ಮುಂಬೈ: ಅಕ್ಟೋಬರ್-ನವೆಂಬರ್‌ನಲ್ಲಿ ನಿಗದಿಯಾಗಿರುವ 8ನೇ ಆವೃತ್ತಿಯ ಟಿ20 ವಿಶ್ವಕಪ್‌ಗೂ ಮುನ್ನ ತವರಿನಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 3 ಟಿ20 ಪಂದ್ಯಗಳ ಸರಣಿ ಆಡಲಿದೆ. ಇದರೊಂದಿಗೆ 2023ರಲ್ಲಿ ಆಸೀಸ್ ತಂಡ ಮತ್ತೊಮ್ಮೆ ಭಾರತಕ್ಕೆ ಪ್ರವಾಸ ಕೈಗೊಳ್ಳಲಿದ್ದು, ಫೆಬ್ರವರಿ-ಮಾರ್ಚ್‌ನಲ್ಲಿಯೂ 4 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ ಎಂದು ವರದಿಯಾಗಿದೆ.
Advertisement
ಸದ್ಯ ಆಸ್ಟ್ರೇಲಿಯಾದ ಮುಂದಿನ ಕ್ರಿಕೆಟ್ ಸರಣಿಗಳ ವೇಳಾಪಟ್ಟಿ ಪ್ರಕಾರ, ಆಸೀಸ್ ಸೆಪ್ಟೆಂಬರ್‌ನಲ್ಲಿ ಭಾರತಕ್ಕೆ ಪ್ರವಾಸ ಕೈಗೊಳ್ಳಲಿದ್ದು, 3 ಟಿ20 ಪಂದ್ಯಗಳನ್ನಾಡಲಿದೆ. ಬಳಿಕ ಕೆಲ ದಿನಗಳಲ್ಲೇ ಟಿ20 ವಿಶ್ವಕಪ್ ನಡೆಯಲಿರುವುದರಿಂದ ಉಭಯ ತಂಡಗಳಿಗೂ ಇದು ಮಹತ್ವದ ಸರಣಿ ಎನಿಸಿಕೊಂಡಿದೆ. ಇದನ್ನೂ ಓದಿ: ‘ಸಮ’ಬಲಶಾಲಿಗಳ ಹೋರಾಟದಲ್ಲಿ 62 ರನ್‌ಗಳ ಜಯ – ಪ್ಲೇ ಆಫ್‌ಗೆ ಗುಜರಾತ್ ಟೈಟನ್ಸ್ ಭರ್ಜರಿ ಎಂಟ್ರಿ
Advertisement
ಐಪಿಎಲ್ ಬಳಿಕ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ ಜೂ.9ರಿಂದ 19ರ ವರೆಗೆ ತವರಿನಲ್ಲಿ 5 ಪಂದ್ಯಗಳ ಟಿ20 ಸರಣಿ ಆಡಲಿದ್ದು, ನಂತರ 2 ಪಂದ್ಯಗಳ ಟಿ20 ಸರಣಿಗಾಗಿ ಐರ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಜುಲೈ 1 ರಿಂದ ಇಂಗ್ಲೆಂಡ್ ವಿರುದ್ಧ ಏಕೈಕ ಟೆಸ್ಟ್ ಮತ್ತು 3 ಟಿ20, 3 ಏಕದಿನ ಪಂದ್ಯಗಳನ್ನು ಆಡಬೇಕಿದೆ.
Advertisement
Advertisement
2021ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದ ಆಸ್ಟ್ರೇಲಿಯಾ ಈ ಬಾರಿಯ ವಿಶ್ವಕಪ್ ಟೂರ್ನಿಯ ಆತಿಥ್ಯವನ್ನು ವಹಿಸಿಕೊಳ್ಳಲಿದೆ. ಮುಂದಿನ ತಿಂಗಳ ಜೂನ್-ಜುಲೈನಿಂದಲೇ ವಿವಿಧ ದೇಶದ ತಂಡಗಳೊಂದಿಗೆ ಟಿ20, ಟೆಸ್ಟ್ ಹಾಗೂ ಏಕದಿನ ಇನ್ನಿಂಗ್ಸ್ ಪಂದ್ಯಗಳು ಪ್ರಾರಂಭವಾಗಲಿದ್ದು, 2023ರ ಅಕ್ಟೋಬರ್ – ನವಂಬರ್‌ನಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನೊಂದಿಗೆ ಈ ಆಸ್ಟ್ರೇಲಿಯಾದ ಸರಣಿ ಅಂತ್ಯಗೊಳ್ಳಲಿದೆ. ಇದನ್ನೂ ಓದಿ: ಝೀರೋ.. ಝೀರೋ.. ಝೀರೋ – ಶೂನ್ಯ ಸುತ್ತಿದ ಕೊಹ್ಲಿಗೆ ರಾಕಿಭಾಯ್ ಸ್ಟೈಲ್‌ನಲ್ಲಿ ಟ್ರೋಲ್
ಕಳೆದ ಬಾರಿಯ ಟೂರ್ನಿಯಿಂದ ಲೀಗ್ ಹಂತದಲ್ಲಿಯೇ ಹೊರಬಿದ್ದಿದ್ದ ಟೀಂ ಇಂಡಿಯಾ ಈ ಬಾರಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಕಣಕ್ಕಿಳಿದು ಟ್ರೋಫಿ ಗೆಲ್ಲುವತ್ತ ಚಿತ್ತ ಹರಿಸಿದೆ.
2020ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದಿದ್ದ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಭಾರತ ಆಸ್ಟ್ರೇಲಿಯಾವನ್ನು 2 – 1 ಅಂತರದಲ್ಲಿ ಸೋಲಿಸಿ ಸರಣಿಯನ್ನು ವಶಪಡಿಸಿಕೊಂಡಿತ್ತು. ಇಂಡಿಯಾ-ಆಸಿಸ್ ನಡುವೆ ಇದುವರೆಗೆ ಒಟ್ಟು 23 ಟಿ20 ಪಂದ್ಯಗಳು ನಡೆದಿದ್ದು ಈ ಪೈಕಿ ಭಾರತ 13 ಪಂದ್ಯಗಳಲ್ಲಿ ಗೆದ್ದಿದ್ದರೆ, ಆಸ್ಟ್ರೇಲಿಯಾ 9 ಪಂದ್ಯಗಳಲ್ಲಿ ಗೆದ್ದಿದೆ ಉಳಿದ ಒಂದು ಪಂದ್ಯಗಳಲ್ಲಿ ಫಲಿತಾಂಶ ಕಾಣದೇ ಅಂತ್ಯಗೊಂಡಿದೆ.