ಹೆಚ್ಚಿದ ತುಂಗಭದ್ರಾ ನೀರಿನ ಮಟ್ಟ – ಜಾನುವಾರು ಮೈತೊಳೆಯಲು ತೆರಳಿದ್ದ ಯುವಕ ನೀರುಪಾಲು

Public TV
1 Min Read
Tungabhadra River

ದಾವಣಗೆರೆ: ತುಂಗಭದ್ರಾ ನದಿ (Tungabhadra River) ನೀರಿನ ಮಟ್ಟ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜಾನುವಾರು ಮೈತೊಳೆಯಲು ಹೋಗಿದ್ದ ಯುವಕ ನೀರುಪಾಲಾದ ಘಟನೆ ದಾವಣಗೆರೆಯಲ್ಲಿ (Davanagere) ನಡೆದಿದೆ.

ಹರಿಹರ (Harihara) ತಾಲೂಕಿನ ಧೂಳೆಹೊಳೆ ಗ್ರಾಮದ ಬಳಿಯ ತುಂಗಭದ್ರಾ ನದಿಯಲ್ಲಿ ಘಟನೆ ನಡೆದಿದ್ದು, ಇಂಗಳಗೊಂದಿ ಜಯಪ್ಪ (32) ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ನದಿ ನೀರಿನ ಮಟ್ಟ ಹೆಚ್ಚಾಗಿದ್ದನ್ನು ಗಮನಿಸದೆ ಜಯಪ್ಪ ನದಿಗಿಳಿದು ಜಾನುವಾರುಗಳ ಮೈತೊಳೆಯಲು ಮುಂದಾಗಿದ್ದರು. ಇದ್ದಕ್ಕಿದ್ದಂತೆ ನೀರಿನ ಸೆಳೆತಕ್ಕೆ ಸಿಲುಕಿ ನೀರಿನಲ್ಲಿ ಕೊಚ್ಚಿಹೋಗಿದ್ದಾರೆ. ಇದನ್ನೂ ಓದಿ: ಬಾಂಗ್ಲಾದಲ್ಲಿ ನಿಯಂತ್ರಣಕ್ಕೆ ಬಾರದ ಹಿಂಸಾಚಾರ – ಕಂಡಲ್ಲಿ ಗುಂಡು ಹಾರಿಸಲು ಸೂಚನೆ

ಧೂಳೆಹೊಳೆಯಿಂದ 2 ಕಿಲೋ ಮೀಟರ್ ದೂರದಲ್ಲಿ ಶವ ಪತ್ತೆಯಾಗಿದೆ. ಈ ಕುರಿತು ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಕೆಆರ್‌ಎಸ್ ಡ್ಯಾಂ ಭರ್ತಿಗೆ ಕೇವಲ 2 ಅಡಿಯಷ್ಟೇ ಬಾಕಿ

Share This Article