ಭೋಪಾಲ್: ಮಿಂದೋರಿ ಕಾಡಿನಲ್ಲಿ ನಿಂತಿದ್ದ ಕಾಲಿನಲ್ಲಿ ಬರೋಬ್ಬರಿ 40 ಕೋಟಿ ರೂ. ಮೌಲ್ಯದ 52 ಕೆಜಿ ಚಿನ್ನವನ್ನು ಕಾರ್ಯಾಚರಣೆ ನಡೆಸಿ ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ರಾತ್ರಿ 2 ಗಂಟೆ ವೇಳೆಗೆ ಅಧಿಕಾರಿಗಳಿಗೆ ಖಚಿತ ಮಾಹಿತಿ ಬಂದಿತ್ತು. 30 ವಾಹನಗಳಲ್ಲಿ 100 ಪೊಲೀಸರು ಕಾರ್ಯಾಚರಣೆ ತೆರಳಿದ್ದರು. ಜಾರಿ ನಿರ್ದೇಶನಾಲಯ (ED), ಲೋಕಾಯುಕ್ತ ಮತ್ತು ಐಟಿ ಇಲಾಖೆಯಿಂದ ರಿಯಲ್ ಎಸ್ಟೇಟ್ ಉದ್ಯಮಿಗಳ ಮೇಲೆ ದಾಳಿ ನಡೆಸುವ ಸಂದರ್ಭದಲ್ಲಿ ಇದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಬಿಹಾರದಲ್ಲಿ ಥರ್ಮಲ್ ಪವರ್ ಪ್ಲಾಂಟ್ ಸ್ಥಾಪಿಸಲು ಅದಾನಿ ಗ್ರೂಪ್ 20,000 ಕೋಟಿ ಹೂಡಿಕೆ
Advertisement
Advertisement
ಇಲಾಖೆಗೆ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಸುಳಿವು ಸಿಕ್ಕಿತು. ನಾವು ಕರೆ ಸ್ವೀಕರಿಸಿದ ನಂತರ 30 ವಾಹನಗಳಲ್ಲಿ 100 ಪೊಲೀಸರ ತಂಡವು ಸ್ಥಳಕ್ಕೆ ಹೋದೆವು. ಪೊಲೀಸರು ಬಂಧಿಸಲು ಪ್ರಯತ್ನಿಸುತ್ತಿರುವ ಬಿಲ್ಡರ್ ಹೆಸರಿನಲ್ಲಿ ಕಾರನ್ನು ನೋಂದಾಯಿಸಲಾಗಿದೆ ಎಂದು ಐಟಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Advertisement
ಭೋಪಾಲ್ ಮತ್ತು ಇಂದೋರ್‌ನಲ್ಲಿರುವ ತ್ರಿಶೂಲ್ ಕನ್‌ಸ್ಟ್ರಕ್ಷನ್, ಕ್ವಾಲಿಟಿ ಗ್ರೂಪ್ ಮತ್ತು ಇಶಾನ್ ಗ್ರೂಪ್‌ಗೆ ಸೇರಿದ 51 ಸ್ಥಳಗಳ ಮೇಲೆ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ನಿಮ್ಮ ಮನೆ ಹೆಣ್ಣು ಮಕ್ಕಳ ಬಗ್ಗೆ ಮಾತನಾಡಿದ್ರೆ ಪರಿಶೀಲಿಸುತ್ತಾ ಕೂರ್ತಿದ್ರಾ? – ಬಿವಿ ಶ್ರೀನಿವಾಸ್ ಆಕ್ರೋಶ
Advertisement
ಪ್ರಾದೇಶಿಕ ಸಾರಿಗೆ ಕಚೇರಿಯ (ಆರ್‌ಟಿಒ) ಮಾಜಿ ಕಾನ್‌ಸ್ಟೆಬಲ್ ಸೌರಭ್ ಶರ್ಮಾ ಅವರ ನಿವಾಸದ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು 1 ಕೋಟಿ ಮತ್ತು 40 ಕೆಜಿ ಬೆಳ್ಳಿಯನ್ನು ವಶಪಡಿಸಿಕೊಂಡಿದ್ದಾರೆ. ಶರ್ಮಾ ಅವರು ಒಂದು ವರ್ಷದ ಹಿಂದೆ ಕೆಲಸ ತೊರೆದು ರಿಯಲ್ ಎಸ್ಟೇಟ್ ಉದ್ಯಮಕ್ಕೆ ಸೇರಿದ್ದರು.