ಕೇರಳ ಚಿತ್ರೋದ್ಯಮದಲ್ಲಿ ಭಾರೀ ವಿವಾದಕ್ಕೆ (Controversy) ಕಾರಣವಾಗಿರುವ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾವನ್ನು ನಿಷೇಧ ಮಾಡಲೇಬೇಕು ಎಂದು ಅನೇಕ ಸಂಘಟನೆಗಳು ಸರಕಾರದ ಮೇಲೆ ಒತ್ತಡ ಹೇರಿವೆ. ಕಾನೂನಾತ್ಮಕವಾಗಿ ತಡೆಹಿಡಿಯಲು ಸಾಧ್ಯವಾಗುತ್ತಿಲ್ಲವಾದ್ದರಿಂದ ಸರಕಾರ ಮಧ್ಯ ಪ್ರವೇಶಿಸಿ ಕೋಮುಗಲಭೆ ಸೃಷ್ಟಿಸುವ ಇಂತಹ ಚಿತ್ರವನ್ನು ತಡೆಯಬೇಕು ಎಂದು ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳು ಮುತ್ತು ಮುಸ್ಲಿಂ (Muslim) ಸಂಘಟನೆಗಳು ಸರಕಾರಕ್ಕೆ ಒತ್ತಡ ಹಾಕಿವೆ.
Advertisement
ಈ ನಡುವೆಯೇ ನಾಳೆ ದೇಶಾದ್ಯಂತ ದಿ ಕೇರಳ ಸ್ಟೋರಿ ಸಿನಿಮಾ ರಿಲೀಸ್ ಆಗುತ್ತಿದ್ದು, ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಏಕಕಾಲಕ್ಕೆ ಬಿಡುಗಡೆ ಆಗುತ್ತಿದೆ. ಚಿತ್ರ ಬಿಡುಗಡೆಗೆ ಸರ್ವರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಅಲ್ಲದೇ ನಿನ್ನೆಯಷ್ಟೇ ಜೆ.ಎನ್.ಯುನಲ್ಲಿ ಚಿತ್ರದ ಪ್ರದರ್ಶನ ಕೂಡ ನಡೆದಿದೆ. ಇದರ ವಿರುದ್ಧ ಪ್ರತಿಭಟನೆ ಕೂಡ ಮಾಡಲಾಗಿದೆ. ಇದನ್ನೂ ಓದಿ:ಫ್ಯಾಷನ್ ಡಿಸೈನರ್ ಅಪರ್ಣಾ ಸಮಂತಾ ಜೊತೆ ಜೆಕೆ ಎಂಗೇಜ್
Advertisement
Advertisement
ಈಗಾಗಲೇ ವಿವಾದಕ್ಕೆ ಕಾರಣವಾಗುವಂತಹ ಮತ್ತು ಆಕ್ಷೇಪಕ್ಕೆ ಗುರಿಯಾಗಿರುವ ಹಲವು ದೃಶ್ಯಗಳಿಗೆ ಸೆನ್ಸಾರ್ ಮಂಡಳಿಯು ಕತ್ತರಿ ಹಾಕಿದೆ. ಬರೋಬ್ಬರಿ 10 ದೃಶ್ಯಗಳಿಗೆ ಕತ್ತರಿ ಹಾಕುವ ಮೂಲಕ ಚಿತ್ರತಂಡಕ್ಕೆ ಶಾಕ್ ನೀಡಿದೆ. ಅಲ್ಲದೇ ಚಿತ್ರಕ್ಕೆ ‘ಎ’ ಪ್ರಮಾಣ ಪತ್ರವನ್ನು ನೀಡಿದೆ. ಮಾಜಿ ಸಿಎಂ ಒಬ್ಬರ ಸಂದರ್ಶನ, ಕೆಲ ಸಂಭಾಷಣೆಗಳು ಹಾಗೂ ಕಮ್ಯುನಿಸ್ಟ್ ಪಕ್ಷದವರ ಬಗ್ಗೆ ಆಡಿದ ಮಾತುಗಳಿಗೆ ಸೆನ್ಸಾರ್ ಮಂಡಳಿಯು ಕತ್ತರಿ ಹಾಕಿದೆ.
Advertisement
ಕಳೆದ ಎರಡು ವಾರಗಳಿಂದ ‘ದಿ ಕೇರಳ ಸ್ಟೋರಿ’ ಸಿನಿಮಾದ ಬಗ್ಗೆ ಸಾಕಷ್ಟು ಪರ ವಿರೋಧದ ಮಾತು ಕೇಳಿ ಬರುತ್ತಿದೆ. ಈ ಸಿನಿಮಾದಲ್ಲಿರುವುದು ಸತ್ಯ ಎಂದು ಚಿತ್ರತಂಡ ಹೇಳಿಕೊಂಡರೆ, ಅದು ಕಪೋಕಲ್ಪಿತ ಕಥೆ ಎಂದು ಹಲವರು ವಾದಿಸುತ್ತಿದ್ದಾರೆ. ಈ ಸಿನಿಮಾ ಪ್ರದರ್ಶನಕ್ಕೆ ತಡೆಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲು ಕೂಡ ಏರಲಾಗಿತ್ತು. ಆದರೆ, ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ಸುಪ್ರೀಂ ನಿರಾಕರಿಸಿತ್ತು. ಹೈಕೋರ್ಟ್ ಗೆ ಹೋಗಲು ಸೂಚನೆ ನೀಡಿತ್ತು. ಇಷ್ಟೆಲ್ಲ ಬೆಳವಣಿಗೆ ಮಧ್ಯಯೇ ಮತ್ತೊಂದು ಸವಾಲು ಘೋಷಣೆ ಆಗಿದೆ.
ಈ ಸಿನಿಮಾದಲ್ಲಿಯ ಮಾಹಿತಿಯು ನಿಜ ಅಂತ ಸಾಬೀತು ಪಡಿಸಿದರೆ ಒಂದು ಕೋಟಿ ರೂಪಾಯಿ ಬಹುಮಾನ ಕೊಡುವುದಾಗಿ ಮುಸ್ಲಿಂ ಯೂತ್ ಲೀಗ್ ಕೇರಳ ರಾಜ್ಯ ಕಮಿಟಿಯು ಘೋಷಿಸಿದೆ. ಸಿನಿಮಾದಲ್ಲಿ ಸುಳ್ಳುಗಳ ಸರಮಾಲೆಯೇ ಇದೆ. ಅವರು ಹೇಳುತ್ತಿರುವುದು ನಿಜ ಎಂದು ಸಾಬೀತು ಪಡಿಸಲಿ ಎಂದು ಹೇಳಿಕೆ ನೀಡಿದೆ.