– ವಾರದೊಳಗೆ ಜಲಾಶಯ ಭರ್ತಿ ಸಾಧ್ಯತೆ
– ಆಲಮಟ್ಟಿ ಜಲಾಶಯದ 14 ಗೇಟ್ ಓಪನ್
ಬಳ್ಳಾರಿ: ಮಲೆನಾಡು ಅಚ್ಚುಕಟ್ಟು ಪ್ರದೇಶದಲ್ಲಿ ನಿರಂತರ ಮಳೆ (Heavy Rain) ಸುರಿಯುತ್ತಿರುವುದರಿಂದ ತುಂಗಭದ್ರಾ ಜಲಾಶಯಕ್ಕೆ (Tungabhadra Dam) ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ವಿಜಯನಗರ (Vijayanagara) ಜಿಲ್ಲೆಯ ಹೊಸಪೇಟೆ ಬಳಿ ಇರುವ ತುಂಗಭದ್ರಾ ಜಲಾಶಯಕ್ಕೆ ಎರಡು ದಿನಗಳಿಂದ ಪ್ರತಿನಿತ್ಯ 1 ಲಕ್ಷಕ್ಕೂ ಅಧಿಕ ಕ್ಯುಸೆಕ್ ನೀರು ಬರ್ತಿದೆ.
105 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಇದೀಗ 55.972 ಟಿಎಂಸಿ ನೀರು ಸಂಗ್ರಹವಾಗಿದ್ದು, ಕಳೆದ 24 ಗಂಟೆಯಲ್ಲಿ ಬರೋಬ್ಬರಿ 9 ಟಿಎಂಸಿ ನೀರು ಜಲಾಶಯಕ್ಕೆ ಹರಿದುಬಂದಿದೆ (Water Inflow). ಸದ್ಯ ಜಲಾಶಯಕ್ಕೆ 1,08,090 ಕ್ಯುಸೆಕ್ ನೀರು ಹರಿದು ಬರುತ್ತಿದ್ದು, 400 ಕ್ಯುಸೆಕ್ ನೀರನ್ನ ಹೊರಗೆ ಬಿಡಲಾಗ್ತಿದೆ. ಇದನ್ನೂ ಓದಿ: ಸಾರ್ವಜನಿಕ ಜೀವನದಲ್ಲಿ ಒಂದೇ ಒಂದು ಕಪ್ಪುಚುಕ್ಕೆ ಇಲ್ಲ ಅನ್ನೋ ಸಿದ್ದರಾಮಯ್ಯ ಮಾತನ್ನ ಯಾರೂ ನಂಬಲ್ಲ: ಸಿ.ಟಿ ರವಿ
ಗುರುವಾರವು (ಜು.18) ಸಹ 7 ಟಿಎಂಸಿ, ಶುಕ್ರವಾರ (ಇಂದು) 9 ಟಿಎಂಸಿ ನೀರು ಜಲಾಶಯಕ್ಕೆ ಹರಿದು ಬಂದಿದೆ. ಇದೇ ರೀತಿ ನೀರು ಹರಿದುಬಂದರೆ ಒಂದೇ ವಾರದೊಳಗೆ ಜಲಾಶಯ ಭರ್ತಿಯಾಗುವ ಸಾಧ್ಯತೆ ಇದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ.
ಆಲಮಟ್ಟಿ ಜಲಾಶಯದ 14 ಗೇಟ್ ಓಪನ್:
ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೆ (Almatti Dam) ಭರಪೂರ ನೀರು ಹರಿದು ಬರ್ತಿದೆ. ಪ್ರತಿನಿತ್ಯ ಸಾವಿರಾರು ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ನಾರಾಯಣಪುರ ಜಲಾಶಯಕ್ಕೂ ನೀರು ಹರಿಬಿಡಲಾಗುತ್ತಿದೆ.
ಜಲಾಶಯ ಒಟ್ಟು 123.081 ಟಿಎಂಸಿ ಸಂಗ್ರಹಣಾ ಸಾಮರ್ಥ್ಯ ಹೊಂದಿದ್ದು, ಸದ್ಯ 92 ಟಿಎಂಸಿ ನೀರು ಸಂಗ್ರಹವಾಗಿದೆ. ಇನ್ನೂ ನಾರಾಯಣಪುರ ಜಲಾಶಯಕ್ಕೆ 14 ಗೇಟ್‌ಗಳ ಮೂಲಕ 65,000 ಕ್ಯುಸೆಕ್ ನೀರು ಹರಿಸಲಾಗುತ್ತಿದೆ. ಇದರಿಂದ ಕೃಷಿಗೆ ನೀರು ಪೂರೈಕೆಯಾಗುತ್ತಿದ್ದು, ರೈತರ ಮೊಗದಲ್ಲೂ ಮಂದಹಾಸ ಮೂಡಿದೆ. ಇದನ್ನೂ ಓದಿ: ಹಾಸನದ ಮಲೆನಾಡು ಭಾಗದಲ್ಲೂ ಮಳೆಯಬ್ಬರ; ಶಿರಾಡಿಘಾಟ್‌ನಲ್ಲಿ ಸರಣಿ ಭೂಕುಸಿತ – ಬೆಂಗಳೂರು, ಮಂಗಳೂರು ಸಂಚಾರ ಬಂದ್