ಕ್ವೀನ್ಸ್‌ಲ್ಯಾಂಡ್: ಬೌಲರ್‌ಗಳು ಮ್ಯಾಜಿಕ್ ಬೌಲಿಂಗ್ ಮಾಡಿ 52 ರನ್‌ಗಳ ಅಂತರದಲ್ಲಿ ಆಸ್ಟ್ರೇಲಿಯಾ 9 ವಿಕೆಟ್‌ಗಳನ್ನು ಉರುಳಿಸಿದ್ದರಿಂದ ಭಾರತ 48 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ 2-1 ಮುನ್ನಡೆ ಸಾಧಿಸಿದೆ.
ಟಾಸ್ ಸೋತು ಮೊದಲು ಬ್ಯಾಟ್ ಬೀಸಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 167 ರನ್‌ಗಳ ಗಳಿಸಿತು. 168 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ 18.2 ಓವರ್‌ಗಳಲ್ಲಿ 119 ರನ್‌ಗಳಿಸಿ ಆಲೌಟ್ ಆಯಿತು.
ಹಾಗೆ ನೋಡಿದರೆ 8.4 ಓವರ್‌ಗಳಲ್ಲಿ 67 ರನ್‌ಗಳಿಗೆ 1 ವಿಕೆಟ್ ಕಳೆದುಕೊಂಡು ಆಸ್ಟ್ರೇಲಿಯಾ ಉತ್ತಮ ಸ್ಥಿತಿಯಲ್ಲಿತ್ತು. ಜೋಶ್ ಇಂಗ್ಲಿಸ್ ವಿಕೆಟ್ ಬಿದ್ದ ಬೆನ್ನಲ್ಲೇ ಆಸ್ಟ್ರೇಲಿಯಾ ಪತನ ಆರಂಭವಾಯಿತು.
ಆಸ್ಟ್ರೇಲಿಯಾ ಪರ ಮಿಚೆಲ್ ಮಾರ್ಷ್ 24 ಎಸೆತಗಳಲ್ಲಿ 4 ಬೌಂಡರಿಗಳ ನೆರವಿಂದ 30 ರನ್ ಗಳಿಸಿ ಶಿವಂ ದುಬೆಗೆ ವಿಕೆಟ್ ಒಪ್ಪಿಸಿದರು. ಮ್ಯಾಟ್ ಶಾರ್ಟ್ 19 ಎಸೆತಗಳಲ್ಲಿ 2 ಸಿಕ್ಸರ್ 2 ಬೌಂಡರಿ ನೆರವಿಂದ 25 ರನ್ ಗಳಿಸಿ ಔಟಾದರು.
ಜೋಶ್ ಇಂಗ್ಲಿಸ್ 11 ಎಸೆತಗಳಲ್ಲಿ ಕೇವಲ 12 ರನ್ ರನ್‌ಗಳಿಸಿ ಅಕ್ಸರ್ ಪಟೇಲ್‌ಗೆ ವಿಕೆಟ್ ಒಪ್ಪಿಸಿದರು. ಟಿಮ್ ಡೆವಿಡ್ 9 ಎಸೆತಗಳಲ್ಲಿ 1 ಸಿಕ್ಸರ್ 1 ಬೌಂಡರಿ ಸಿಡಿಸಿ 14 ರನ್ ಕಲೆ ಹಾಕಿ ಪೆವಿಲಿಯನ್‌ಗೆ ಮರಳಿದರು. ಜೋಶ್ ಫಿಲಿಪ್ 10 ಎಸೆತಗಳಲ್ಲಿ ಒಂದು ಬೌಂಡರಿ ಬಾರಿಸಿ 10 ರನ್ ಗಳಿಸಿ ಔಟಾದರು. ಗ್ಲೆನ್ ಮ್ಯಾಕ್ಸ್‌ವೆಲ್ 4 ಎಸೆತಗಳಲ್ಲಿ 2 ರನ್ ಗಳಿಸಿ ಔಟಾಗುವ ಮೂಲಕ ಕಳಪೆ ಪ್ರದರ್ಶನ ನೀಡಿದರು. ಮಾರ್ಕಸ್ ಸ್ಟೊಯಿನಿಸ್ 19 ಎಸೆತಗಳಲ್ಲಿ 2 ಬೌಂಡರಿ ಸಿಡಿಸಿ 17 ರನ್ ಗಳಿಸಿದರು. ಬೆನ್ ದ್ವಾರ್ಶುಯಿಸ್ ಕೇವಲ 5 ರನ್‌ಗೆ ಸುಸ್ತಾದರು.
ಭಾರತದ ಪರ ವಾಷಿಂಗ್ಟನ್ ಸುಂದರ್ 3 ವಿಕೆಟ್ ಕಬಳಿಸಿದರೆ, ಅಕ್ಷರ್ ಪಟೇಲ್, ಶಿವಂ ದುಬೆ ತಲಾ 2 ವಿಕೆಟ್ ಕಿತ್ತರು. ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ ತಲಾ ಒಂದೊಂದು ವಿಕೆಟ್ ಪಡೆದರು.
ಭಾರತದ ಆರಂಭಿಕ ಆಟಗಾರರಾದ ಅಭಿಷೇಕ್ ಶರ್ಮಾ ಹಾಗೂ ಶುಭಮನ್ ಗಿಲ್ ಜೋಡಿ ಜೊತೆಗೂಡಿ 6.4 ಓವರ್‌ಗಳಲ್ಲಿ 56 ರನ್ ಸೇರಿಸಿತು. ಅಭಿಷೇಕ್ ಶರ್ಮಾ 21 ಎಸೆತಗಳಲ್ಲಿ 3 ಬೌಂಡರಿ, 1 ಸಿಕ್ಸರ್ ಸಹಾಯದಿಂದ 28 ರನ್ ಬಾರಿಸಿ ಆಡಂ ಜಂಪಾಗೆ ವಿಕೆಟ್ ಒಪ್ಪಿಸಿದರು. ಶಿವಂ ದುಬೆ 18 ಎಸೆತಗಳಲ್ಲಿ 1 ಬೌಂಡರಿ, 1 ಸಿಕ್ಸರ್ ಸಹಾಯದಿದ 22 ರನ್ ಕಲೆಹಾಕಿ, ನಾತನ್ ಎಲ್ಲಿಸ್‌ಗೆ ವಿಕೆಟ್ ಒಪ್ಪಿಸಿದರು.
ದುಬೆ ಔಟ್ ಆಗುತ್ತಿದ್ದಂತೆ ಕ್ರೀಸ್‌ಗೆ ಬಂದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್, ಆಡಂ ಜಂಪಾ ಅವರು ಎಸೆದ ಇನಿಂಗ್ಸ್‌ನ 13ನೇ ಓವರ್‌ನಲ್ಲಿ ಬ್ಯಾಕ್ ಟು ಬ್ಯಾಕ್ ಸಿಕ್ಸರ್‌ಗಳನ್ನು ಬಾರಿಸಿ ಅಬ್ಬರಿಸಿದರು. ಶುಭಮನ್ ಗಿಲ್ ಹಾಗೂ ಸೂರ್ಯಕುಮಾರ್ ಯಾದವ್ ಜೋಡಿ 16 ಓವರ್‌ಗಳಲ್ಲಿ 33 ರನ್ ಸಿಡಿಸಿತು. ಶುಭಮನ್ ಗಿಲ್ 39 ಎಸೆತಗಳಲ್ಲಿ 4 ಬೌಂಡರಿ, 1 ಸಿಕ್ಸರ್ ಸಹಾಯದಿಂದ 46 ರನ್ ಬಾರಿಸಿ ಔಟ್ ಆದರು. ಸೂರ್ಯಕುಮಾರ್ ಯಾದವ್ 10 ಎಸೆತಗಳಲ್ಲಿ 2 ಸಿಕ್ಸರ್ ಸೇರಿದಂತೆ 20ರನ್ ಬಾರಿಸಿ ಔಟ್ ಆದರು.
ತಿಲಕ್ ವರ್ಮಾ, ಜಿತೇಶ್ ಶರ್ಮಾ ಅವರು ಆಡಂ ಜಂಪಾ ಅವರಿಗೆ ವಿಕೆಟ್ ಒಪ್ಪಿಸಿದರು. ಆಲ್‌ರೌಂಡರ್ ಅಕ್ಷರ್ ಪಟೇಲ್ 11 ಎಸೆತಗಳಲ್ಲಿ 1 ಬೌಂಡರಿ, 1 ಸಿಕ್ಸರ್ ಸಹಾಯದಿಂದ ಅಜೇಯ 21 ರನ್ ಬಾರಿಸಿದರು. ಆಸ್ಟ್ರೇಲಿಯಾ ತಂಡ ಸ್ಲಾಗ್ ಓವರ್‌ಗಳಲ್ಲಿ ಉತ್ತಮ ದಾಳಿ ನಡೆಸಿತು. ಆಸ್ಟ್ರೇಲಿಯಾ ಪರ ನಾತನ್ ಎಲ್ಲಿಸ್ ಹಾಗೂ ಆಡಂ ಜಂಪಾ ತಲಾ 3 ವಿಕೆಟ್ ಕಬಳಿಸಿದರು.

