ಚಾಮರಾಜನಗರ: ಬಂಡೀಪುರದಲ್ಲಿ(Bandipura) ರಾತ್ರಿ ವಾಹನ ಸಂಚಾರ ನಿಷೇಧ ತೆರವುಗೊಳಿಸುವ ಪ್ರಯತ್ನಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಬಂಡೀಪುರ ಉಳಿಸಿ ಅಭಿಯಾನಕ್ಕೆ ಭಾರೀ ಬೆಂಬಲ ವ್ಯಕ್ತವಾಗಿದ್ದು, ಭಾನುವಾರ ನಡೆದ ನಮ್ಮ ನಡಿಗೆ ಬಂಡೀಪುರದ ಕಡೆಗೆ ಪಾದಯಾತ್ರೆ ಸಾಕ್ಷಿಯಾಯಿತು.
ಬಂಡೀಪುರ ಅಭಯಾರಣ್ಯದ ಮೂಲಕ ತಮಿಳುನಾಡು(TamilNadu, ಕೇರಳ(Kerala) ರಾಜ್ಯಗಳಿಗೆ 2 ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗಿವೆ. ಇಲ್ಲಿ ವಾಹನಗಳಿಗೆ ಸಿಲುಕಿ ವನ್ಯಜೀವಿಗಳು ಸಾವನ್ನಪ್ಪುತ್ತಿದ್ದ ಹಿನ್ನೆಲೆಯಲ್ಲಿ 2009ರಲ್ಲಿ ರಾತ್ರಿ ವಾಹನ ಸಂಚಾರ ನಿಷೇಧಿಸಲಾಗಿದೆ. ಕೆಲವು ಮಾಫಿಯಾಗಳಿಗೆ ಇದರಿಂದ ಭಾರೀ ಹೊಡೆತ ಬಿದ್ದಿದೆ. ಕೇರಳ ಸರ್ಕಾರವಂತೂ ಇಲ್ಲಿ ವಾಹನ ಸಂಚಾರ ನಿಷೇಧ ತೆರವುಗೊಳಿಸಲು ರಾಜ್ಯ ಸರ್ಕಾರದ ಮೇಲೆ ನಿರಂತರ ಒತ್ತಡ ಹೇರುತ್ತಲೇ ಬಂದಿದೆ. ಇದನ್ನೂ ಓದಿ: ಹುಬ್ಬಳ್ಳಿ | ಭೀಕರ ರಸ್ತೆ ಅಪಘಾತ – ಮೂವರು ಮಹಿಳೆಯರು ಸ್ಥಳದಲ್ಲೇ ಸಾವು
ಇದೀಗ ವಯನಾಡು ಸಂಸದೆ ಪ್ರಿಯಾಂಕಾ ವಾದ್ರಾ ರಾತ್ರಿ ವಾಹನ ಸಂಚಾರ ನಿಷೇಧ ತೆರವಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆಂಬ ಮಾತುಗಳು ಕೇಳಿಬರುತ್ತಿವೆ. ಇದರ ಜೊತೆಗೆ ವಯನಾಡ್‌ನಲ್ಲಿ ನಡೆದ ಕಾಂಗ್ರೆಸ್ ಕೃತಜ್ಞತಾ ಸಮಾವೇಶವೊಂದರಲ್ಲಿ ಪಾಲ್ಗೊಂಡಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೂ ಸಹ ರಾತ್ರಿ ಸಂಚಾರ ನಿಷೇಧ ತೆರವು ಮಾಡುವ ಬಗ್ಗೆ ಭರವಸೆ ನೀಡಿದ್ದರು.
ಇತ್ತೀಚಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಡನೆ ಸಭೆಯನ್ನು ನಡೆಸಿದ್ದರು. ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿದರೆ ರಾಜಕೀಯ ಹಿತಾಸಕ್ತಿಗೋಸ್ಕರ ನಿಷೇಧ ತೆರವುಗೊಳಿಸುವ ಆತಂಕ ಎದುರಾಗಿರುವುದರಿಂದ ಬೀದಿಗಿಳಿದು ಬಂಡೀಪುರ ಉಳಿಸಿ ಅಭಿಯಾನ ನಡೆಸುತ್ತಿದ್ದಾರೆ. ಇದನ್ನೂ ಓದಿ: Bhovi Corporation Scam – ಜನರಲ್ ಮ್ಯಾನೇಜರ್ ನಾಗರಾಜಪ್ಪ 14 ದಿನ ಇಡಿ ಕಸ್ಟಡಿಗೆ
ಇಂದು ನಮ್ಮ ನಡಿಗೆ ಬಂಡೀಪುರದ ಕಡೆಗೆ ಎಂಬ ಘೋಷಣೆಯೊಂದಿಗೆ ಪಾದಯಾತ್ರೆ ನಡೆಯಿತು. ಗುಂಡ್ಲುಪೇಟೆ ತಾಲೂಕು ಕಗ್ಗಳದ ಹುಂಡಿಯಿಂದ ಮದ್ದೂರು ಚೆಕ್‌ಪೋಸ್ಟ್‌ವರೆಗೆ ನಡೆದ ಪಾದಯಾತ್ರೆಯಲ್ಲಿ ಪರಿಸರವಾದಿಗಳು, ವನ್ಯಜೀವಿ ಪ್ರೇಮಿಗಳು, ರೈತರು, ಐಟಿ-ಬಿಟಿ ನೌಕರರು, ನಿವೃತ್ತ ಅರಣ್ಯಾಧಿಕಾರಿಗಳು ಹೀಗೆ ಎಲ್ಲಾ ವರ್ಗದ ನೂರಾರು ಮಂದಿ ಭಾಗವಹಿಸಿದ್ದರು. ಕೇರಳದ ಪರಿಸರವಾದಿಗಳು ಸಹ ಈ ಅಭಿಯಾನದಲ್ಲಿ ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸಿದರು. ಇದನ್ನೂ ಓದಿ: ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾ ಕೊಟ್ಟಿದ್ದ ರಶ್ಮಿಕಾಗೆ ಶುರುವಾಯ್ತಾ ಬ್ಯಾಡ್ ಟೈಮ್?
ಪಾದಯಾತ್ರೆ ಬಳಿಕ ಮದ್ದೂರು ಚೆಕ್‌ಪೋಸ್ಟ್ ಬಳಿ ನಡೆದ ಸಮಾವೇಶದ ಸ್ಥಳಕ್ಕೆ ಗುಂಡ್ಲುಪೇಟೆ ಕಾಂಗ್ರೆಸ್ ಶಾಸಕ ಗಣೇಶ್ ಪ್ರಸಾದ್ ಭೇಟಿ ನೀಡಿದ್ದರು. ರಾತ್ರಿ ವಾಹನ ಸಂಚಾರ ನಿಷೇಧ ತೆರವು ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ. ಯಾರು ಸಹ ಆತಂಕಪಡುವ ಅಗತ್ಯ ಇಲ್ಲ ಎಂಬ ಭರವಸೆಯ ಮಾತುಗಳನ್ನಾಡಿದರು.
ಕೇರಳದವರು ರಾತ್ರಿ ವೇಳೆ ಹೆಚ್ಚುವರಿ ಬಸ್‌ಗಳ ಸಂಚಾರಕ್ಕೆ ಅವಕಾಶ ಕೇಳಿದ್ದಾರೆ ಅಷ್ಟೇ. ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ಅವರಿಂದ ಯಾವುದೇ ಒತ್ತಡ ಇಲ್ಲ. ಅವರು ಯಾವುದೇ ಪತ್ರವನ್ನು ಬರೆದಿಲ್ಲ. ಯಥಾಸ್ಥಿತಿ ಮುಂದುವರಿಯಲಿ ಎಂಬುದೇ ನನ್ನ ಅಭಿಪ್ರಾಯ ಎನ್ನುವ ಮೂಲಕ ರಾತ್ರಿ ವಾಹನ ಸಂಚಾರ ನಿಷೇಧ ಮುಂದುವರಿಕೆಗೆ ಸಹಮತ ವ್ಯಕ್ತಪಡಿಸಿದರು. ಇದನ್ನೂ ಓದಿ: ಭ್ರಷ್ಟ ಕುಟುಂಬದ ಮಾತು ಕೇಳಿ ನನ್ನನ್ನ ಉಚ್ಚಾಟನೆ ಮಾಡಲಾಗಿದೆ: ಯತ್ನಾಳ್ ನಿಗಿನಿಗಿ ಕೆಂಡ
ಪರಿಸರವಾದಿಗಳ ಹೋರಾಟ ತೀವ್ರ
ಸ್ವಯಂಪ್ರೇರಿತರಾಗಿ ನೂರಾರು ಜನರು ಪಾಲ್ಗೊಳ್ಳುವ ಮೂಲಕ ಬಂಡೀಪುರ ಉಳಿಸಿ ಅಭಿಯಾನ ಸಾರ್ವಜನಿಕ ಚಳವಳಿಯಾಗಿ ರೂಪುಗೊಂಡಿದೆ. ರಾತ್ರಿ ವಾಹನ ಸಂಚಾರ ನಿಷೇಧದ ತೆರವೊಗೊಳಿಸುವುದಿಲ್ಲ ಎಂಬ ಸ್ಪಷ್ಟ ಭರವಸೆ ನೀಡುವವರೆಗೂ ಹಂತ ಹಂತವಾಗಿ ಹೋರಾಟ ತೀವ್ರಗೊಳಿಸಲು ಪರಿಸರವಾದಿಗಳು ನಿರ್ಧರಿಸಿದ್ದಾರೆ. ಇದನ್ನೂ ಓದಿ: ಅಯ್ಯೋ ವಿಧಿಯೇ… ಕಾಲೇಜಿನಲ್ಲಿ ವಿದಾಯ ಭಾಷಣ ಮಾಡುತ್ತಲೇ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು
ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಯಾವುದೇ ಕಾರಣಕ್ಕೂ ಕೂಡ ರಾತ್ರಿ ಸಂಚಾರಕ್ಕೆ ಅವಕಾಶ ಕೊಡದಂತೆ ಮನವಿ ಮಾಡಿದರು. ರಸ್ತೆ ತಡೆದು, ಟೈರ್ ಸುಟ್ಟು ಹಾಕಿ ಪ್ರತಿಭಟನೆ ಮಾಡಿದರು. ಕೇರಳ ಸರ್ಕಾರ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ, ಒಂದು ವೇಳೆ ಒತ್ತಡಕ್ಕೆ ರಾಜ್ಯ ಸರ್ಕಾರ ಮಣಿದರೆ ಬೃಹತ್ ಹೋರಾಟದ ಎಚ್ಚರಿಕೆ ನೀಡಿದರು.