Connect with us

ಸಿಎಂ ಆಪ್ತ, ಎಂಟಿಬಿ ನಾಗರಾಜ್ ನಿವಾಸದ ಮೇಲೆ ಐಟಿ ದಾಳಿ

ಸಿಎಂ ಆಪ್ತ, ಎಂಟಿಬಿ ನಾಗರಾಜ್ ನಿವಾಸದ ಮೇಲೆ ಐಟಿ ದಾಳಿ

ಬೆಂಗಳೂರು: ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ, ಸಿಎಂ ಸಿದ್ದರಾಮಯ್ಯ ಆಪ್ತ ಎಂಟಿಬಿ ನಾಗರಾಜ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಗರುಡಾಚಾರ್ ಪಾಳ್ಯದಲ್ಲಿರುವ ಶಾಸಕ ನಾಗರಾಜ್ ಮನೆ ಮತ್ತು ಅವರ ಸಂಬಂಧಿಕರಿಗೆ ಸೇರಿದ 2 ನಿವಾಸಗಳ ಮೇಲೂ ಐಟಿ ದಾಳಿ ನಡೆದಿದೆ. ಎರಡು ಕಾರುಗಳಲ್ಲಿ ಬಂದಿರುವ ಐಟಿ ಅಧಿಕಾರಿಗಳು ಬೆಳಗ್ಗೆ 5 ಗಂಟೆಯಿಂದ ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ನೋಟು ನಿಷೇಧವಾದ ಬಳಿಕ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಗಳ ಯೋಜನಾಧಿಕಾರಿ ಜಯಚಂದ್ರ, ಕಾವೇರಿ ನೀರಾವರಿ ನಿಗಮ ನಿರ್ದೇಶಕ ಚಿಕ್ಕರಾಯಪ್ಪ, ಸಿಎಂ ಪುತ್ರ ರಾಕೇಶ್ ಸ್ನೇಹಿತ ರೋಹಿತ್ ಗೌಡ, ಚಕ್ರವರ್ತಿ, ರಾಮಲಿಂಗಂ ಸೇರಿ ಮೂವರು ಬಿಲ್ಡರ್ಸ್, ನಟ ದೊಡ್ಡಣ್ಣ ಅಳಿಯ ವೀರೇಂದ್ರ ನಿವಾಸದ ಮೇಲೆ ಐಟಿ ದಾಳಿ ನಡೆದಿತ್ತು.

ಅಷ್ಟೇ ಅಲ್ಲದೇ ಬೆಳಗಾವಿಯಲ್ಲಿ ಸಚಿವ ರಮೇಶ್ ಜಾರಕಿಹೊಳಿ, ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ನಿವಾಸ ಮತ್ತು ಬೆಂಗಳೂರಿನ ವಾಸವಿ ಕ್ರೆಡಿಟ್ ಕೋ-ಆಪರೇಟಿವ್ ಬ್ಯಾಂಕ್ ಮೇಲೆ ಐಟಿ ದಾಳಿ ನಡೆದಿತ್ತು.

Advertisement
Advertisement