ಮೈಸೂರು: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಕಬಿನಿ ಜಲಾಶಯಕ್ಕೆ (Kabini Reservoir) ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಸಂತಸ ತಂದಿದೆ.
ಮೈಸೂರು (Mysuru) ಜಿಲ್ಲೆ ಹೆಚ್.ಡಿ ಕೋಟೆ ತಾಲೂಕಿನ ಕಬಿನಿ ಜಲಾಶಯ ಒಂದೇ ವಾರದಲ್ಲಿ ಮೂರು ಅಡಿಯಷ್ಟು ನೀರು ಸಂಗ್ರಹವಾಗಿದೆ.
Advertisement
Advertisement
ತಮಿಳುನಾಡಿಗೆ (TamilNadu) ನಿರಂತರವಾಗಿ ನೀರು ಹರಿಸುತ್ತಿದ್ದ ಹಿನ್ನೆಲೆಯಲ್ಲಿ ಜಲಾಶಯದ ಮಟ್ಟ ದಿನೇ ದಿನೇ ಕುಸಿಯುತ್ತಿತ್ತು. 2,284 ಅಡಿಯಷ್ಟಿದ್ದ ನೀರಿನ ಪ್ರಮಾಣ 2,273 ಅಡಿಗೆ ಕುಸಿತಕಂಡಿತ್ತು. ಆದ್ರೆ ಒಳಹರಿವಿನ ಪ್ರಮಾಣ ಹೆಚ್ಚಿದ್ದರಿಂದಾಗಿ ನೀರಿನ ಮಟ್ಟವೂ ಏರಿಕೆಯಾಗಿದೆ. ಸದ್ಯ ಡ್ಯಾಂನಲ್ಲಿ 2,276.26 ಅಡಿಯಷ್ಟು ನೀರು ಸಂಗ್ರಹವಾಗಿದೆ. ಇದನ್ನೂ ಓದಿ: ಕಾಶ್ಮೀರದಲ್ಲಿ 3ನೇ ದಿನಕ್ಕೆ ಕಾಲಿಟ್ಟ ಸೇನಾ ಕಾರ್ಯಾಚರಣೆ – ಉಗ್ರರ ಹುಟ್ಟಡಗಿಸಲು ವಿಳಂಬವಾಗ್ತಿರುವುದ್ಯಾಕೆ?
Advertisement
Advertisement
ಜಲಾಶಯಕ್ಕೆ ನಿತ್ಯ 3,659 ಕ್ಯುಸೆಕ್ ನೀರು ಹರಿದು ಬರುತ್ತಿದ್ದು, 1,100 ಕ್ಯೂಸೆಕ್ ಹೊರಹರಿವು ಇದೆ. ಇದನ್ನೂ ಓದಿ: ವಾಕ್ ಸ್ವಾತಂತ್ರ್ಯ ಧರ್ಮದ ವಿರುದ್ಧ ದ್ವೇಷ ಭಾಷಣ ಆಗಬಾರದು: ಮದ್ರಾಸ್ ಹೈಕೋರ್ಟ್
Web Stories