ಮೈಸೂರು: ಎಚ್.ಡಿ ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಒಳಹರಿವು ಹೆಚ್ಚಳವಾಗಿದೆ. 4,261 ಕ್ಯೂಸೆಕ್ ನೀರು ಜಲಾಶಯಕ್ಕೆ ಬರುತ್ತಿದ್ದರೆ 500 ಕ್ಯೂಸೆಕ್ ನೀರನ್ನು ಬಿಡಲಾಗುತ್ತಿದೆ.
ಕಳೆದ ವರ್ಷ ಈ ಅವಧಿಯಲ್ಲಿ ಜಲಾಶಯಕ್ಕೆ 15,000 ಕ್ಯೂಸೆಕ್ ನೀರು ಒಳಹರಿವು ಇದ್ದರೆ, 10,000 ಕ್ಯೂಸೆಕ್ ಹೊರಹರಿವು ಇತ್ತು. ಕಬಿನಿ ಜಲಾಶಯದ ಗರಿಷ್ಟ ಮಟ್ಟ 2284 ಅಡಿ ಆಗಿದ್ದು, ಇಂದಿನ ಮಟ್ಟ 2259 ಅಡಿ ನೀರಿದೆ. ಕಳೆದ ವರ್ಷ 2282 ಅಡಿ ಇತ್ತು. ಕಳೆದ ವರ್ಷ 18.55 ಟಿಎಂಸಿ ನೀರಿದ್ದರೆ ಈಗ 7.04 ಟಿಎಂಸಿ ನೀರಿದೆ.
Advertisement
Advertisement
ಕಾವೇರಿ ನದಿ ಪಾತ್ರದಲ್ಲಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್‍ಎಸ್‍ನ ಒಳಹರಿವಿನಲ್ಲಿ ಅಲ್ಪ ಪ್ರಮಾಣದ ಏರಿಕೆ ಆಗಿದೆ. ಕೆಆರ್‍ಎಸ್‍ನ ಗರಿಷ್ಟ ಮಟ್ಟ 124.80 ಅಡಿ ಇದ್ದು, ಇಂದಿನ ಮಟ್ಟ 80.75 ಅಡಿ ಆಗಿದೆ. ಒಳಹರಿವು 2,222 ಕ್ಯೂಸೆಕ್ ಇದ್ದು, 291 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.
Advertisement
Advertisement
ಕ್ಯೂಸೆಕ್ ಮತ್ತು ಟಿಎಂಸಿ ಎಂದರೆ ಎಷ್ಟು?
ಕ್ಯೂಸೆಕ್ ಎಂಬುದು Cubic feet per Second. ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯೂಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯೂಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯೂಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಅಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.