ಹೈದರಾಬಾದ್: ವೆಸ್ಟ್ ಇಂಡೀಸ್ ವಿರುದ್ಧ ತವರಿನಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಆಟಗಾರರು ಭಾರತದ ಕೋಗಿಲೆ ಎಂದೇ ಹೆಸರುವಾಸಿಯಾದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ನಿಧನಕ್ಕೆ ವಿಶೇಷ ಸಂತಾಪ ಸೂಚಿಸಿದ್ದಾರೆ.
Advertisement
ಕೊರೊನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆ ಸೇರಿದ್ದ ಲತಾ ಮಂಗೇಶ್ಕರ್ ಇಂದು ನಿಧನರಾಗಿದ್ದಾರೆ. ಭಾರತದ ಗಾನ ಕೋಗಿಲೆಗೆ ಸಂತಾಪ ಸೂಚಿಸುವ ನಿಟ್ಟಿನಿಟ್ಟಿ ಪಂದ್ಯ ಆರಂಭಕ್ಕೂ ಮೊದಲು ಎಲ್ಲಾ ಆಟಗಾರರು ಮೈದಾನದಲ್ಲಿ ಮೌನಾಚರಣೆ ಮಾಡಿದ್ದಾರೆ. ಬಳಿಕ ಟೀಂ ಇಂಡಿಯಾ ಆಟಗಾರರೆಲ್ಲ ಕೈಗೆ ಕಪ್ಪುಪಟ್ಟಿ ಧರಿಸಿ ಮೈದಾನಕ್ಕಿಳಿದರು. ಇದನ್ನೂ ಓದಿ: ಅಂಡರ್ 19 ವಿಶ್ವಕಪ್ ಗೆದ್ದು ಬೀಗಿದ ಭಾರತ- ಯುವಪಡೆಗೆ ಮೋದಿ ಅಭಿನಂದನೆ
Advertisement
#TeamIndia members observe a minute silence before start of play to pay their respects to Bharat Ratna Sushri Lata Mangeshkar ji.#RIPLataJi pic.twitter.com/YfP02zyiuA
— BCCI (@BCCI) February 6, 2022
Advertisement
ಭಾರತ ಪ್ರವಾಸ ಕೈಗೊಂಡಿರುವ ವೆಸ್ಟ್ ಇಂಡೀಸ್, ಮೂರು ಪಂದ್ಯಗಳ ಏಕದಿನ ಸರಣಿ ಮತ್ತು 3 ಪಂದ್ಯಗಳ ಟಿ20 ಸರಣಿ ಆಡಳಿದೆ. ಇಂದು ಏಕದಿನ ಸರಣಿಯ ಮೊದಲ ಪಂದ್ಯ ಅಹಮದಾಬಾದ್‍ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿದೆ. 20 ಓವರ್‌ಗಳ ಅಂತ್ಯಕ್ಕೆ ವೆಸ್ಟ್ ಇಂಡೀಸ್ 5 ವಿಕೆಟ್ ಕಳೆದುಕೊಂಡು 71 ರನ್ ಗಳಿಸಿದೆ. ಇದನ್ನೂ ಓದಿ: 5ನೇ ಬಾರಿ ಅಂಡರ್-19 ವಿಶ್ವಕಪ್ ಮುಡಿಗೇರಿಸಿಕೊಂಡ ಭಾರತ
Advertisement