ಮಂಡ್ಯ: ಕಾವೇರಿ (Cauvery) ಜಲಾನಯನ ಪ್ರದೇಶದಲ್ಲಿ ಕಳೆದ 2 ದಿನಗಳಿಂದ ಸ್ವಲ್ಪ ಪ್ರಮಾಣದಲ್ಲಿ ಮಳೆ ಬಿದ್ದ ಪರಿಣಾಮ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂನ (KRS Dam) ಒಳಹರಿವು 11,800 ಕ್ಯೂಸೆಕ್‌ಗೆ ಏರಿಕೆಯಾಗಿದೆ.
ಸಾಕಷ್ಟು ಆತಂಕ ಮೂಡಿಸಿದ್ದ ಕೆಆರ್‌ಎಸ್‌ನ ನೀರಿನ ಮಟ್ಟ ಇದೀಗ 2 ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಹಿನ್ನೆಲೆ ಡ್ಯಾಂಗೆ ಹರಿದು ಬರುವ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ನಿನ್ನೆ (ಸೋಮವಾರ) ಬೆಳಗ್ಗೆ 5,811 ಕ್ಯೂಸೆಕ್ ಇದ್ದ ಒಳ ಹರಿವು ಇಂದು ಬೆಳಗ್ಗೆ 11,800 ಕ್ಯೂಸೆಕ್ ಏರಿಕೆಯಾಗಿದೆ.
ಒಳ ಹರಿವು ಹೆಚ್ಚಳದಿಂದ ಮತ್ತೆ ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ 100 ಅಡಿ ಗಡಿ ತಲುಪಿದೆ. ಸದ್ಯ 99.50 ಅಡಿಗೆ ಕೆಆರ್‌ಎಸ್ ನೀರಿನ ಮಟ್ಟ ಏರಿಕೆಯಾಗಿದೆ. ಒಳ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ರೈತರಲ್ಲಿ ಸ್ವಲ್ಪ ಸಮಾಧಾನ ಮೂಡಿದೆ. ಮತ್ತೊಂದೆಡೆ ತಮಿಳುನಾಡಿಗೆ ನೀರು ಬಿಡುಗಡೆ ಮುಂದುವರಿಕೆಯಾಗಿದ್ದು, ಇಂದು 1,592 ಕ್ಯೂಸೆಕ್ ನೀರು ತಮಿಳುನಾಡಿಗೆ ಹೋಗುತ್ತಿದೆ. ಇದನ್ನೂ ಓದಿ: ಬೆಂಗಳೂರಿನ ನಡುರಸ್ತೆಯಲ್ಲಿ ಹೊತ್ತಿ ಉರಿದ ಬೃಹತ್ ಗಾತ್ರದ ಕ್ರೇನ್
ಕೆಆರ್‌ಎಸ್ ಡ್ಯಾಂ ಇಂದಿನ ನೀರಿನ ಮಟ್ಟ:
ಗರಿಷ್ಠ ಮಟ್ಟ – 124.80 ಅಡಿ
ಇಂದಿನ ಮಟ್ಟ – 99.50 ಅಡಿ
ಒಳ ಹರಿವು – 11,800 ಕ್ಯೂಸೆಕ್
ಹೊರ ಹರಿವು – 1,592 ಕ್ಯೂಸೆಕ್
ಗರಿಷ್ಠ ಸಂಗ್ರಹ ಸಾಮರ್ಥ್ಯ – 49.452 ಟಿಎಂಸಿ
ಇಂದು ಸಂಗ್ರಹ ಇರುವ ನೀರು – 22.453 ಟಿಎಂಸಿ ಇದನ್ನೂ ಓದಿ: Breaking – ಮೆಟ್ರೋ ಹಸಿರು ಮಾರ್ಗದ ಸಂಚಾರದಲ್ಲಿ ಭಾರೀ ವ್ಯತ್ಯಯ
Web Stories