ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ (KRS Dam) ಡ್ಯಾಂನ ಒಳಹರಿವಿನ ಪ್ರಮಾಣ ಏರಿಕೆಯಾಗಿದ್ದು, 54,311 ಕ್ಯೂಸೆಕ್ ನೀರು ಹರಿದು ಬರುತ್ತಿದೆ.
ಸದ್ಯ ಕಳೆದೆರಡು ದಿನಗಳಿಂದ ಕಾವೇರಿ ಜಲನಯನ ಪ್ರದೇಶದಲ್ಲಿ ಉತ್ತಮವಾದ ಮಳೆಯಾಗುತ್ತಿರುವ (Rain) ಕಾರಣ ಒಳ ಹರಿವಿನ ಪ್ರಮಾಣ ಹೆಚ್ಚಳವಾಗಿದೆ. ಒಳ ಹರಿವು ಏರಿಕೆಯಾಗುತ್ತಿದ್ದಂತೆ ಹೊರ ಹರಿವಿನ ಪ್ರಮಾಣವನ್ನು ಅಧಿಕಾರಿಗಳು ಹೆಚ್ಚಿಸಿದ್ದಾರೆ. ಡ್ಯಾಂ ಸಂಪೂರ್ಣ ಭರ್ತಿಯಾಗಿರುವ ಕಾರಣ ಡ್ಯಾಂನಿಂದ ನದಿಗೆ 56,624 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: ಗಡಿಯಲ್ಲಿ 12 ಕೆ.ಜಿ ಸರಕು ಹೊತ್ತ ಡ್ರೋನ್ ಹೊಡೆದುರುಳಿಸಿದ ಭಾರತ
Advertisement
Advertisement
124.80 ಅಡಿ ಗರಿಷ್ಟ ಸಾಮರ್ಥ್ಯವಿರುವ ಕೆಆರ್‌ಎಸ್ ಡ್ಯಾಂ ಸದ್ಯ 124.70 ಅಡಿಯಷ್ಟು ಭರ್ತಿಯಾಗಿದೆ. ಡ್ಯಾಂಗೆ 54,311 ಕ್ಯೂಸೆಕ್ ಒಳಹರಿವು ಬರುತ್ತಿದ್ದರೆ, 56,624 ಕ್ಯೂಸೆಕ್ ನೀರು ಡ್ಯಾಂನಿಂದ ನದಿಗೆ ಹೋಗುತ್ತಿದೆ. ಕೆಆರ್‌ಎಸ್ ಡ್ಯಾಂ 49.475 ಟಿಎಂಸಿ ನೀರಿನ ಸಾಮರ್ಥ್ಯ ಹೊಂದಿದ್ದು, ಸದ್ಯ ಜಲಾಶಯದಲ್ಲಿ 49.312 ಟಿಎಂಸಿ ನೀರಿದೆ. ಇದನ್ನೂ ಓದಿ: ಕಲ್ಯಾಣ ರಾವ್ ಮುಚಳಂಬಿ ಪ್ರಥಮ ಪುಣ್ಯ ಸ್ಮರಣೆ – ಐವರಿಗೆ ಕಲ್ಯಾಣಶ್ರೀ ಪ್ರಶಸ್ತಿ ಪ್ರದಾನ