ನವದೆಹಲಿ: ತೆರಿಗೆದಾರರು ವಿದೇಶದಲ್ಲಿ ಹೊಂದಿರುವ ಆಸ್ತಿ (Foreign Aassets) ಅಥವಾ ವಿದೇಶದಿಂದ ಗಳಿಸಿದ ಆದಾಯದ ವಿವರ ಘೋಷಿಸದಿದ್ದರೇ ಅಂತಹವರಿಗೆ ಕಪ್ಪುಹಣ ತಡೆ ಕಾಯ್ದೆ ಅಡಿಯಲ್ಲಿ 10 ಲಕ್ಷ ರೂ. ದಂಡ ವಿಧಿಸಲಾಗುವುದು ಎಂದು ಆದಾಯ ತೆರಿಗೆ ಇಲಾಖೆ (Income Tax Department) ಎಚ್ಚರಿಕೆ ನೀಡಿದೆ.
2024-25ನೇ ಐಟಿ ರಿಟರ್ನ್ಸ್ (ITR) ಮೌಲ್ಯಮಾಪನ ವರ್ಷದಲ್ಲಿ ಸಲ್ಲಿಸಿರುವ ಐಟಿಆರ್‌ಗಳಲ್ಲಿ ವಿದೇಶಿ ಸ್ವತ್ತು ಅಥವಾ ಆದಾಯ ಕುರಿತು ಘೋಷಣೆ ಮಾಡದಿರುವ ತೆರಿಗೆದಾರರಿಗೆ ಸಂದೇಶ ರವಾನಿಸಲು ಅಭಿಯಾನ ಆರಂಭಿಸಲಾಗಿದೆ. ಇದರ ಭಾಗವಾಗಿ ಇಲಾಖೆಯು ಸಾರ್ವಜನಿಕರಿಗೆ ತಿಳಿವಳಿಕೆ ನೀಡುವ ಮಾಹಿತಿ ಪ್ರಕಟಿಸಿದೆ. ಇದನ್ನೂ ಓದಿ: Pushpa 2 The Rule Trailer: ಪುಷ್ಪ ಅಂದ್ರೆ ಫೈಯರ್ ಅಲ್ಲ, ವೈಲ್ಡ್ ಫೈಯರ್ – ಟ್ರೇಲರ್‌ನಲ್ಲಿ ಅಲ್ಲು ಅರ್ಜುನ್ ಖದರ್
ವಿದೇಶಿ ಆಸ್ತಿ ಎಂದರೇನು?
ಐ-ಟಿ ಇಲಾಖೆಯ ಸಲಹೆಯ ಪ್ರಕಾರ, ವಿದೇಶದಲ್ಲಿ ಬ್ಯಾಂಕ್ ಖಾತೆ, ವಿಮಾ ಒಪ್ಪಂದ, ಕಂಪನಿ ಅಥವಾ ವ್ಯವಹಾರದಲ್ಲಿನ ಬಡ್ಡಿ. ಸ್ಥಿರಾಸ್ತಿ, ಕಸ್ಟೋಡಿಯಲ್ ಖಾತೆ, ಟ್ರಸ್ಟಿ, ಷೇರು ಮತ್ತು ಸಾಲಪತ್ರಕ್ಕೆ ಲಭಿಸಿರುವ ಬಡ್ಡಿ ಇತ್ಯಾದಿಯನ್ನು ವಿದೇಶಿ ಸ್ವತ್ತು ಎಂದು ಪರಿಗಣಿಸಲಾಗುತ್ತದೆ ಎಂದು ಹೇಳಿದೆ. ಇದನ್ನೂ ಓದಿ: ರಾತ್ರೋ ರಾತ್ರಿ ಬದಲಾಗ್ತಿದ್ಯಾ ಎಪಿಎಲ್, ಬಿಪಿಎಲ್ ಕಾರ್ಡ್? – ಅರ್ಹರಿಗೆ ಮಾತ್ರ ಸಿಗತ್ತೆ ಅಂತ ಸಿಎಂ ಸ್ಪಷ್ಟನೆ
2024-25ನೇ ಮೌಲ್ಯಮಾಪನ ವರ್ಷಕ್ಕೆ ಸಂಬಂಧಿಸಿದಂತೆ ವಿಳಂಬ ಹಾಗೂ ಪರಿಷ್ಕೃತ ಐಟಿಆರ್ ಸಲ್ಲಿಕೆಗೆ ಡಿಸೆಂಬರ್ 31ರಂದು ಅಂತಿಮ ದಿನವಾಗಿದೆ. ಹಾಗಾಗಿ ಎಲ್ಲಾ ಅರ್ಹ ತೆರಿಗೆದಾರರು ತಮ್ಮ ಐಟಿ ರಿಟರ್ನ್ಸ್‌ನಲ್ಲಿ ವಿದೇಶಿ ಆಸ್ತಿ (ಎಫ್‌ಎ) ಅಥವಾ ವಿದೇಶಿ ಮೂಲ ಆದಾಯ (ಎಫ್‌ಎಸ್‌ಐ) ವೇಳಾಪಟ್ಟಿಯನ್ನು ʻಕಡ್ಡಾಯವಾಗಿʼ ಭರ್ತಿ ಮಾಡಬೇಕು ಎಂದು ಎಂದು ಇಲಾಖೆ ಎಚ್ಚರಿಸಿದೆ. ಇದನ್ನೂ ಓದಿ: ಮಣಿಪುರದ ಭದ್ರತಾ ವ್ಯವಸ್ಥೆ ಕುರಿತು ಅಮಿತ್ ಶಾ ಸಭೆ – ಸೋಮವಾರವೂ ಹೈವೋಲ್ಟೇಜ್ ಮೀಟಿಂಗ್