ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಅಧಿಕ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಕಾರಣ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಕಾವೇರಿ ಕೊಳ್ಳದ ಜನರಿಗೆ ಪ್ರವಾಹದ ಭೀತಿ ಎದುರಾಗಿದೆ.
Advertisement
ಕೆಆರ್‌ಎಸ್ ಜಲಾಶಯದ ನೀರಿನ ಗರಿಷ್ಠ ಮಟ್ಟ 124.80 ಅಡಿಗಳಿದ್ದು, ಇಂದಿನ ನೀರಿನ ಮಟ್ಟ 124.76 ಅಡಿಗಳಷ್ಟಿದೆ. ಇಂದಿನ ಒಳಹರಿವಿನ ಪ್ರಮಾಣ 67,712 ಕ್ಯೂಸೆಕ್ ಹಾಗೂ ಹೊರ ಹರಿವಿನ ಪ್ರಮಾಣ 81,112 ಕ್ಯೂಸೆಕ್‌ನಷ್ಟಿದೆ. ಜಲಾಶಯದ ಒಟ್ಟು ಸಂಗ್ರಹ ಸಾಮರ್ಥ್ಯ 49.452 ಟಿಎಂಸಿ ಅಷ್ಟಿದ್ದು, ಇಂದಿನ ಸಂಗ್ರಹ 49.396 ಟಿಎಂಸಿ ಗಳಷ್ಟಿದೆ. ಇದನ್ನೂ ಓದಿ: ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಕಾಲಿಗೆ ಗಂಭೀರ ಪೆಟ್ಟು: ಯಶಸ್ವಿ ಶಸ್ತ್ರ ಚಿಕಿತ್ಸೆ
Advertisement
Advertisement
ಕೆಆರ್‌ಎಸ್ ಜಲಾಶಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿರುವುದರಿಂದ 81 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗಿದ್ದು, ನಿಮಿಷಾಂಭ ದೇವಸ್ಥಾನದ ಸ್ನಾನ ಘಟ್ಟ ಹಾಗೂ ಅಕ್ಕ-ಪಕ್ಕದ ತೋಟಗಳು, ಮನೆಗಳು ಮುಳುಗಡೆಯಾಗಿವೆ. ಕಾವೇರಿ ನದಿಗೆ ಇಳಿಯದಂತೆ ಜಿಲ್ಲಾಡಳಿತದಿಂದ ಸಾರ್ವಜನಿಕರಿಗೆ ಎಚ್ಚರಿಕೆ.