ಚೆನ್ನೈ: ಸ್ವಯಂಘೋಷಿತ ದೇವಮಾನವ ಕಲ್ಕಿ ಭಗವಾನ್‍ಗೆ ಸೇರಿದ ಆಶ್ರಮಗಳು, ಶಿಕ್ಷಣ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ದಾಳಿ ನಡೆಸಿದೆ. ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕರ್ನಾಟಕದ ಆಶ್ರಮಗಳು ಮತ್ತು ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದೇಶ ವಿದೇಶಗಳಲ್ಲಿ ಲಕ್ಷಾಂತರ ಭಕ್ತರನ್ನು ಹೊಂದಿರುವ ಕಲ್ಕಿ ಭಗವಾನ್‍ಗೆ ಸೇರಿದ 40ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ನಡೆದಿದ್ದು, ಭಗವಾನ್ ಪುತ್ರ ಕೃಷ್ಣಾ ಮತ್ತು ಪತ್ನಿಯನ್ನು ಅಧಿಕಾರಿಗಳು ವಿಚಾರಣೆಗೆ ಗುರಿಪಡಿಸಿದ್ದಾರೆ ಎಂದು ವರದಿಯಾಗಿದೆ.
Advertisement
ಈ ಹಿಂದೆ ಕಲ್ಕಿ ಭಗವಾನ್ ಆಶ್ರಮದಲ್ಲಿ ಹಲವು ಅವ್ಯವಹಾರ ನಡೆಯುತ್ತಿದೆ. ಭಕ್ತರಿಗೆ ಲೈಂಗಿಕ ಕಿರುಕುಳ, ಬೆದರಿಕೆ ಒಡ್ಡಿದ್ದ ಆರೋಪಗಳು ಕೇಳಿಬಂದಿತ್ತು. ಆಶ್ರಮ ಸುತ್ತಮುತ್ತ ನೂರಾರು ಕೋಟಿ ಮೌಲ್ಯದ ಅಕ್ರಮ ಆಸ್ತಿಗಗಳು, ಬೆನಾಮಿ ಹೆಸರಿನಲ್ಲಿ ಸಾವಿರಾರು ಎಕರೆ ಭೂಮಿ ಖರೀದಿಸಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ.
Advertisement
Advertisement
ಎಲ್‍ಐಸಿಯಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿದ್ದ ಆಂಧ್ರಪ್ರದೇಶ ಮೂಲದ ವಿಜಯ್‍ಕುಮಾರ್ ನಾಯ್ಡು ಕೆಲಸಕ್ಕೆ ರಾಜೀನಾಮೆ ನೀಡಿದ ಬಳಿಕ ಬೆಂಗಳೂರಿನ ಶಾಲೆಯೊಂದರಲ್ಲಿ ಕೆಲಸಕ್ಕೆ ಸೇರಿದ್ದ. ನಂತರ ಅಲ್ಲಿಂದಲೂ ಹೊರಬಿದ್ದು ಚಿತ್ತೂರಿನಲ್ಲಿ ಶಿಕ್ಷಣ ಸಂಸ್ಥೆ ಸ್ಥಾಪಿಸಿದ್ದ. 1989ರಲ್ಲಿ ಶಿಕ್ಷಣ ಸಂಸ್ಥೆಗಳು ನಷ್ಟ ಅನುಭವಿಸಿದ ಬಳಿಕ ಕೆಲ ವರ್ಷ ಭೂಗತನಾಗಿದ್ದ ವಿಜಯ್‍ಕುಮಾರ್ ದಿಢೀರ್ ಸ್ವಾಮಿ ವೇಷದಲ್ಲಿ ಪ್ರತ್ರ್ಯಕ್ಷನಾಗಿ,” ನಾನು ವಿಷ್ಣುವಿನ 10ನೇ ಅವತಾರ. ನಾನು ಕಲ್ಕಿ ಭಗವಾನ್” ಎಂದು ಘೋಷಿಸಿಕೊಂಡಿದ್ದ.
Advertisement
ನನ್ನ ಪತ್ನಿಯೂ ದೇವರ ಅವತಾರ ಎಂದು ಘೋಷಿಸಿಕೊಂಡಿದ್ದ. ಕೆಲ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ದುಡ್ಡುಕೊಟ್ಟಂತೆ ಇವರ ಸಾಮಾನ್ಯ ದರ್ಶನಕ್ಕೆ ಭಕ್ತರು 5 ಸಾವಿರ ರೂ. ಮತ್ತು ವಿಶೇಷ ದರ್ಶನಕ್ಕೆ 25 ಸಾವಿರ ರೂ. ಪಾವತಿಸಬೇಕಿತ್ತು.
ಭಕ್ತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಹಲವು ಕಡೆ ಆಶ್ರಮ ಕಡೆ ಸ್ಥಾಪಿಸಿದ್ದ. ಈತನಿಗೆ ಅನಿವಾಸಿ ಭಾರತೀಯರು ಮತ್ತು ದೊಡ್ಡ ದೊಡ್ಡ ಉದ್ಯಮಿಗಳು ಭಕ್ತರಿದ್ದಾರೆ. ಭಕ್ತರು ಆಶ್ರಮಕ್ಕೆ ನೀಡಿದ ದೇಣಿಗೆ ಹಣವನ್ನು ಬೇರೆ ಉದ್ದೇಶಗಳಿಗೆ ಬಳಸಲಾಗಿದೆ. ಭಾರೀ ತೆರಿಗೆ ವಂಚನೆ ನಡೆದಿದೆ ಎನ್ನುವ ಆರೋಪ ಕೇಳಿಬಂದಿದೆ.
ಕಲ್ಕಿ ಭಗವಾನ್ ಪುತ್ರ ಕೃಷ್ಣಾ ವಿವಿಧ ಉದ್ಯಮಗಳಲ್ಲಿ ಭಾರೀ ಪ್ರಮಾಣದ ಹೂಡಿಕೆ ಮಾಡಿದ್ದು ಲೆಕ್ಕ ಪತ್ರದಲ್ಲಿ ಗೋಲ್‍ಮಾಲ್ ಎಸಗಿದ್ದಾನೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಐಟಿ ದಾಳಿ ನಡೆದಿದೆ ಎನ್ನಲಾಗುತ್ತಿದೆ. 2008 ರಲ್ಲಿ ಚಿತ್ತೂರು ಜಿಲ್ಲೆಯ ಕಲ್ಕಿ ಮಠದಲ್ಲಿ ಸಂಭವಿಸಿದ ದುರಂತದಲ್ಲಿ ಐದು ಜನರು ಸಾವನ್ನಪ್ಪಿದರು ಮತ್ತು ಅನೇಕರು ಗಾಯಗೊಂಡಿದ್ದರು.