ಹೆಚ್ಚಾದ ಭೀಮಾ ನದಿ ಒಳಹರಿವು – ಯಾದಗಿರಿ ವೀರಾಂಜನೇಯ, ಕಂಗಳೇಶ್ವರ ದೇಗುಲ ಜಲಾವೃತ

Public TV
1 Min Read
bhimanadi yadagiri 1

ಯಾದಗಿರಿ: ಜಿಲ್ಲೆಯಲ್ಲಿ ಮಳೆರಾಯನ ಆರ್ಭಟಕ್ಕೆ ಭೀಮಾನದಿ ಉಕ್ಕಿ ಹರಿಯುತ್ತಿದೆ. ಗುರಣಸಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿಂದ ಅಧಿಕ ಪ್ರಮಾಣದಲ್ಲಿ ನೀರು ಬಿಡುತ್ತಿರುವ ಹಿನ್ನೆಲೆ, ತೀರದಲ್ಲಿರುವ ವೀರಾಂಜನೇಯ ಮತ್ತು ಕಂಗಳೇಶ್ವರ ದೇವಸ್ಥಾನ ಸಂಪೂರ್ಣ ಜಲಾವೃತಗೊಂಡಿದೆ.

bhimanadi yadagiri 3

ಕಳೆದ ಎರಡು ದಿನಗಳಿಂದ ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಚಿತ್ತಾಪುರ ತಾಲೂಕಿನ ಸನ್ನತ್ತಿ ಬ್ರಿಡ್ಜ್ ಕಂ ಬ್ಯಾರೇಜ್ ನಿಂದ ಭೀಮಾನದಿಗೆ 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ:  ಅಂಗನವಾಡಿ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರೆಂದು ಪರಿಗಣಿಸಲು ಒತ್ತಾಯ

bhimanadi yadagiri 2

ಅದೇ ರೀತಿ ಹಳ್ಳ, ಕೊಳ್ಳದಿಂದ ಭೀಮಾನದಿಗೆ ಒಳಹರಿವು ಹೆಚ್ಚಾಗಿ, ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಈ ಪರಿಣಾಮ ಜನರಿಗೆ ಮತ್ತೆ ಪ್ರವಾಹದ ಭೀತಿ ಎದುರಾಗಿದೆ.

Share This Article
Leave a Comment

Leave a Reply

Your email address will not be published. Required fields are marked *