– ಮಾಜಿ ಸಿಎಂ ಯಡಿಯೂರಪ್ಪಗೆ ಶಾಕ್
ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಆಪ್ತರಾಗಿ ಗುರುತಿಸಿಕೊಂಡಿದ್ದ ಉಮೇಶ್ ಸಹಿತ 30ಕ್ಕೂ ಹೆಚ್ಚು ಕಾಂಟ್ರ್ಯಾಕ್ಟರ್ ಗಳ ಮನೆ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
Advertisement
ಯಾರು ಈ ಉಮೇಶ್?
ಬಿಎಂಟಿಸಿ ಕಂಡೆಕ್ಟರ್ ಆಗಿದ್ದ ಉಮೇಶ್ ಬಳಿಕ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಅವರ ಆಪ್ತ ಸಹಾಯಕನಾಗಿ ಕಾರ್ಯನಿರ್ವಹಿಸಿದರು. ಬಳಿಕ ವಿಜಯೇಂದ್ರ ಹಾಗೂ ಬಿಎಸ್‍ವೈ ಇಬ್ಬರ ವ್ಯವಹಾರಗಳನ್ನು ಉಮೇಶ್ ನೋಡಿಕೊಳ್ಳುತ್ತಿದ್ದರು. ಮೂಲತಃ ಶಿವಮೊಗ್ಗ ಜಿಲ್ಲೆ ಆಯನೂರಿನವರಾಗಿರುವ ಉಮೇಶ್, ಬಿಎಸ್‍ವೈ ಕುಟುಂಬದ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. 2008ರಲ್ಲಿ ಬಿಎಸ್‍ವೈ ಸಿಎಂ ಆಗಿದ್ದಾಗ ಸಿಎಂ ಆಪ್ತ ಶಾಖೆಯಲ್ಲಿ ಕೆಲಸ ಮಾಡಿದ್ದ ಬಳಿಕ ಅಧಿಕಾರ ಕಳೆದುಕೊಂಡರೂ ಬಿಎಸ್‍ವೈ ನಂಟು ಬಿಟ್ಟೇ ಇರಲಿಲ್ಲ. ಬಿಎಸ್‍ವೈ ವಿರೋಧ ಪಕ್ಷದ ನಾಯಕರಾಗಿದ್ದಾಗಲೂ ಆಪ್ತ ಸಹಾಯಕನಾಗಿ ಕೆಲಸ ಮಾಡಿದ್ದರು. ಬಿಎಸ್‍ವೈ ಎಲ್ಲಾ ಆಪ್ತ ಖಾಸಗಿ ಕೆಲಸಗಳನ್ನು ನಿರ್ವಹಿಸುತ್ತಿದ್ದ ಉಮೇಶ್ ಇದೀಗ ಬಿಎಸ್‍ವೈ ರಾಜೀನಾಮೆ ಬಳಿಕ ಹಾಲಿ ಸಿಎಂ ಕಚೇರಿಯಲ್ಲಿ ಸಹಾಯಕನಾಗಿ ಸೇರ್ಪಡೆಗೊಂಡಿದ್ದರು. ಇದನ್ನೂ ಓದಿ: ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ನೀಡಿದ ಮಾಜಿ ಸಿಎಂ ಎಸ್.ಎಂ ಕೃಷ್ಣ
Advertisement
Advertisement
ಸಿಎಂ ಆಪ್ತ ಸಹಾಯಕನಾದ್ರೂ ಬಿಎಸ್‍ವೈ ಮನೆಯಲ್ಲೇ ಕೆಲಸ ನಿರ್ವಹಿಸುತ್ತಿದ್ದು, ಯಡಿಯೂರಪ್ಪ ವಿಧಾನಸಭೆ ವಿಪಕ್ಷ ನಾಯಕರಾದಾಗಿಂದಲೂ ಜೊತೆಗೆ ಇರುವ ಉಮೇಶ್ ಶಿವಮೊಗ್ಗ, ಬೆಂಗಳೂರಿನಲ್ಲಿ ನೂರಾರು ಕೋಟಿ ಆಸ್ತಿ ಮಾಡಿರುವ ಆರೋಪ ಕೇಳಿ ಬಂದಿದ್ದು, ವಿಜಯನಗರದಲ್ಲಿ ಒಂದು ಭವ್ಯ ಮನೆಯ ನಿರ್ಮಾಣ ಮಾಡುತ್ತಿರುವ ಉಮೇಶ್ ಅವರ ಮೇಲೆ ಐಟಿ ರೇಡ್ ಆಗಿದೆ.
Advertisement
ಉಮೇಶ್ ಸಹಿತ 6 ಜನ ಆಪ್ತರ ಮೇಲೂ ದಾಳಿ ನಡೆದಿದ್ದು, ಉಮೇಶ್ ಸ್ನೇಹಿತ ಗುತ್ತಿಗೆದಾರ ಮನೆ ಮೇಲೂ ದಾಳಿ ನಡೆದಿದ್ದು, 30ಕ್ಕೂ ಹೆಚ್ಚು ಸರ್ಕಾರಿ ಕಾಂಟ್ರ್ಯಾಕ್ಟರ್ ಗಳ ಮನೆ ಮೇಲೆ ದಾಳಿ ನಡೆದಿದೆ. ನೀರಾವರಿ ಇಲಾಖಡ ಸಹಿತ ಕೆಲ ಕಾಂಟ್ರ್ಯಾಕ್ಟರ್ ಗಳ ಮನೆ ಮೇಲೆ ಐಟಿ ರೇಡ್ ಆಗಿದ್ದು, ಎಲ್ಲರೂ ಕೂಡ ಬಿಎಸ್‍ವೈಗೆ ಆಪ್ತರಾಗಿದ್ದರು. ಇದನ್ನೂ ಓದಿ: 2023ರಲ್ಲೂ ಬೊಮ್ಮಾಯಿ ಸಿಎಂ ಆಗಿ ದಸರಾ ಉದ್ಘಾಟಿಸಲಿದ್ದಾರೆ: ಪ್ರತಾಪ್ ಸಿಂಹ