ಬೆಂಗಳೂರು: ಜಲಸಂಪನ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ ಶಿವಕುಮಾರ್ ವಿರುದ್ಧ ಆದಾಯ ತೆರಿಗೆ ಇಲಾಖೆ ಮತ್ತೊಂದು ದೂರು ಸಲ್ಲಿಕೆ ಮಾಡಿದೆ.
ಇಲಾಖೆಗೆ ಸುಳ್ಳು ಮಾಹಿತಿ ನೀಡಿದ ಆರೋಪದಡಿ ಶಿವಕುಮಾರ್ ವಿರುದ್ಧ ದೂರು ಸಲ್ಲಿಕೆ ಆಗಿದೆ. ಐಟಿ ಇಲಾಖೆ ಹಿರಿಯ ಅಧಿಕಾರಿಗಳು ಆರ್ಥಿಕ ಅಪರಾಧ ನ್ಯಾಯಾಲಯಕ್ಕೆ ಸೋಮವಾರ ದೂರು ಸಲ್ಲಿಸಿದ್ದಾರೆ. ಐಟಿ ಕಾಯಿದೆ ಸೆಕ್ಷನ್ 277, 278, 193, 199, ಹಾಗೂ 120(ಬಿ) ಅಡಿ ದೂರು ದಾಖಲಾಗಿದೆ.
Advertisement
Advertisement
ಈ ಕುರಿತು ದೂರು ದಾಖಲಾದ ಹಿನ್ನೆಲೆಯಲ್ಲಿ ನ್ಯಾ.ಎಂ.ಎಸ್. ಆಳ್ವಾ ಅವರು ಡಿಕೆ ಶಿವಕುಮಾರ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದಾರೆ. ಆಗಸ್ಟ್ 2 ರಂದು ಡಿಕೆಶಿ ಸೇರಿ ಎಲ್ಲಾ ಆರೋಪಿಗಳು ಖುದ್ದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಯಾಗಿದೆ.
Advertisement
ಈ ಹಿಂದೆ ಡಿ.ಕೆ. ಶಿವಕುಮಾರ್ ಐಟಿ ಇಲಾಖೆ ದಾಖಲಿಸಿದ್ದ ದೂರಿಗೆ ಜಾಮೀನು ಪಡೆದಿದ್ದರು. ಡಿ.ಕೆ.ಶಿವಕುಮಾರ್ ಜೊತೆ ಸಚಿನ್ ನಾರಾಯಣ್, ಸುನಿಲ್ ಕುಮಾರ್ ಶರ್ಮಾ, ಆಂಜನೇಯ ಹನುಮಂತಯ್ಯ ಮತ್ತು ರಾಜೇಂದ್ರ ವಿರುದ್ಧವೂ ಸಮನ್ಸ್ ಜಾರಿಯಾಗಿದೆ.