ಬೆಂಗಳೂರು: ರಾಜ್ಯದಲ್ಲಿ ಸ್ತನ ಕ್ಯಾನ್ಸರ್ (Breast cance) ಮತ್ತು ಗರ್ಭಕಂಠದ ಕ್ಯಾನ್ಸರ್ (Cervical cancer) ಹೆಚ್ಚಳವಾಗಿದ್ದು, ತಪಾಸಣೆಯಲ್ಲಿ ಸ್ತನ, ಗರ್ಭಕಂಠದ ಕ್ಯಾನ್ಸರ್ ಧೃಢವಾದರೆ ಚಿಕಿತ್ಸೆ ನೀಡುವ ಕೆಲಸ ಆಗುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ತಿಳಿಸಿದ್ದಾರೆ.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್‍ನ ತಿಪ್ಪೇಸ್ವಾಮಿಯವರ ಪ್ರಶ್ನೆಗೆ ಅವರು ಉತ್ತರಿಸಿದರು. ಈ ವೇಳೆ ಮನೆ ಮನೆಗೆ ಭೇಟಿ ನೀಡಿ ಕ್ಯಾನ್ಸರ್ ಪರೀಕ್ಷೆ ಮಾಡುವ ಚಿಂತನೆ ನಡೆಸಿದ್ದೇವೆ. ಕೇಂದ್ರದಿಂದ ಹೆಚ್‍ಪಿವಿ ವ್ಯಾಕ್ಸಿನೇಷನ್ ಘೋಷಣೆ ಮಾಡಿದೆ. ಆದರೆ ಇದೂವರೆಗೆ ಅನುಷ್ಠಾನಕ್ಕೆ ಬಂದಿಲ್ಲ. ಬಜೆಟ್‍ನಲ್ಲಾದರೂ ನೀಡಬಹುದು ಎಂಬ ನಿರೀಕ್ಷೆ ಇದೆ. ಇನ್ನೂ ಮನೆ ಮನೆಗೆ ಹೋಗಿ ಕ್ಷಯ ರೋಗ ತಪಾಸಣೆಗೆ ವಿಶೇಷ ಕಾರ್ಯಕ್ರಮ ಜಾರಿಗೆ ತರುವ ಬಗ್ಗೆ ಚಿಂತನೆ ಮಾಡಲಾಗಿದೆ. ರಾಜ್ಯ ಸರ್ಕಾರ 9 ರಿಂದ 14 ವರ್ಷದ ಹೆಣ್ಣು ಮಕ್ಕಳಿಗೆ ನೀಡಲಾಗುತ್ತಿರುವ ಹೆಚ್‍ಪಿವಿ ಲಸಿಕೆಯನ್ನು ರಾಜ್ಯದಲ್ಲಿ ಕಡ್ಡಾಯ ಮಾಡಿಲ್ಲ. ಲಸಿಕೆ ಸರಬರಾಜಿಗೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಕೇಂದ್ರ ಸಹಕಾರ ಕೊಟ್ಟರೆ ರಾಜ್ಯದಲ್ಲಿ ಲಸಿಕೆ ಹಾಕುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಧೃಡವಾಗಿರೋ ಕ್ಯಾನ್ಸರ್ ಮಾದರಿ
ಗರ್ಭಕಂಠದ ಕ್ಯಾನ್ಸರ್- 5473 (ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ – 2066)
ಸ್ತನ ಕ್ಯಾನ್ಸರ್- 2213 (ಚಿಕಿತ್ಸೆ – 2213)
ಬಾಯಿ ಕ್ಯಾನ್ಸರ್- 5787 (ಚಿಕಿತ್ಸೆ – 5787)