Monday, 20th August 2018

ಖಾನಾಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗೆ ಐಟಿ ಶಾಕ್

ಬೆಳಗಾವಿ: ಖಾನಾಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಿಢೀರ್ ದಾಳಿ ಮಾಡುವ ಮೂಲಕ ಶಾಕ್ ಕೊಟ್ಟಿದ್ದಾರೆ.

ಖಾನಾಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಾಸೀರ ಭಾಗವಾನ್ ಮನೆ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಖಾನಾಪುರ ತಾಲೂಕಿನ ಗಂದಿಗವಾಡ ಗ್ರಾಮದಲ್ಲಿ ಇರುವ ಮನೆ ಮತ್ತು ಹುಬ್ಬಳ್ಳಿಯಲ್ಲಿರುವ ಮನೆಯ ಮೇಲೂ 13 ಮಂದಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ನಾಸೀರ ಭಾಗವಾನ್ ಕರ್ನಾಟಕ ಚುನಾವಣೆ ನಾಮಪತ್ರ ಸಲ್ಲಿಕೆ ಮಾಡುವ ವೇಳೆ ಸುಮಾರು 191 ಕೋಟಿ ಮೌಲ್ಯದ ಆಸ್ತಿಯನ್ನು ಘೋಷಣೆ ಮಾಡಿದ್ದರು. ಅಷ್ಟೇ ಅಲ್ಲದೇ ತಮ್ಮ ಬಳಿ ಯಾವುದೇ ವಾಹನ ಇಲ್ಲ ಎಂದು ಹೇಳಿದ್ದರು. ಅಂದು ಹೇಳಿದ್ದ ಹೇಳಿಕೆಯೇ ಇಂದು ಅವರಿಗೆ ಮುಳುವಾಗಿದೆ ಎನ್ನಲಾಗಿದೆ.

ಆದ್ರೆ ಇತ್ತ ಅಧಿಕಾರಿಗಳು ಮಾತ್ರ ಇನ್ನು ಯಾವುದೇ ಮಾಹಿತಿಯನ್ನು ಬಹಿರಂಗ ಪಡಿಸಲಿಲ್ಲ.

Leave a Reply

Your email address will not be published. Required fields are marked *