀನಿವಾಸ್ ಗೌಡ
Advertisement
ಈ ನಿಟ್ಟಿನಲ್ಲಿ ಸಂಸ್ಥೆ ಇರುವ ಪ್ರದೇಶದ ಸ್ಥಳೀಯ ನಾಯಕರು, ಸ್ವಾತಂತ್ರ‍್ಯ ಹೋರಾಟಗಾರರು ಮತ್ತು ಪ್ರದೇಶದ ಪ್ರಮುಖ ಐತಿಹಾಸಿಕ ಘಟನೆಗಳು ಅಥವಾ ಸ್ಮಾರಕಗಳು ಸೇರಿದಂತೆ ವಿವಿಧ ಏಮ್ಸ್‌ಗಳಿಗೆ ನಿರ್ದಿಷ್ಟ ಹೆಸರಿಡಲು ಸಲಹೆಗಳನ್ನು ಕೋರಲಾಗಿದೆ ಎಂದು ಅಧಿಕಾರಿಯೊಬ್ಬರು ವಿವರಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.